ಮೈಸೂರು | ಚೆಕ್ ದುರುಪಯೋಗ; ಆರೋಗ್ಯಾಧಿಕಾರಿ ವಿರುದ್ಧ ಪ್ರಕರಣ ದಾಖಲು

Date:

ವ್ಯವಹಾರದ ಭದ್ರತೆಗಾಗಿ ನೀಡಿದ್ದ 4.5 ಲಕ್ಷ ರೂ. ಚೆಕ್‌ಅನ್ನು​​ ದುರುಪಯೋಗ ಮಾಡಿಕೊಂಡ ಆರೋಪ ಮೈಸೂರು ಮಹಾನಗರ ಪಾಲಿಕೆ ಅಧಿಕಾರಿಗಳ ವಿರುದ್ಧ ಕೇಳಿಬಂದಿದೆ. ಪಾಲಿಕೆ ಆರೋಗ್ಯಾಧಿಕಾರಿ ಸೇರಿದಂತೆ ಇಬ್ಬರ ವಿರುದ್ಧ ಪ್ರಕರಣ ದಾಖಲಾಗಿದೆ.

ಮೈಸೂರಿನ ಸರಸ್ವತಿಪುರಂ ನಿವಾಸಿ ಮೀರಾ ಎಂಬವರು ಸರಸ್ವತಿಪುರಂ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಅವರ ದೂರಿನ ಆಧಾರದ ಮೇಲೆ ಪಾಲಿಕೆ ಹಿರಿಯ ಆರೋಗ್ಯಾಧಿಕಾರಿ ವೆಂಕಟೇಶ್ ಮತ್ತು ಹಾಸನ ನಿವಾಸಿ ಕೇಶವಮೂರ್ತಿ ಎಂಬುವರ ವಿರುದ್ಧ ವಂಚನೆ ಪ್ರಕರಣ ದಾಖಲಾಗಿದೆ.

ದೂರುದಾರೆ ಮೀರಾ ಅವರು ಸರಸ್ವತಿಪುರಂನಲ್ಲಿ ಅನ್ನಪೂರ್ಣ ಆಫ್ ಸೆಟ್ ಮುದ್ರಣಾಲಯ ನಡೆಸುತ್ತಿದ್ದಾರೆ. ಈ ವ್ಯವಹಾರದ ಭದ್ರತೆಗಾಗಿಯೇ ಚೆಕ್‌ ನೀಡಿದ್ದರು ಎಂದು ಹೇಳಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...