ಮಂಗಳೂರು | ಮುಸ್ಲಿಂ ಲೇಖಕರ ಸಂಘದಿಂದ ಸಾಹಿತಿ ಮಿರ್ಜಾ ಬಶೀರ್‌ಗೆ ‘ಮುಸ್ಲಿಂ ಸಾಹಿತ್ಯ ಪ್ರಶಸ್ತಿ’ ಪ್ರದಾನ

Date:

ಮುಸ್ಲಿಮ್ ಲೇಖಕರ ಸಂಘವು ಮರ್ಹೂಂ ಯು.ಟಿ.ಫರೀದ್ ಅವರ ಸ್ಮರಣಾರ್ಥ ನೀಡುವ 2023ನೇ ಸಾಲಿನ ರಾಜ್ಯ ಮಟ್ಟದ ಮುಸ್ಲಿಮ್ ಸಾಹಿತ್ಯ ಪ್ರಶಸ್ತಿಯನ್ನು ಹಿರಿಯ ಸಾಹಿತಿ ಡಾ.ಮಿರ್ಜಾ ಬಶೀರ್ ಅವರಿಗೆ ಪ್ರದಾನ ಮಾಡಲಾಯಿತು.

ಮಂಗಳೂರು ನಗರದ ಸಂತ ಅಲೋಶಿಯಸ್ ಕಾಲೇಜು ಅವರಣದಲ್ಲಿರುವ ಸಹೋದಯ ಸಭಾಂಗಣದಲ್ಲಿ ಶುಕ್ರವಾರ ಸಂಜೆ ನಡೆದ ಕಾರ್ಯಕ್ರಮದಲ್ಲಿ ಈ ಪ್ರಶಸ್ತಿಯನ್ನು ಪ್ರದಾನಿಸಲಾಯಿತು.

ಪ್ರಶಸ್ತಿ ಪ್ರದಾನಿಸಿದ ಬಳಿಕ ಮಾತನಾಡಿದ ವಿಧಾನಸಭಾ ಸ್ಪೀಕರ್ ಯು.ಟಿ.ಖಾದ‌ರ್, ಯುವ ಜನಾಂಗಕ್ಕೆ ವ್ಯಕ್ತಿತ್ವ ರೂಪಿಸಿಕೊಳ್ಳಲು ಸಾಹಿತ್ಯ ಅಗತ್ಯವಾಗಿದೆ. ಯುವ ಸಾಹಿತ್ಯ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವ ಕೆಲಸವನ್ನು ಮುಸ್ಲಿಮ್ ಲೇಖಕರ ಸಂಘ ಮಾಡುತ್ತಿರುವುದು ಶ್ಲಾಘನೀಯ. ತನ್ನ ಕಥಾ ಸಂಕಲನಕ್ಕೆ ಈ ಪ್ರಶಸ್ತಿಯನ್ನು ಪಡೆದಿರುವ ಡಾ.ಮಿರ್ಜಾ ಬಶೀರ್‌ಗೆ ಭವಿಷ್ಯದ ದಿನಗಳಲ್ಲಿ ಸಾಹಿತ್ಯಕ್ಕೆ ನೀಡುವ ಉನ್ನತ ಪ್ರಶಸ್ತಿಗಳು ಲಭಿಸಲಿ ಎಂದು ಆಶಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
1003027641

ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಲೆಫ್ಟಿನೆಂಟ್ ಭವ್ಯಾ ನರಸಿಂಹ ಮೂರ್ತಿಯವರು, ದ್ವೇಷದ ರಾಜಕಾರಣ ಮತ್ತು ಪ್ರಜಾತಂತ್ರದ ಭವಿಷ್ಯ ಎಂಬ ಕೇಂದ್ರೀಯ ವಿಷಯದಲ್ಲಿ ಮಾತನಾಡಿದರು.

ಅಬ್ರಕಡಬ್ರ ಕಥಾ ಸಂಕಲನಕ್ಕಾಗಿ ಮುಸ್ಲಿಂ ಸಾಹಿತ್ಯ ಪ್ರಶಸ್ತಿ ಪಡೆದ ಡಾ.ಮಿರ್ಜಾ ಬಶೀರ್ ತಮ್ಮ ಅನಿಸಿಕೆ ವ್ಯಕ್ತಪಡಿಸಿದರು.

ಮುಸ್ಲಿಮ್ ಲೇಖಕರ ಸಂಘದ ಅಧ್ಯಕ್ಷ ಉಮರ್ ಯು. ಎಚ್. ಅಧ್ಯಕ್ಷತೆ ವಹಿಸಿ, ಮಾತನಾಡಿದರು.

1003027640

ಬಳಿಕ ನಡೆದ ಬಹುಭಾಷಾ ಕವಿಗೋಷ್ಠಿಯಲ್ಲಿ ಕವಿಗಳಾದ ಜಲೀಲ್ ಮುಕ್ರಿ, ಶಮೀಮಾ ಕುತ್ತಾರ್, ಬಶೀರ್ ಅಹ್ಮದ್ ಕಿನ್ಯಾ, ಅಕ್ಷತಾ ರಾಜ್ ಪೆರ್ಲ, ಕವನ ವಾಚಿಸಿದರು.

ಹುಸೈನ್ ಕಾಟಿಪಳ್ಳ ಸ್ತುತಿಗೀತೆ ಹಾಡಿದರು. ಹಿರಿಯ ಪತ್ರಕರ್ತ ಏ.ಕೆ.ಕುಕ್ಕಿಲ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿ ದರು. ಆಲಿಕುಂಞಿ ಪಾರೆ ವಂದಿಸಿದರು. ಮುಸ್ಲಿಮ್ ಲೇಖಕರ ಸಂಘದ ಪ್ರಧಾನ ಕಾರ್ಯದರ್ಶಿ ಬಿ.ಎ. ಮುಹಮ್ಮದ್ ಅಲಿ ಕಾರ್ಯಕ್ರಮ ನಿರೂಪಿಸಿದರು.

1003027663
WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...