ಕರ್ನಾಟಕ ಆಕ್ಸೆಸಿಬಿಲಿಟಿ ಟಾಸ್ಕ್ ಫೋರ್ಸ್‌ನ ರಾಜ್ಯಾಧ್ಯಕ್ಷರಾಗಿ ಮುನಿರಾಜು ಆಯ್ಕೆ

Date:

ವಿಕಲಚೇತನರಿಗಿಂತ ಹೆಚ್ಚಾಗಿ ಸಭ್ಯ ಸಮಾಜಕ್ಕೆ ಆಕ್ಸೆಸಿಬಿಲಿಟಿ ಕುರಿತು ತಿಳಿ ಹೇಳಬೇಕಾದ ಅಗತ್ಯತೆ ಅಧಿಕವಾಗಿದೆ ಎಂದು ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷ ಸಿ.ಎಸ್ ದ್ವಾರಕಾನಾಥ್‌ ತಿಳಿಸಿದರು.

ದಿ ಅಸೋಸಿಯೇಷನ್ ಆಫ್ ಪೀಪಲ್ ವಿತ್ ಡಿಸೆಬಿಲಿಟಿ ಕಾರ್ಯಕರ್ತರು ಬೆಂಗಳೂರಿನಲ್ಲಿ ಜುಲೈ 13ರಿಂದ 15ರವರೆಗೆ ಆಯೋಜಿಸಲಾಗಿದ್ದ ಮೂರು ದಿನಗಳ ರಾಜ್ಯಮಟ್ಟದ ಆಕ್ಸೆಸಿಬಿಲಿಟಿ(ಸುಲಭ ಲಭ್ಯತೆ) ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.

ವೇಳೆ ರಾಜ್ಯ ವಿಕಲಚೇತನರ ಆಯೋಗದ ಆಯುಕ್ತೆ ಲತಾ ಕುಮಾರಿ ಎಸ್‌‌ ಅವರು ವಿಕಲಚೇತನರ ಕುರಿತು ಸಮಾಜದಲ್ಲಿರುವ ತಿರಸ್ಕಾರ ಭಾವದ ಬಗ್ಗೆ ಬೇಸರ ವ್ಯಕ್ತಪಡಿಸಿದರು‌ ಹಾಗೂ ವಿಕಲಚೇತನರು ಆರ್ಥಿಕವಾಗಿ ಸಶಕ್ತರಾಗಿ ನಿಲ್ಲಬೇಕೆಂದು ಕರೆ ನೀಡಿದರು‌.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮುನಿರಾಜು ನೂತನ ರಾಜ್ಯಾಧ್ಯಕ್ಷ

ಕರ್ನಾಟಕ ಆಕ್ಸೆಸಿಬಿಲಿಟಿ ಟಾಸ್ಕ್ ಫೋರ್ಸ್‌ನ ನೂತನ ರಾಜ್ಯಾಧ್ಯಕ್ಷರಾಗಿ ಚಿಕ್ಕಬಳ್ಳಾಪುರದ ಮುನಿರಾಜು ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ರಾಯಚೂರಿನ ಸುರೇಶ್ ಭಂಡಾರಿ ಆಯ್ಕೆಯಾದರು. ಉಪಾಧ್ಯಕ್ಷ ಯಶೋಧಾ ಇಳಕಲ್, ಖಜಾಂಜಿ ಬಳ್ಳಾರಿಯ ಉಮಾಪತಿಗೌಡ ಮತ್ತು ಗೌರವಾಧ್ಯಕ್ಷರಾಗಿ ಬಿಜಾಪುರದ ಸಬೀಹಾ ಬೇಗಂ ಆಯ್ಕೆಯಾದರು‌.

ಆಕ್ಸೆಸಿಬಿಲಿಟಿ ಟಾಸ್ಕ್ ಫೋರ್ಸ್‌ನ ಜಿಲ್ಲಾವಾರು ಅಧ್ಯಕ್ಷರ ನೇಮಕ

ಕೆ ಪಿ ರವಿ- ಚಿಕ್ಕಬಳ್ಳಾಪುರ ಜಿಲ್ಲೆ, ಎಲ್ಲಮ್ಮ ಮಡಿವಾಳ- ವಿಜಯಪುರ ಜಿಲ್ಲೆ, ಹುಸೇನ್ ಸಾಬ್ ಮುದಗಲ್- ಬಾಗಲಕೋಟೆ ಜಿಲ್ಲೆ, ಗಾಯತ್ರಿ- ಕಲಬುರಗಿ ಜಿಲ್ಲೆ, ತಬಸ್ಸುಮ್- ದಾವಣಗೆರೆ ಜಿಲ್ಲೆ, ಎಂ ಡಿ ಜಾಫರ್- ರಾಯಚೂರು ಜಿಲ್ಲೆ, ಬೀಮಪ್ಪ- ವಿಜಯನಗರ ಜಿಲ್ಲೆ, ಸುನೀಲ್- ಯಾದಗಿರಿ ಜಿಲ್ಲೆ, ಕ್ರಿಸ್ಟಲ್ ಪ್ರಭಾ- ಬೆಂಗಳೂರು ಹಾಗೂ ರಮೇಶ್‌ರವರು ಕೋಲಾರ ಜಿಲ್ಲಾ ಆಕ್ಸೆಸಿಬಿಲಿಟಿ ಟಾಸ್ಕ್ ಫೋರ್ಸ್‌ನ ಜಿಲ್ಲಾವಾರು ಅಧ್ಯಕ್ಷರಾಗಿ ನೇಮಕವಾದರು‌.

ಈ ಸುದ್ದಿ ಓದಿದ್ದೀರಾ? ಗದಗ | ‌ಶೋಷಣೆ ವಿರುದ್ಧ ದನಿ ಎತ್ತಲು ಧೈರ್ಯ ಬರಬೇಕಾದರೆ ಉನ್ನತ ಶಿಕ್ಷಣ ಪಡೆಯಬೇಕು: ವಿಠ್ಠಲ್‌ ವಗ್ಗನ್

ಇದೇ ವೇಳೆ, ಕರ್ನಾಟಕ ಆಕ್ಸೆಸಿಬಿಲಿಟಿ ಟಾಸ್ಕ್ ಫೋರ್ಸ್‌ನ ನೂತನ ಪದಾಧಿಕಾರಿಗಳು ಹಾಗೂ ಸಕ್ರಿಯ ಕಾರ್ಯಕರ್ತರನ್ನು ಕಾರ್ಯಾಗಾರದಲ್ಲಿ ಸನ್ಮಾನಿಸಲಾಯಿತು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...