ಮೈಸೂರು | ಎಐಎಂಎಸ್ಎಸ್ ಸಂಘಟನೆಯಿಂದ ‘ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ‘

Date:

ಎಐಎಂಎಸ್ಎಸ್ ಸಂಘಟನೆ ಮೈಸೂರು ಜಿಲ್ಲಾ ಸಮಿತಿಯಿಂದ ನಟರಾಜ ವಿದ್ಯಾಸಂಸ್ಥೆಯ ಟೈಲರಿಂಗ್ ವಿಭಾಗದಲ್ಲಿ ‘ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ‘ಯನ್ನು ಕ್ಲಾರಾ ಜೆಟ್ಕಿನ್ ರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವುದರ ಮೂಲಕ ಉದ್ಘಾಟಿಸಿದರು.

ಮೈಸೂರು ಜಿಲ್ಲಾ ಸಮಿತಿಯ ಉಪಾಧ್ಯಕ್ಷೆ ಶೀಭಾ ಮಾತನಾಡಿ ” 1908ರಲ್ಲಿ ಅಮೇರಿಕಾದ ನ್ಯೂಯಾರ್ಕ್ ನಗರದ ಜವಳಿ ಕಾರ್ಖಾನೆಯ ಹೆಣ್ಣು ಮಕ್ಕಳು ಲಾಟಿ, ಗುಂಡಿನೇಟು ಎದುರಿಸಿ ತಮ್ಮ ಕೆಲವೊಂದು ಹಕ್ಕುಗಳನ್ನು ಗೆದ್ದುಕೊಂಡ ದಿನವೇ ಮಾರ್ಚ್ 8 ಎಂದೂ 1910ರಲ್ಲಿ ಸಮಾಜವಾದಿ ನಾಯಕಿ ಕ್ಲಾರಾ ಜೆಟ್ಕಿನ್ ರವರು ಇದನ್ನು ‘ ಅಂತರರಾಷ್ಟ್ರೀಯ ಮಹಿಳಾ ದಿನ’ವಾಗಿ ಘೋಷಿಸಿದರ ಬಗ್ಗೆ ಹಾಗೂ ಅಂದಿನಿಂದ ಇದು ಮಹಿಳಾ ಹೋರಾಟದ ದಿಕ್ಸೂಚಿಯಾಗಿದೆ. ಮಹಿಳೆಯರು ತಾವು ನಡೆದು ಬಂದ ದಾರಿಯನ್ನು ಅವಲೋಕಿಸುತ್ತಾ ಮುಂದೆ ಸಾಧಿಸಬೇಕಾಗಿರುವ ಗುರಿಯ ರೂಪುರೇಷೆ ನಿರ್ಧರಿಸಲು ಮೀಸಲಿಡಬೇಕಾದ ಪ್ರೇರಣಾ ದಿನವಾಗಿದೆ ” ಎಂದರು.

” ನಮ್ಮ ನವೋದಯದ ಹರಿಕಾರರಾದ ರಾಜಾರಾಂ ಮೋಹನ್‌ರಾಯ್, ಈಶ್ವರ ಚಂದ್ರ ವಿದ್ಯಾಸಾಗರ, ಪಂಡಿತ ತಾರಾನಾಥ, ಸಾವಿತ್ರಿಬಾಯಿ ಫುಲೆ, ಮುಂತಾದವರ ಹೋರಾಟದ ಫಲವಾಗಿ ಅಲ್ಪ ಸ್ವಲ್ಪ ಹಕ್ಕುಗಳನ್ನು ಮಹಿಳೆಯರು ಗಳಿಸಿಕೊಂಡಿದ್ದರು. ಅವರ ಪರಿಸ್ಥಿತಿ ಇನ್ನು ಸಂಕಟಮಯವಾಗಿಯೇ ಇದೆ. ಜೊತೆಗೆ 20 ರ ದಶಕದಲ್ಲಿ ಇಲ್ಲಿ ನೆಲೆಗೊಂಡ ಜಾಗತೀಕರಣ ನೀತಿ, ಪರಿಸ್ಥಿತಿಯನ್ನು ಇನ್ನಷ್ಟು ವಿಷಮಯಗೊಳಿಸಿದೆ. ಅಲ್ಲದೆ ಸರ್ಕಾರಗಳೇ, ದುಡಿಯುವ ಹೆಣ್ಣು ಮಕ್ಕಳಿಗೆ ಜೀವನದ ಭದ್ರತೆ ಕಲ್ಪಿಸದೆ ಅವರನ್ನು ಶೋಷಿಸುತ್ತಿರುವುದಕ್ಕೆ ಆಶಾ ಕಾರ್ಯಕರ್ತೆಯರು, ಅಂಗನವಾಡಿ ಮಹಿಳೆಯರು ಜೀವಂತ ಸಾಕ್ಷಿ ” ಎಂದು ವಿಷಾದಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಉಪಾಧ್ಯಕ್ಷೆ ಸೀಮಾ ಮಾತನಾಡಿ ” ಮಹಿಳಾ ಸಮುದಾಯ ಹೋರಾಟದಿಂದ ಗಳಿಸಿಕೊಂಡಿರುವ ಎಲ್ಲ ರೀತಿಯ ಹಕ್ಕುಗಳನ್ನು ಇಂದು ಉಳಿಸಿಕೊಳ್ಳಬೇಕಿದೆ ಮಹಿಳೆಯರು ಮತ್ತು ಮಕ್ಕಳು ಜೀವಿಸುವ ಹಕ್ಕಿಗಾಗಿ ನಾವೆಲ್ಲರೂ ಧ್ವನಿ ಎತ್ತಬೇಕಿದೆ. ಹೆಣ್ಣು ಮಕ್ಕಳಿಗೆ ಸರ್ಕಾರ, ಆರೋಗ್ಯ, ಶಿಕ್ಷಣ,ಸುರಕ್ಷತೆ ಮತ್ತು ಆರ್ಥಿಕ ಭದ್ರತೆಯನ್ನು ಖಾತ್ರಿಪಡಿಸಬೇಕು. ಇದಕ್ಕಾಗಿ ಮಹಿಳಾ ಸಮುದಾಯ ಒಗ್ಗಟ್ಟಿನಿಂದ ಧ್ವನಿ ಎತ್ತಬೇಕಿದೆ ” ಎಂದು ಹೇಳಿದರು

ಈ ಸುದ್ದಿ ಓದಿದ್ದೀರಾ? ಮೈಸೂರು | ‘ ಬಿ-ಖಾತಾ ‘ ಅಭಿಯಾನಕ್ಕೆ ಸಚಿವ ಡಾ ಹೆಚ್ ಸಿ ಮಹದೇವಪ್ಪ ಚಾಲನೆ

ಕಾರ್ಯಕ್ರಮದಲ್ಲಿ ಟೈಲರಿಂಗ್ ಇನ್ಸ್ಟಿಟ್ಯೂಷನ್ ನ ಮುಖ್ಯಸ್ಥೆ ಮಧು, ಎಐಎಂಎಸ್ಎಸ್ ಜಿಲ್ಲಾಧ್ಯಕ್ಷೆ ನಳಿನ , ಕಾರ್ಯದರ್ಶಿ ಆಸಿಯಾ ಬೇಗಂ ಮತ್ತು ವಿದ್ಯಾರ್ಥಿಗಳು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...