ಮೈಸೂರು | ಮಹಾರಾಜ ಕಾಲೇಜಿನಲ್ಲಿ ತರಗತಿಗಳು ಪೂರ್ಣ ಪ್ರಮಾಣದಲ್ಲಿ ನಡೆಯುತ್ತಿಲ್ಲ; ಎಐಡಿಎಸ್‌ಒ ಆರೋಪ

Date:

ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಮೊದಲ ಸೆಮಿಸ್ಟರ್ ಪ್ರಾರಂಭವಾಗಿ ಒಂದು ತಿಂಗಳು ಕಳೆದರೂ ಪೂರ್ಣ ಪ್ರಮಾಣದಲ್ಲಿ ತರಗತಿಗಳು ನಡೆಯುತ್ತಿಲ್ಲ. ಆದ್ದರಿಂದ, ಸರ್ಕಾರವು ಮೊದಲ ವರ್ಷದ ತರಗತಿಗಳನ್ನು ಆದಷ್ಟು ಬೇಗ ಪ್ರಾರಂಭಿಸಬೇಕು ಎಂದು ಆಲ್ ಇಂಡಿಯಾ ಡೆಮಾಕ್ರಟಿಕ್ ಸ್ಟೂಡೆಂಟ್ಸ್ ಆರ್ಗನೈಸೇಶನ್ (ಎಐಡಿಎಸ್ಒ) ಒತ್ತಾಯಿಸಿದೆ.

ಎಐಡಿಎಸ್ಒ ಜಿಲ್ಲಾಧ್ಯಕ್ಷ ಸುಭಾಷ್ ಮಾತನಾಡಿ, “ತರಗತಿಗಳು ಇನ್ನೂ ಪೂರ್ಣ ಪ್ರಮಾಣದಲ್ಲಿ ಪ್ರಾರಂಭವಾಗಿಲ್ಲ. ಕಾಲೇಜಿನಲ್ಲಿ ಉಪನ್ಯಾಸಕರ ಕೊರತೆ ಇದ್ದು, ದಿನಕ್ಕೆ ಒಂದು ಅಥವಾ ಎರಡು ತರಗತಿಗಳು ಮಾತ್ರ ನಡೆಯುತ್ತಿವೆ. ಪ್ರತಿದಿನ ತರಗತಿಗಳು ನಡೆಯದ ಕಾರಣ ವಿದ್ಯಾರ್ಥಿಗಳು ಕಾಲೇಜಿಗೆ ಬಂದು ನಿರಾಶೆಯಿಂದ ಹಿಂದಿರುಗುತ್ತಿದ್ದಾರೆ. ಇದರಿಂದ ಶೈಕ್ಷಣಿಕ ಕಲಿಕೆಗೆ ಅಡ್ಡಿಯಾಗಿದೆ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

“ಸೆಮಿಸ್ಟರ್ ಅಂತ್ಯದ ವೇಳೆಗೆ ಪೂರ್ಣ ಪ್ರಮಾಣದ ಪಾಠಗಳು ನಡೆಯದಿದ್ದರೂ ವಿದ್ಯಾರ್ಥಿಗಳು ಪರೀಕ್ಷೆಗಳನ್ನು ಬರೆಯಬೇಕಾಗುತ್ತದೆ. ಇದು ವಿದ್ಯಾರ್ಥಿಗಳ ಕಲಿಕೆಯ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತದೆ” ಎಂದು ಎಐಡಿಎಸ್‌ಒ ಸದಸ್ಯರು ಮಾಹಿತಿ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಚಾಮರಾಜನಗರ | ವಾಲ್ಮೀಕಿ ಜಯಂತಿ, ಗ್ರಾಮೀಣ ದಸರಾ ನೆಡೆಸಲು ಪೂರ್ವಭಾವಿ ಸಭೆ

“ಉನ್ನತ ಶಿಕ್ಷಣ ಪಡೆಯಲು ಪ್ರವೇಶ ಪಡೆಯುವ ಬಡ ವಿದ್ಯಾರ್ಥಿಗಳ ಸಂಖ್ಯೆ ಕಡಿಮೆ. ಅಂತಹ ಪರಿಸ್ಥಿತಿಯಲ್ಲಿ, ಉಪನ್ಯಾಸಕರ ಕೊರತೆಯಿಂದಾಗಿ ವಿದ್ಯಾರ್ಥಿಗಳು ಶಿಕ್ಷಣದಿಂದ ದೂರ ಉಳಿಯುವ ಸಾಧ್ಯತೆ ಎದರುರಾಗಿದೆ. ಮೈಸೂರು ವಿಶ್ವವಿದ್ಯಾಲಯವು ಕೂಡಲೇ ಅತಿಥಿ ಉಪನ್ಯಾಸಕರನ್ನು ನೇಮಿಸಿ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಅನುಕೂಲವಾಗುವಂತೆ ತರಗತಿಗಳನ್ನು ನಡೆಸಬೇಕು” ಎಂದು ಜಿಲ್ಲಾ ಕಾರ್ಯದರ್ಶಿ ಚಂದ್ರಕಲಾ ಆಗ್ರಹಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...