ಬಿಬಿಎಂಪಿ ಕಂದಾಯ ವಿಶೇಷ ಆಯುಕ್ತರಾಗಿ ​​ಮನೀಶ್ ಮೌದ್ಗಿಲ್ ನೇಮಕ

Date:

ಐಎಎಸ್​​ ಅಧಿಕಾರಿ ಮನೀಶ್ ಮೌದ್ಗಿಲ್ ಸೇರಿದಂತೆ 6 ಐಎಎಸ್ ಅಧಿಕಾರಿಗಳಿಗೆ ಬೃಹತ್​ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ (ಬಿಬಿಎಂಪಿ) ಹೆಚ್ಚುವರಿ ಜವಾಬ್ದಾರಿ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಆಡಳಿತ ಸುಧಾರಣೆ ಇಲಾಖೆಯ ಪ್ರಧಾನ ಕಾರ್ಯದರ್ಶಿ ಮನೀಶ್ ಮೌದ್ಗಿಲ್ ಅವರನ್ನು ಪಾಲಿಕೆಯ ಕಂದಾಯ ವಿಭಾಗದ ವಿಶೇಷ ಆಯುಕ್ತರನ್ನಾಗಿ ನೇಮಕ ಮಾಡಿ ರಾಜ್ಯ ಸರ್ಕಾರ ಬುಧವಾರ ಆದೇಶ ಹೊರಡಿಸಿದೆ.

ಜತೆಗೆ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಕಾರ್ಯಕಾರಿ ನಿರ್ದೇಶಕಿ ವಿನೋತ್ ಪ್ರಿಯಾ ಆರ್. ಅವರನ್ನು ಪಾಲಿಕೆಯ ದಕ್ಷಿಣ ವಲಯ ಆಯುಕ್ತೆಯನ್ನಾಗಿ ವರ್ಗಾವಣೆ ಮಾಡಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಟಲ್ ಜನಸ್ನೇಹಿ ಕೇಂದ್ರದ ನಿರ್ದೇಶಕ ಕರೀಗೌಡ ಅವರನ್ನು ಬಿಬಿಎಂಪಿ ಯಲಹಂಕ ವಲಯ ಆಯುಕ್ತರನ್ನಾಗಿ ಹಾಗೂ ಬೆಂಗಳೂರು ಮಹಾನಗರ ಸಾರಿಗೆ ನಿಗಮದ ನಿರ್ದೇಶಕಿ(ಐಟಿ) ಸ್ನೇಹಲ್ ಆರ್. ಅವರನ್ನು ಬಿಬಿಎಂಪಿ ಪೂರ್ವ ವಲಯ ಆಯುಕ್ತೆಯನ್ನಾಗಿ ವರ್ಗಾವಣೆ ಮಾಡಲಾಗಿದೆ.

ಬಿಬಿಎಂಪಿ ವಿಶೇಷ ಆಯುಕ್ತೆ (ಎಸ್ಟೇಟ್ಸ್) ಪ್ರೀತಿ ಗೆಹ್ಲೋಟ್ ಅವರನ್ನು ಪಾಲಿಕೆಯ ದಾಸರಹಳ್ಳಿ ವಲಯ ಆಯುಕ್ತೆಯನ್ನಾಗಿ ಹಾಗೂ ರಿಯಲ್ ಎಸ್ಟೇಟ್ ರೆಗ್ಯುಲೇಟರಿ ಪ್ರಾಧಿಕಾರ (ರೇರಾ) ಕಾರ್ಯದರ್ಶಿ ಇಬ್ರಾಹೀಂ ಮೈಗೂರ್ ಅವರನ್ನು ಪಾಲಿಕೆಯ ಮಹದೇವಪುರ ವಲಯ ಆಯುಕ್ತರನ್ನಾಗಿ ವರ್ಗಾವಣೆ ಮಾಡಲಾಗಿದೆ.

ಈ ಸುದ್ದಿ ಓದಿದ್ದೀರಾ? ಮಧ್ಯಾಹ್ನದ ನಂತರ ಬೆಂಗಳೂರಿನಲ್ಲಿ ಭಾರೀ ಮಳೆ; ನಿಧಾನಗತಿ ಸಂಚಾರ

ಮನೀಶ್ ಮೌದ್ಗಿಲ್ಅವರು 1998 ಬ್ಯಾಚ್ ಐಎಎಸ್ ಅಧಿಕಾರಿ. ಹಿಂದೆ ಸರ್ವೆ, ಸೆಟ್ಲ್ಮೆಂಟ್ ಮತ್ತು ಭೂ ದಾಖಲೆಗಳ ಆಯುಕ್ತ ಸೇರಿದಂತೆ ಹಲವು ಹುದ್ದೆಗಳಲ್ಲಿ ಕೆಲಸ ಮಾಡಿದ್ದಾರೆ. ಜೂನ್ 2008 ರಿಂದ ಜೂನ್ 2009 ರವರೆಗೆ ರಾಮನಗರದ ಜಿಲ್ಲಾಧಿಕಾರಿಯಾಗಿದ್ದರು. 

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...