ಮುಂಡಗೋಡ | ಕಳಚಿದ ಕಬ್ಬಿನ ಟ್ರೈಲರ್ ಕೊಂಡಿ – ಕೂದಲೆಳೆ ಅಂತರದಲ್ಲಿ ತಪ್ಪಿದ ಭೀಕರ ದುರಂತ!

Date:

ಮುಂಡಗೋಡ: ಪಟ್ಟಣದ ಯಲ್ಲಾಪುರ ರಸ್ತೆಯ ಪೋಸ್ಟ್ ಆಫೀಸ್ ಸಮೀಪ ಕಬ್ಬು ತುಂಬಿದ ಟ್ರಾಕ್ಟರ್ ಟ್ರೈಲರ್‌ನ ಕೊಂಡಿ ಕಳಚಿ ಪಲ್ಟಿಯಾದ ಘಟನೆ ನಡೆದಿದೆ. ಅದೃಷ್ಟವಶಾತ್ ಈ ಅಪಘಾತದಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲವಾದರೂ, ಸಾರ್ವಜನಿಕರಲ್ಲಿ ಆತಂಕ ಮನೆಮಾಡಿದೆ.

ಘಟನೆಯ ವಿವರ: ಡಬಲ್ ಟ್ರೈಲರ್‌ನಲ್ಲಿ ಅತಿಯಾದ ಕಬ್ಬು ತುಂಬಿಕೊಂಡು ಸಾಗುತ್ತಿದ್ದ ಟ್ರಾಕ್ಟರ್, ಯಲ್ಲಾಪುರ ರಸ್ತೆಯ ಮಸೀದಿ ಬಳಿ ಸಂಚರಿಸುತ್ತಿದ್ದಾಗ ಹಠಾತ್ತಾಗಿ ಟ್ರೈಲರ್‌ನ ಕೊಂಡಿ ಕಳಚಿಕೊಂಡಿದೆ. ನಿಯಂತ್ರಣ ತಪ್ಪಿದ ಟ್ರೈಲರ್ ಹಿಂಬದಿಗೆ ಚಲಿಸಿ ರಸ್ತೆಯಲ್ಲೇ ಪಲ್ಟಿಯಾಗಿದೆ.

ಪರಿಣಾಮವಾಗಿ ರಸ್ತೆಯ ಉದ್ದಕ್ಕೂ ಕಬ್ಬು ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದು, ಈ ಕಬ್ಬಿನ ರಾಶಿಯ ಅಡಿಯಲ್ಲಿ ಎರಡು-ಮೂರು ಬೈಕ್‌ಗಳು ಸಿಲುಕಿಕೊಂಡಿರುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ. ಒಂದು ವೇಳೆ ಜನನಿಬಿಡ ಪ್ರದೇಶವಾದ ಇಲ್ಲಿ ವಾಹನ ಸವಾರರು ಅಥವಾ ಪಾದಚಾರಿಗಳು ಹತ್ತಿರದಲ್ಲೇ ಇದ್ದಿದ್ದರೆ ದೊಡ್ಡ ಮಟ್ಟದ ಜೀವಹಾನಿಯಾಗುವ ಸಂಭವವಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
1000425148

ಇತ್ತೀಚಿನ ದಿನಗಳಲ್ಲಿ ಮುಂಡಗೋಡ ಪಟ್ಟಣದಲ್ಲಿ ಕಬ್ಬು ಸಾಗಿಸುವ ಟ್ರಾಕ್ಟರ್‌ಗಳ ಹಾವಳಿ ಮಿತಿಮೀರಿದೆ ಎಂಬುದು ಸಾರ್ವಜನಿಕರ ದೂರು. ಸಾಮರ್ಥ್ಯಕ್ಕಿಂತ ಅಧಿಕ ಭಾರವನ್ನು (Overload) ಹೊತ್ತು, ಎರಡು ಟ್ರೈಲರ್‌ಗಳನ್ನು ಜೋಡಿಸಿಕೊಂಡು ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಸಂಚರಿಸುವುದು ಅಪಘಾತಗಳಿಗೆ ಆಹ್ವಾನ ನೀಡಿದಂತಾಗಿದೆ.

ಕಬ್ಬಿನ ಟ್ರಾಕ್ಟರ್‌ಗಳು ರಸ್ತೆಗೆ ಬಂದರೆ ಸಾಕು, ಬೈಕ್ ಸವಾರರು ತಮ್ಮ ಜೀವವನ್ನು ಕೈಯಲ್ಲಿ ಹಿಡಿದು ಓಡಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಸದ್ಯ ಮುಂಡಗೋಡಿನ ಟಿಬೆಟಿಯನ್ ಕ್ಯಾಂಪ್‌ಗೆ ಬೌದ್ಧ ಧರ್ಮಗುರು ದಲೈ ಲಾಮಾ ಅವರ ಆಗಮನವಾಗಿರುವುದರಿಂದ, ಅವರನ್ನು ನೋಡಲು ಸಾವಿರಾರು ಭಕ್ತರು ಮತ್ತು ಪ್ರವಾಸಿಗರು ಆಗಮಿಸುತ್ತಿದ್ದಾರೆ.

ಈ ಸುದ್ದಿ ಓದಿದ್ದೀರಾ ? ಶಿರಸಿ | ಅಸ್ಪೃಶ್ಯತೆ ಆಚರಣೆ ಆರೋಪ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಸಮಾಜ ಕಲ್ಯಾಣ ಇಲಾಖೆಯಿಂದ ಡಿವೈಎಸ್‌ಪಿಗೆ ಪತ್ರ

ಇದರಿಂದಾಗಿ ಪಟ್ಟಣದಲ್ಲಿ ಸಾಮಾನ್ಯ ದಿನಗಳಿಗಿಂತಲೂ ಹೆಚ್ಚಿನ ವಾಹನ ದಟ್ಟಣೆ ಇದೆ. ಇಂತಹ ಬಿಗುವಿನ ಸಂದರ್ಭದಲ್ಲಿ ಕಬ್ಬಿನ ಟ್ರಾಕ್ಟರ್‌ಗಳು ಈ ರೀತಿ ಅವಘಡ ಎಸಗುತ್ತಿರುವುದು ಆತಂಕದ ಸಂಗತಿಯಾಗಿದೆ.

ಈ ಕೂಡಲೇ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಮತ್ತು ಆರ್‌ಟಿಒ (RTO) ಅಧಿಕಾರಿಗಳು ಎಚ್ಚೆತ್ತುಕೊಳ್ಳಬೇಕಿದೆ. ಕಬ್ಬು ಸಾಗಿಸುವ ಟ್ರಾಕ್ಟರ್‌ಗಳಿಗೆ ಪ್ರತ್ಯೇಕ ಸಮಯವನ್ನು ನಿಗದಿಪಡಿಸಬೇಕು ಹಾಗೂ ಅತಿಯಾದ ಲೋಡ್ ಹಾಕದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಸಾರ್ವಜನಿಕರ ಹಿತದೃಷ್ಟಿಯಿಂದ ಅಪಾಯಕಾರಿ ಸಂಚಾರಕ್ಕೆ ಬ್ರೇಕ್ ಹಾಕಿ, ಮುಂದಾಗುವ ಭೀಕರ ಅನಾಹುತಗಳನ್ನು ತಪ್ಪಿಸಬೇಕೆಂದು ನಾಗರಿಕರು ಆಗ್ರಹಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...