BREAKING NEWS | ಪೋಕ್ಸೊ ಪ್ರಕರಣ: ಮುರುಘಾ ಶ್ರೀ ಖುಲಾಸೆಗೊಳಿಸಿದ ಕೋರ್ಟ್‌

Date:

ಪೋಕ್ಸೋ ಪ್ರಕರಣದಲ್ಲಿ ಮುರುಘಾ ಶ್ರೀ ಅವರನ್ನು ಚಿತ್ರದುರ್ಗದ ಎರಡನೇ ಜಿಲ್ಲಾ ಅಪರ ಮತ್ತು ಸತ್ರ ಕೋರ್ಟ್‌ ಖುಲಾಸೆಗೊಳಿಸಿದೆ. ಸತತ ಮೂರು ವರ್ಷಗಳ ಕಾಲ ಈ ಪ್ರಕರಣದ ವಿಚಾರಣೆ ನಡೆದಿದ್ದು ಇಂದು ತೀರ್ಪು ಹೊರಬಿದ್ದಿದೆ.

ದಾವಣಗೆರೆಯ ವಿರಕ್ತ ಮಠದಿಂದ ಬಿಗಿ ಭದ್ರತೆಯ ನಡುವೆ ಶಿವಮೂರ್ತಿ ಮುರುಘಾ ಶ್ರೀ ಕೋರ್ಟ್‌ಗೆ ಹಾಜರಾಗಿದ್ದರು. ನ್ಯಾಯಾಧೀಶರಾದ ಗಂಗಾಧರ್‌ ಚನ್ನಬಸಪ್ಪ ಹಡಪದ ತೀರ್ಪು ಪ್ರಕಟಿಸಿದೆ.

ಇದನ್ನು ಓದಿದ್ದೀರಾ? ಮುರುಘಾ ಮಠದ ಅಧಿಕಾರ ಮತ್ತೆ ಅತ್ಯಾಚಾರ ಆರೋಪಿ ಮುರುಘಾಶ್ರೀ ಕೈಗೆ!

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮುರುಘಾ ಶ್ರೀ ಲೈಂಗಿಕ ಕಿರುಕುಳ ನೀಡಿರುವುದಾಗಿ ಮುರುಘಾ ಮಠದ ಹಾಸ್ಟೆಲ್‌ನ ಇಬ್ಬರು ಅಪ್ರಾಪ್ತ ವಿದ್ಯಾರ್ಥಿನಿಯರು ಆರೋಪಿಸಿದ್ದರು. ಈ ಸಂಬಂಧ 2022ರ ಆಗಸ್ಟ್ 26ರಂದು ಮೈಸೂರಿನ ನಜರಾಬಾದ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿತ್ತು. ಅದೇ ವರ್ಷ ಆಗಸ್ಟ್ 27ರಂದು ಈ ಪ್ರಕರಣ ಚಿತ್ರದುರ್ಗ ಗ್ರಾಮಾಂತರ ಠಾಣೆಗೆ ವರ್ಗಾವಣೆಯಾಗಿತ್ತು.

ಪ್ರಕರಣದಲ್ಲಿ ಮುರುಘಾ ಶ್ರೀ ಎ1 ಆರೋಪಿ, ಲೇಡಿ ವಾರ್ಡನ್ ರಶ್ಮಿ ಎ2 ಆರೋಪಿ, ಬಸವಾದಿತ್ಯ ಎ3, ಮ್ಯಾನೇಜರ್ ಪರಮಶಿವಯ್ಯ ಎ4 ಮತ್ತು ವಕೀಲ ಗಂಗಾಧರಯ್ಯ ಎ5 ಆರೋಪಿಯಾಗಿದ್ದಾರೆ.

ಈ ಪ್ರಕರಣದಲ್ಲಿ 2022ರ ಸೆ.1ರಂದು ಮುರುಘಾ ಶ್ರೀ, ವಾರ್ಡನ್ ರಶ್ಮಿ ಬಂಧನಕ್ಕೆ ಒಳಗಾಗಿದ್ದರು. ಬಳಿಕ ಜಾಮೀನಿನಲ್ಲಿ ಬಿಡುಗಡೆಯಾಗಿದ್ದರು.

ಇನ್ನು 2022ರ ಅ.13 ರಂದು ಮಠದ ಅಡುಗೆ ಸಹಾಯಕಿ ಮತ್ತೊಂದು ದೂರು ನೀಡಿದ್ದು, ತನ್ನಿಬ್ಬರು ಅಪ್ರಾಪ್ತ ಹೆಣ್ಣು ಮಕ್ಕಳ ಮೇಲೆಯೂ ಲೈಂಗಿಕ ಕಿರುಕುಳ ನೀಡಿರುವುದಾಗಿ ಹೇಳಿದ್ದರು. 2023ರ ಜ.10ರಂದು ಮುರುಘಾ ಶ್ರೀ ವಿರುದ್ಧ ದಾಖಲಾದ ಈ ಎರಡನೇ ಪೋಕ್ಸೋ ಪ್ರಕರಣದಲ್ಲಿ ಚಿತ್ರದುರ್ಗ ಗ್ರಾಮಾಂತರ ಠಾಣೆ ಪೊಲೀಸರು 761 ಪುಟಗಳ ಚಾರ್ಜ್‌ಶೀಟ್‌ ಅನ್ನು ಸಲ್ಲಿಸಿದ್ದರು. ಸದ್ಯ ಒಂದನೇ ಪ್ರಕರಣದ ತೀರ್ಪು ಬಂದಿದ್ದು ಈ ಪ್ರಕರಣದ ತೀರ್ಪು ಇನ್ನಷ್ಟೇ ಹೊರಬರಬೇಕಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...