ಮೈಸೂರು | ರಾಜಕೀಯ ಪಕ್ಷಗಳ ಫ್ಲೆಕ್ಸ್‌, ಬ್ಯಾನರ್‌ ಅಳವಡಿಕೆಗೆ ನಿರ್ಬಂಧ

Date:

  • ಫ್ಲೆಕ್ಸ್‌ ಅಳವಡಿಸಿದವರಿಗೆ ಕಾನೂನು ಕ್ರಮದ ಎಚ್ಚರಿಕೆ
  • ಪಕ್ಷಗಳು ಆಯೋಜಿಸುವ ಸಭೆಗಳಲ್ಲಿ ಧ್ವನಿವರ್ಧಕಕ್ಕೆ ಅನುಮತಿ ಅಗತ್ಯ

ರಾಜಕೀಯ ಪಕ್ಷಗಳು, ಸಾರ್ವಜನಿಕರು ಪ್ರಚಾರ ಸಾಮಗ್ರಿಗಳ ಬಳಕೆಯನ್ನು ನಿಷೇಧಿಸಿ ಮೈಸೂರು ಮಹಾನಗರ ಪಾಲಿಕೆ ಆದೇಶ ಹೊರಡಿಸಿದೆ. ರಾಜಕೀಯ ಪಕ್ಷಗಳು ತಮ್ಮ ಟಿಕೆಟ್ ಆಕಾಂಕ್ಷಿಗಳ ಫ್ಲೆಕ್ಸ್, ಬ್ಯಾನರ್‌, ಬಂಟಿಂಗ್‌, ಕಟೌಟ್‌, ಹೋರ್ಡಿಂಗ್‌ ಮತ್ತು ಭಿತ್ತಿಪತ್ರಗಳಂತಹ ಪ್ರಚಾರ ಸಾಮಗ್ರಿಗಳನ್ನು ಬಳಸದಂತೆ ಆದೇಶ ಹೊರಡಿಸಿದೆ.

ಮಹಾನಗರ ಪಾಲಿಕೆ ಗುರುತಿಸಿದ ಸ್ಥಳಗಳಲ್ಲಿ ಪ್ರಚಾರ ಸಾಮಗ್ರಿಗಳನ್ನು ಹಾಕುವಂತಹವರು ಮೊದಲು ಪಾಲಿಕೆಯಿಂದ ಅನುಮತಿ ಪಡೆಯಬೇಕು. ಗುರುತು ಪಡಿಸಿದ ಸ್ಥಳಗಳನ್ನು ಹೊರತುಪಡಿಸಿ, ನಗರದಾದ್ಯಂತ ಯಾವುದೇ ಸ್ಥಳಗಳಲ್ಲಿ ಚುನಾವಣಾ ಪ್ರಚಾರ ಸಾಮಗ್ರಿಗಳನ್ನು ಬಳಸುವುದನ್ನು ನಿಷೇಧಿಸಲಾಗಿದೆ.

“ಅನಧಿಕೃತ ಫ್ಲೆಕ್ಸ್ ಬ್ಯಾನರ್‌ಗಳನ್ನು ಅಳವಡಿಸುವವರ ವಿರುದ್ಧ ‘ಕರ್ನಾಟಕ ಮುಕ್ತ ಸ್ಥಳಗಳ ವಿರೂಪಗೊಳಿಸುವಿಕೆ ತಡೆ ಕಾಯಿದೆ 1981’ ಮತ್ತು ‘ಕರ್ನಾಟಕ ಮುನ್ಸಿಪಲ್ ಕಾರ್ಪೊರೇಷನ್ಸ್ ಕಾಯಿದೆ 1976’ರ ಅಡಿಯಲ್ಲಿ ಕ್ರಮ ಕೈಗೊಳ್ಳಲಾಗುವುದು” ಎಂದು ಪಾಲಿಕೆ ಆಯುಕ್ತ ಲಕ್ಷ್ಮೀಕಾಂತ್ ರೆಡ್ಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ರಾಜಕೀಯ ಪಕ್ಷಗಳು ಆಯೋಜಿಸುವ ಸಭೆಗಳಲ್ಲಿ ಧ್ವನಿವರ್ಧಕ ಅಳವಡಿಸಲು ಪಾಲಿಕೆಯಿಂದ ಅನುಮತಿ ಪಡೆಯುವುದು ಕಡ್ಡಾಯವಾಗಿದೆ” ಎಂದು ಸೂಚಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಉತ್ತರ ಕನ್ನಡ | ದಾಸ್ತಾನು ಆಗಿದ್ದ 18 ರಾಶಿ ಅದಿರಿಗೆ ಮುಕ್ತಿ

“ಸರ್ಕಾರಿ ಕಟ್ಟಡ ಮತ್ತು ಆವರಣಗಳಲ್ಲಿ ರಾಜಕೀಯ ಪಕ್ಷಗಳ ಪ್ರಚಾರ ಸಾಮಗ್ರಿಗಳನ್ನು ಪ್ರದರ್ಶಿಸುವಂತಿಲ್ಲ. ಒಂದು ವೇಳೆ ಸರ್ಕಾರಿ ಸ್ಥಳಗಳಲ್ಲಿ ಫ್ಲೆಕ್ಸ್‌ ಮತ್ತು ಬ್ಯಾನರ್‌ಗಳನ್ನು ಕಂಡರೆ ಯಾವುದೇ ಮುಲಾಜಿಲ್ಲದೆ ಅವುಗಳನ್ನು ತೆರವುಗೊಳಿಸುತ್ತೇವೆ” ಎಂದು ಸ್ಪಷ್ಟಪಡಿಸಿದ್ದಾರೆ.

“ಖಾಸಗಿ ಸ್ಥಳದಲ್ಲಿ ಅಳವಡಿಸಿದ ಚುನಾವಣಾ ಫ್ಲೆಕ್ಸ್‌ಗಳಿಗೆ ಸಂಬಂಧಿಸಿದಂತೆ ಪಾಲಿಕೆ ಮಧ್ಯಪ್ರವೇಶಿಸುವುದಿಲ್ಲ. ಏಕೆಂದರೆ, ಅದನ್ನು ಖಾಸಗಿ ಕಟ್ಟಡದ ಮಾಲೀಕರು ಮತ್ತು ಸಂಬಂಧಪಟ್ಟ ರಾಜಕೀಯ ಪಕ್ಷಗಳಿಗೆ ಬಿಡಲಾಗಿದೆ, ಆದರೆ, ಅವರು ತಮ್ಮ ಆವರಣದಲ್ಲಿ ಫ್ಲೆಕ್ಸ್‌ ಅಳವಡಿಸಲು ಮಾನ್ಯ ಅನುಮತಿ ತೆಗೆದುಕೊಳ್ಳಬೇಕು” ಎಂದು ಸೂಚಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...