ಮೈಸೂರು | ಬೆಟ್ಟಿಂಗ್‌ ದಂಧೆ: ಒಂದೇ ಕುಟುಂಬದ ಮೂವರು ಆತ್ಮಹತ್ಯೆ

Date:

ಐಪಿಎಲ್ ಮತ್ತು ಆನ್‌ಲೈನ್‌ ಬೆಟ್ಟಿಂಗ್‌ ದಂಧೆಯಲ್ಲಿ ಹಣ ಕಳೆದುಕೊಂಡು, ಸಾಲದ ಶೂಲಕ್ಕೆ ಸಿಲುಕಿಕೊಂಡು ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರು ಜಿಲ್ಲೆಯಲ್ಲಿ ನಡೆದಿದೆ.

ಮೈಸೂರು ಬಳಿಯ ಹಂಚ್ಯಾ ಗ್ರಾಮದ ಜೋಬಿ ಆಂಥೋನಿ, ಆತನ ಪತ್ನಿ ಶರ್ಮಿಳಾ ಹಾಗೂ ಸಹೋದರ ಜೋಷಿ ಆಂಥೋನಿ ಆತ್ಮಹತ್ಯೆಗೆ ಶರಣಾದವರು.

ಸೋಮವಾರ, ಜೋಷಿ ಅಂಥೋನಿ ಅವರು ಆತ್ಮಹತ್ಯೆ ಮಾಡಿಕೊಂಡಿದ್ದರು. ತಮ್ಮ ಸಾವಿಗೂ ಮುನ್ನ ವಿಡಿಯೋ ಮಾಡಿಟ್ಟಿದ್ದ ಜೋಷಿ, “ಆನ್‌ಲೈನ್‌ ಬೆಟ್ಟಿಂಗ್‌ಗಾಗಿ ನನ್ನ ತಮ್ಮ ಜೋಬಿ ಮತ್ತು ಆತನ ಪತ್ನಿ ಶರ್ಮಿಳಾ ನನ್ನಿಂದ ಸಾಲ ಮಾಡಿದ್ದಾರೆ. ಸಾಲ ಮರುಪಾವತಿ ಮಾಡಲು ಸಾಧ್ಯವಾಗುತ್ತಿಲ್ಲ. ಜೋಬಿ ಮತ್ತು ಶರ್ಮಿಳಾ ಮಾಡಿದ ಮೋಸದಿಂದಾಗಿ ಊರು ತುಂಬಾ ಸಾಲ ಮಾಡಿಕೊಂಡಿದ್ದೇವೆ. ನನ್ನ ತಂಗಿಯಿಂದಲೂ ಸಾಲ ಮಾಡಿಸಿ, ಮೋಸ ಮಾಡಿದ್ದಾರೆ. ಅವರ ವಿರುದ್ಧ ಕಾನೂನು ಕ್ರಮ ಜರುಗಸಬೇಕು” ಎಂದು ಹೇಳಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜೋಷಿ ಅವರು ವಿಡಿಯೋ ಮಾಡಿಟ್ಟು ಸಾವನ್ನಪ್ಪಿರುವ ಬಗ್ಗೆ ತಿಳಿದ ಜೋಬಿ ಆಂಥೋನಿ ಮತ್ತು ಶರ್ಮಿಳಾ ಕೂಡ ಮಂಗಳವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಇಬ್ಬರೂ ಬೆಟ್ಟಿಂಗ್‌ ದಂಧೆಯಲ್ಲಿ ಹಣ ಹಾಕಿ, ಹೆಚ್ಚು ಸಂಪಾದನೆ ಮಾಡಬಹುದೆಂಬ ಆಮಿಷಬಿದ್ದು, ಲಕ್ಷಾಂತರ ರೂ. ಸಾಲ ಮಾಡಿಕೊಂಡಿದ್ದರು ಎಂದು ವರದಿಯಾಗಿದೆ.

ನೆನಪಿಡಿ: ಸಮಸ್ಯೆಗಳಿಗೆ ಆತ್ಮಹತ್ಯೆ ಪರಿಹಾರವಲ್ಲ… ಆತ್ಮಹತ್ಯೆಗಳ ಕುರಿತು ಚರ್ಚಿಸುವುದು ಕೂಡ ಕೆಲವರಿಗೆ ಪ್ರಚೋದನೆ ನೀಡಬಹುದು. ಸಮಸ್ಯೆಗಳ ಬಗ್ಗೆ ಆಪ್ತರೊಂದಿಗೆ ಹಂಚಿಕೊಳ್ಳುವುದರಿಂದ, ಸಮಾಲೋಚನೆ ನಡೆಸುವುದರಿಂದ ಆತ್ಮಸ್ಥೈರ್ಯ ಹೆಚ್ಚುತ್ತದೆ. ಆತ್ಮಹತ್ಯೆಗಳನ್ನು ತಡೆಯಬಹುದು. ತುರ್ತು ಪರಿಸ್ಥಿತಿಯಿದ್ದರೆ ಕರೆ ಮೂಲಕ ವೈದ್ಯರನ್ನು ಸಂಪರ್ಕಿಸಿ. ಬೆಂಗಳೂರು ಸಹಾಯವಾಣಿ 080-25497777, ಬೆಳಗ್ಗೆ 10ರಿಂದ ಸಂಜೆ 8ರವರೆಗೆ, ಆರೋಗ್ಯ ಸಹಾಯವಾಣಿ 104.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...