ಮೈಸೂರು | ದಲಿತರ ಮೇಲಿನ ದೌರ್ಜನ್ಯ; ಆರೋಪಿಗಳನ್ನು ಕೂಡಲೇ ಬಂಧಿಸಿ : ಪ್ರಗತಿಪರ ಸಂಘಟನೆಗಳಿಂದ ಪಾದಯಾತ್ರೆ

Date:

ಮೈಸೂರು ಜಿಲ್ಲೆ, ಹುಣಸೂರು ತಾಲ್ಲೂಕು, ಹನಗೂಡು ಹೋಬಳಿಯ ರಾಮೇನಹಳ್ಳಿ ಗ್ರಾಮದಲ್ಲಿ ನಡೆದ ಜಾತ್ರಾ ಮಹೋತ್ಸವದ ವೇಳೆ ದಲಿತ ಕುಟುಂಬದ ಜೊತೆ ಅನುಚಿತವಾಗಿ ವರ್ತಿಸಿ, ಹಲ್ಲೆ ನಡೆಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿದ್ದ ಪ್ರಕರಣ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅಟ್ರಾಸಿಟಿ ಪ್ರಕರಣ ದಾಖಲಾಗಿದ್ದರು ಸಹ ಆರೋಪಿಗಳನ್ನು ವಶಕ್ಕೆ ಪಡೆಯದೆ, ಕಾನೂನು ರೀತ್ಯಾ ಕ್ರಮ ಕೈಗೊಳ್ಳದಿರುವ ಸಲುವಾಗಿ ಭಾರತ ಕಮ್ಯುನಿಸ್ಟ್ ಪಕ್ಷ ( ಮಾರ್ಕ್ಸ್ ವಾದಿ ), ಡಿಹೆಚ್ಎಸ್, ದಸಂಸ ಹಾಗೂ ಪ್ರಗತಿಪರ ಸಂಘಟನೆಗಳ ಒಕ್ಕೂಟ ನಿಲುವಾಗಿಲು ಗ್ರಾಮದಿಂದ ಹುಣಸೂರಿನ ಉಪ ವಿಭಾಗಾಧಿಕಾರಿ ಕಚೇರಿಯವರೆಗೆ ಪಾದಯಾತ್ರೆ ನಡೆಸಿದರು.

ದಿನಾಂಕ 28-02-2025 ರಂದು ಸಂಜೆ 7 ರ ಆಸುಪಾಸಿನಲ್ಲಿ ರಾಮೇನಹಳ್ಳಿ ಹಳ್ಳಿ ಗ್ರಾಮದ ಒಕ್ಕಲಿಗ ಸಮುದಾಯಕ್ಕೆ ಸೇರಿದ ಉಲ್ಲಾಸ್,ಚಿರಾಗ್, ಸೂರಿ, ಶಶಾಂಕ್ ಸೇರಿದಂತೆ ಏಳು ಜನರು ಹಲ್ಲೆ ನಡೆಸಿದ್ದರು. ಪೊಲೀಸರು ಆರೋಪಿಗಳೊಂದಿಗೆ ಶಾಮೀಲಾಗಿ ಆರೋಪಿಗಳ ಮೇಲೆ ಯಾವುದೇ ಕ್ರಮ ಕೈಗೊಂಡಿಲ್ಲ, ಇದುವರೆಗೆ ಕಾನೂನಾತ್ಮಕವಾಗಿ ಬಂಧಿಸಿಲ್ಲ, ನೊಂದ ಕುಟುಂಬಕ್ಕೆ ಪರಿಹಾರ, ಸೂಕ್ತ ರಕ್ಷಣೆ ಒದಗಿಸಿಲ್ಲ ಎಂದು ಆರೋಪಿಸಿ ಪ್ರಗತಿಪರ ಸಂಘಟನೆಗಳ ಮುಖಂಡರು ಹಾಗೂ ಕಾರ್ಯಕರ್ತರು ನಿಲುವಾಗಿಲು ಗ್ರಾಮದಿಂದ ಹುಣಸೂರಿನ ಸಂವಿಧಾನ ವೃತ್ತದ ಮೂಲಕ ಪಾದಯಾತ್ರೆ ನಡೆಸಿದರು.

ದಸಂಸ ಹಿರಿಯ ಮುಖಂಡರಾದ ಹರಿಹರ ಆನಂದಸ್ವಾಮಿ ಮಾತನಾಡಿ ” ವಾರಗಳೆ ಕಳೆದರು ಆರೋಪಿಗಳ ಮೇಲೆ ಕ್ರಮ ಜರುಗಿಸಿಲ್ಲ, ಹಾಗೇ ವಶಕ್ಕೆ ಪಡೆದಿಲ್ಲ.ದಿನೇ ದಿನೇ ದಲಿತರ ಮೇಲಿನ ದೌರ್ಜನ್ಯ ಹೆಚ್ಚಾಗುತ್ತಿದ್ದು ನ್ಯಾಯ ದೊರಕುತಿಲ್ಲ. ಸಂವಿಧಾನದ ಆಶಯಗಳು ಈಡೇರಬೇಕು, ಸಂವಿಧಾನದ ಹೆಸರು ಹೇಳಿ ಮಾಡಬಾರದನ್ನು ಮಾಡುತ್ತಿದ್ದಾರೆ. ಜನರಿಗೆ ತಮ್ಮ ಹಕ್ಕುಗಳ ಮೇಲೆ ಯಾವುದೇ ನಂಬಿಕೆ, ವಿಶ್ವಾಸ ಉಳಿದಿಲ್ಲ ” ಎಂದು ವಿಷಾದ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹಕ್ಕೋತ್ತಾಯಗಳು:

  • ಜಾತ್ರೆ ನಡೆಯುವ ಸ್ಥಳದಲ್ಲಿ ಈಗಾಗಲೇ ಹಲವು ಬಾರಿ ಇಂತಹ ಗಲಾಟೆ ನಡೆದಿದ್ದು. ಪೋಲೀಸರ ಗಮನಕ್ಕಿದೆ. ಆದರೆ ಸೂಕ್ತ ಬಂದೋಬಸ್ತ್ ನಿಯೋಜಿಸುವಲ್ಲಿ ಪೊಲೀಸ್ ಇಲಾಖೆ ವಿಫಲವಾಗಿದೆ.
  • ಗಲಾಟೆ ನಡೆದ ಸ್ಥಳದಲ್ಲಿ ಪೊಲೀಸ್ ನವರು ಗಾಯಾಳುಗಳಿಗೆ ರಕ್ಷಣೆ ನೀಡದೆ, ಆರೋಪಿಗಳೊಂದಿಗೆ ಷಾಮೀಲಾಗಿ ಸುಮಾರು 2 ರಿಂದ 3 ಗಂಟೆಗಳ ನಂತರ ಹೇಳಿಕೆ ಪಡೆದು. ಎದುರು ದೂರು ಕೊಡಿಸುವಲ್ಲಿ ಇಲಾಖೆಯ ಆರಕ್ಷಕ ನಿರೀಕ್ಷಕಿ ರಾಧ ಹಾಗೂ ಉಪನಿರೀಕ್ಷಕ ರವಿ ಹೆಚ್ ಸಿ ಇವರುಗಳು ಪ್ರಕರಣ ತಿರುಚಲು ಸಂಚು ರೂಪಿಸಿರುತ್ತಾರೆ. ಇವರುಗಳ ಸಂಭಾಷಣೆಯ ಸಿಡಿಆರ್ ಪಡೆದು ಸೂಕ್ತ ಕ್ರಮ ಕೈಗೊಳ್ಳಬೇಕು.
  • ಆರೋಪಿಗಳು ತಲೆ ಮರೆಸಿಕೊಳ್ಳಲು ಸಹಕಾರ ನೀಡಿರುವ ಪೋಲೀಸರ ಮೇಲೆ ಶಿಸ್ತು ಕ್ರಮ ಜರುಗಿಸಿ, ನೊಂದ ಗಾಯಾಳುಗಳಿಗೆ ಸೂಕ್ತ ಪರಿಹಾರ ಹಾಗೂ ರಕ್ಷಣೆ ನೀಡಬೇಕು. ದೌರ್ಜನ್ಯಕ್ಕೊಳಗಾದ ಗಾಯಾಳುಗಳ ಮೇಲೆ ಸುಳ್ಳು ದೂರು ನೀಡಿರುವುದನ್ನು ವಜಾಗೊಳಿಸಬೇಕು.
  • ಗಲಾಟೆಯ ಸಂಬಂಧ ದಿನಾಂಕ : 01-03-2025 ರಂದು ತಹಸೀಲ್ದಾರ್ ರವರು ಮಧ್ಯೆ ಪ್ರವೇಶ ಮಾಡಿ ಶಾಂತಿ ಸುವ್ಯವಸ್ಥೆ ಕಾಪಾಡುವಂತೆ ಗಮನ ಹರಿಸಬೇಕೆಂದು ಸಿಪಿಐಎಂ ಪಕ್ಷದ ವತಿಯಿಂದ ಮನವಿ ಮಾಡಿದ್ದೆವು. ಘಟನೆಯ ಬಗ್ಗೆ ಕಿಂಚಿತ್ತು ಗಮನ ಹರಿಸದೆ ಮತ್ತು ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳನ್ನು ವಿಚಾರಿಸದೆ ನಿರ್ಲಕ್ಷ್ಯತೆ ವಹಿಸಿರುತ್ತಾರೆ.

ಆದ್ದರಿಂದ ಈ ಮೇಲ್ಕಂಡ ಎಲ್ಲಾ ಅಂಶಗಳನ್ನು ಪರಿಗಣನೆಗೆ ತೆಗೆದುಕೊಂಡು, ಹಿರಿಯ ಪೊಲೀಸ್ ಅಧಿಕಾರಿಗಳು ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಬೇಕೆಂದು ಈ ಮೂಲಕ ಒತ್ತಾಯಿಸುತ್ತಾ ದೌರ್ಜನ್ಯಕ್ಕೆ ಒಳಗಾದ ದಲಿತರಿಗೆ ಸೂಕ್ತ ರಕ್ಷಣೆ ನೀಡಿ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಹಾಗೂ ಸಮಾಜ ಕಲ್ಯಾಣ ಇಲಾಖೆಯಿಂದ ದೌರ್ಜನ್ಯಕ್ಕೆ ಒಳಗಾದ ದಲಿತರಿಗೆ ಸೂಕ್ತ ಪರಿಹಾರ ನೀಡಬೇಕೆಂದು ಒತ್ತಾಯಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಮೈಸೂರು | ಗ್ಯಾರೆಂಟಿ ಯೋಜನೆಗಳಿಗೆ ದಲಿತರ ದುಡ್ಡೇ ಬೇಕಾ; ದಸಂಸ

ಪ್ರತಿಭಟನೆಯಲ್ಲಿ ಡಿ ಹೆಚ್ ಎಸ್ ರಾಜ್ಯ ಕಾರ್ಯದರ್ಶಿ ಎನ್ ರಾಜಣ್ಣ, ಸಿಪಿಐಎಂ ಜಿಲ್ಲಾ ಸದಸ್ಯ ಕಾಮ್ರೇಡ್
ಕೆ ಬಸವರಾಜು, ವಕೀಲರಾದ ಪುಟ್ಟರಾಜು, ಪ್ರಗತಿಪರ ಸಂಘಟನೆಗಳ ಒಕ್ಕೂಟದ ಸಂಚಾಲಕ ರಾಮಕೃಷ್ಣ,
ಸಿದ್ದೇಶ್, ರಾಜು ಚಿಕ್ಕ ಹುಣಸೂರು, ಜೆ ಮಹದೇವು, ದಲಿತ ಮುಖಂಡ ಕಾಂಕ್ರಿಟ್ ರಾಜು, ಸಿಪಿಐಎಂ ಪಕ್ಷದ
ಕಲ್ಕುಣಿಕೆ ಬಸವರಾಜು, ವೆಂಕಟೇಶ್, ಬೆಳತೂರು ವೆಂಕಟೇಶ್, ಶಿವರಾಮು ಸೇರಿದಂತೆ ನೂರಾರು ಕಾರ್ಯಕರ್ತರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...