ಮುಂಡಗೋಡ ತಾಲ್ಲೂಕಿನ ಲೊಯೋಲಾ ಪ್ರೌಢಶಾಲೆಯ ಕಿರಣ ಟೋಪೋಜಿ ಎನ್ನುವ ದೈಹಿಕ ಶಿಕ್ಷಕ ಅಪ್ರಾಪ್ತ ವಿದ್ಯಾರ್ಥಿನಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎನ್ನುವ ಗಂಭೀರ ಆರೋಪದ ಹಿನ್ನೆಲೆ, ವಿದ್ಯಾರ್ಥಿನಿಯ ಕುಟುಂಬದವರು ಮುಂಡಗೋಡ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪೊಲೀಸರಿಂದ ಫೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.

ಕುಟುಂಬದವರ ದೂರಿನ ಪ್ರಕಾರ, ಆರೋಪಿತನು ವಿದ್ಯಾರ್ಥಿನಿಯ ಮನೆಗೆ ಯಾರು ಇಲ್ಲದ ಸಂದರ್ಭಗಳನ್ನು ಬಳಸಿಕೊಂಡು ಆಗಾಗ ಮನೆಗೆ ಬಂದು, ವಿದ್ಯಾರ್ಥಿನಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗುತ್ತಿದ್ದನೆಂದು ದೂರಿನಲ್ಲಿ ಹೇಳಲಾಗಿದೆ. ಈ ಬಗ್ಗೆ ಯಾರಿಗಾದರೂ ತಿಳಿಸಿದರೆ ಜೀವ ತೆಗೆಯುತ್ತೆನೆ ಎಂದು ಬೆದರಿಕೆ ಹಾಕಿದ್ದಾನೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಈ ಸುದ್ದಿ ಓದಿದ್ದೀರಾ? ಮುಂಡಗೋಡ | ಅಕ್ರಮವಾಗಿ ಮದ್ಯ ಮಾರಾಟ ಹೆಚ್ಚಳ: ಅಬಕಾರಿ ಇಲಾಖೆಯ ನಿರ್ಲಕ್ಷ್ಯಕ್ಕೆ ಬಡ ಕುಟುಂಬಗಳು ಬೀದಿಪಾಲು
ದೂರು ಸ್ವೀಕರಿಸಿದ ಪೊಲೀಸರು ತಕ್ಷಣ ಪ್ರಕರಣ ದಾಖಲಿಸಿಕೊಂಡು, ಆರೋಪಿ ಕಿರಣ ಟೋಪೋಜಿಯನ್ನು ಬಂಧಿಸಿ ತನಿಖೆ ಕೈಗೊಂಡಿದ್ದಾರೆ. ಈ ಘಟನೆ ಬೆಳಕಿಗೆ ಬಂದ ನಂತರ, ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದ್ದು, ಶಾಲಾ ಮಕ್ಕಳ ಸುರಕ್ಷತೆ ಬಗ್ಗೆ ಗಂಭೀರ ಪ್ರಶ್ನೆಗಳು ಎದ್ದಿವೆ.





