ಮೈಸೂರು | ಅಂಬೇಡ್ಕರ್ ಭಾವಚಿತ್ರಕ್ಕೆ ಅಪಮಾನ; ಬಂಧಿತರ ಮೇಲೆ ದೇಶ ದ್ರೋಹದ ಪ್ರಕರಣ ದಾಖಲಿಸುವಂತೆ ದಸಂಸ ಆಗ್ರಹ

Date:

ಮೈಸೂರು ತಾಲ್ಲೂಕಿನ ವಾಜಮಂಗಲ ಗ್ರಾಮದಲ್ಲಿ ಡಾ. ಬಿ. ಆರ್. ಅಂಬೇಡ್ಕರ್ ಅವರ ಪ್ರತಿಮೆ ಮತ್ತು ಭಾವಚಿತ್ರಕ್ಕೆ ಅಪಮಾನ ಮಾಡಿ ಬಂಧಿತರಾಗಿರುವ ಇಬ್ಬರು ಕಿಡಿಗೇಡಿಗಳ ವಿರುದ್ಧ ದೇಶ ದ್ರೋಹದ ಪ್ರಕರಣ ದಾಖಲಿಸಿ, ಕಠಿಣ ಶಿಕ್ಷೆ ವಿಧಿಸಬೇಕು ಎಂದು ಮಾಜಿ ಮಹಾಪೌರ ಪುರುಷೋತ್ತಮ್ ಒತ್ತಾಯಿಸಿದ್ದಾರೆ.

ನಗರದ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ವಾತನಾಡಿ, ಡಾ. ಬಿ. ಆರ್. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಅಪಮಾನ ಮಾಡಿದ ಕಿಡಿಗೇಡಿಗಳಾದ ಕೊಕ್ಕರೆಹುಂಡಿಯ ರಂಗೇಗೌಡ ಮತ್ತು ಚೋರನಹಳ್ಳಿಯ ವಸಂತ್‌ ಕುಮಾರ್ ಅವರನ್ನು ಪೊಲೀಸ್ ಇಲಾಖೆ ಬಂಧಿಸಿರುವುದು ಸ್ವಾಗತಾರ್ಹ. ಆದರೆ, ಕೃತ್ಯವೆಸಗಿದ ಆರೋಪಿಗಳಿಗೆ ಯಾವುದೇ ಕಾರಣಕ್ಕೂ ಜಾಮೀನು ಸಿಗದಂತೆ ನೋಡಿಕೊಳ್ಳಬೇಕು. ಒಂದು ವೇಳೆ ಜಾಮೀನು ಸಿಕ್ಕರೆ ಆರೋಪಿಗಳು ರಾಜಾರೋಷವಾಗಿ ಓಡಾಡಿಕೊಂಡು ಇರುತ್ತಾರೆ ಎಂದು ಕಳವಳ ವ್ಯಕ್ತಪಡಿಸಿದರು.

ಆರೋಪಿಗಳು ವಾಜಮಂಗಲ ಗ್ರಾಮದ ಶಾಂತಿಯುತವಾದ ವಾತಾವರಣವನ್ನು ಕಲುಷಿತಗೊಳಿಸಿದ್ದಾರೆ. ಗ್ರಾಮದ ಶಾಂತಿಗೆ ಭಂಗ ಉಂಟು ಮಾಡಿ, ಗ್ರಾಮಸ್ಥರ ನೆಮ್ಮದಿಯನ್ನು ಹಾಳು ಮಾಡಿದ್ದಾರೆ. ಸಮಾಜದ ಸ್ವಾಸ್ಥ್ಯವನ್ನು ಹಾಳು ಮಾಡುವ ಇಂತಹ ಕಿಡಿಗೇಡಿಗಳಿಗೆ ನ್ಯಾಯಾಲಯ ಯಾವುದೇ ಕಾರಣಕ್ಕೂ ಜಾಮೀನು ನೀಡಬಾರದು ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪೊಲೀಸ್ ಇಲಾಖೆ ಆರೋಪಿಗಳಿಗೆ ಸುಲಭವಾಗಿ ಜಾಮೀನು ಸಿಗುವ ರೀತಿಯಲ್ಲಿ ಪ್ರಕರಣ ದಾಖಲಿಸಬಾರದು. ದೇಶ ದ್ರೋಹದ ಪ್ರಕರಣವನ್ನು ದಾಖಲಿಸಿ, ಕಠಿಣ ಶಿಕ್ಷೆ ಆಗುವಂತೆ ನೋಡೊಕೊಳ್ಳಬೇಕು. ಆರೋಪಿಗಳ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳಬೇಕು. ಇಲ್ಲವಾದರೆ ದಲಿತ ಸಂಘಟನೆಗಳು ಜೊತೆಗೂಡಿ ವಾಜಮಂಗಲ ಗ್ರಾಮದಿಂದ ಕಾಲ್ನಡಿ ಜಾಥಾ ಹೊರಟು ಆರೋಪಿಗಳ ಮನೆಗೆ ಮುತ್ತಿಗೆ ಹಾಕುತ್ತೇವೆ ಎಂದು ಎಚ್ಚರಿಸಿದರು.

ಈ ಸುದ್ದಿ ಓದಿದ್ದೀರಾ?ಮೈಸೂರು | ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾಗೆ ಏಳು ದಶಕ ಪೂರೈಸಿದ ಸಂಭ್ರಮ

ಸುದ್ದಿಗೋಷ್ಠಿಯಲ್ಲಿ ದಲಿತ ಸಂಘರ್ಷ ಸಮಿತಿ ಮುಖಂಡ ಭುಗತಗಳ್ಳಿ ಮಣಿಯಯ್ಯ, ಎವಿಎಸ್‌ಎಸ್ ಅಧ್ಯಕ್ಷ ತುಂಬಲ ರಾಮಣ್ಣ, ಎಸ್ಸಿ – ಎಸ್ಟಿ ಆಟೋ ಚಾಲಕರ ಮತ್ತು ಮಾಲಿಕರ ಸಂಘದ ಅಧ್ಯಕ್ಷ ಪುಟ್ಟರಾಜು, ವಾಜಮಂಗಲ ಗ್ರಾಮದ ಮುಖಂಡರಾದ ಅಂಕಪ್ಪ, ಸುರೇಶ್, ಸಿದ್ದಪ್ಪ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...