ಮೈಸೂರು | ಯೋಗಾ ಹಬ್ಬನ್ನಾಗಿಸಲು ಕೇಂದ್ರ ಸರ್ಕಾರದ ಚಿಂತನೆ : ಜಿಲ್ಲಾ ಆಯುಷ್ ಅಧಿಕಾರಿ ಡಾ ಸಿ ರೇಣುಕಾದೇವಿ ಹೇಳಿಕೆ

Date:

ಮೈಸೂರನ್ನು ಯೋಗ ಹಬ್ಬನ್ನಾಗಿಸಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ ಎಂದು ಜಿಲ್ಲಾ ಆಯುಷ್ ಅಧಿಕಾರಿ ಡಾ ಸಿ ರೇಣುಕಾದೇವಿ ಹೇಳಿದರು.

ಮೈಸೂರು ಯೋಗ ಅಸೋಸಿಯೇಷನ್ ಹಾಗೂ ಹಿಮಾಲಯ ಪ್ರತಿಷ್ಠಾನ ವತಿಯಿಂದ ನಗರದ ನಮೋ ಯೋಗ ಭವನದಲ್ಲಿ ಭಾನುವಾರ ಆಯೋಜಿಸಿದ್ದ ಯೋಗ ಸಾಧಕರಿಗೆ ಯೋಗ ವಿಭೂಷಣ ಹಾಗೂ ಯೋಗ ಭೂಷಣ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಪಾಲ್ಗೊಂಡಿದ್ದರು.

” ಮೈಸೂರು ಯೋಗ ಪರಂಪರೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡಿದೆ. ಪ್ರಧಾನಿ ನರೇಂದ್ರ ‌ಮೋದಿ ಅವರು ಮೈಸೂರಿನಲ್ಲಿ ನಡೆದ ಯೋಗಾ ಕಾರ್ಯಕ್ರಮದಲ್ಲಿ ಭಾಗವಹಿಸಿದ ಬಳಿಕ ಮೈಸೂರು ಮತ್ತಷ್ಟು ಪ್ರಜ್ವಲಿಸುತ್ತಿದೆ. ಈ ನಿಟ್ಟಿನಲ್ಲಿ ಕೇಂದ್ರ ‌ಸರ್ಕಾರ ಆಯುಷ್ ಇಲಾಖೆಯಿಂದ ಮೈಸೂರನ್ನು ಯೋಗ ಹಬ್ ಮಾಡಲು ಸೂಚನೆಗಳು ಬಂದಿವೆ ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹಿರಿಯ ಪತ್ರಕರ್ತ ಅಂಶಿ ಪ್ರಸನ್ನ ಕುಮಾರ್ ಮಾತನಾಡಿ ” ಮನುಷ್ಯನಲ್ಲಿ ಎಷ್ಟೇ ಸಂಪತ್ತು ಇದ್ದರೂ ಆರೋಗ್ಯವೇ ಆತನ ದೊಡ್ಡ‌ ಸಂಪತ್ತು. ಇತ್ತೀಚಿನ ದಿನಗಳಲ್ಲಿ ‌ಆರೋಗ್ಯದ ಬಗ್ಗೆ ಎಲ್ಲರಿಗೂ ಕಾಳಜಿ ಬರುತ್ತಿದೆ. ಪ್ರತಿಯೊಬ್ಬರು ದಿನದ ಒಂದು ಸಮಯದಲ್ಲಾದರೂ ಯೋಗಾಭ್ಯಾಸವನ್ನು ಮಾಡಬೇಕು. ಯೋಗಕ್ಕೆ ಮೈಸೂರು ಅರಸರು ರಾಜಾಶ್ರಯ ನೀಡಿದರು. ಅವರು ನೀಡಿದ ಪ್ರೋತ್ಸಾಹದ ಫಲವಾಗಿ ಮೈಸೂರು ಇಂದು ವಿಶ್ವದೆಲ್ಲೆಡೆ ಗುರುತಿಸಿಕೊಂಡಿದೆ. ನಾನಾ ದೇಶದ ಜನರು ಇಲ್ಲಿಗೆ ಯೋಗ ಕಲಿಯಲು ಬರುತ್ತಿದ್ದಾರೆ. ಇದು ಮೈಸೂರಿನ ಸುಯೋಗ ” ಎಂದರು.

ಸಾಂಸ್ಕೃತಿಕ ಚಿಂತಕ ಡಾ ಕೆ ರಘುರಾಮ್ ವಾಜಪೇಯಿ ಮಾತನಾಡಿ ‘ ಯೋಗ ಎಂದರೆ ಕೇವಲ ಆಸನವಲ್ಲ. ಅಷ್ಟಾಂಗವನ್ನು ಅಳವಡಿಸಿಕೊಂಡು ಅಭ್ಯಾಸ ಮಾಡಿದರಷ್ಟೆ ಯೋಗ ಸಿದ್ದಿಯಾಗುತ್ತದೆ ‘ ಎಂದು ತಿಳಿಸಿದರು.

ಮೈಸೂರು ಯೋಗ ಅಸೋಸಿಯೇಷನ್ ನ ಅಧ್ಯಕ್ಷ ಡಾ ಸಿ ರಮೇಶ್ ‌ಶೆಟ್ಟಿ ಮಾತನಾಡಿ ‘ ಯೋಗ ಕೇವಲ ಒಂದು ಗಂಟೆಗೆ ಸೀಮಿತವಾಗಬಾರದು. ಯೋಗವು ನಮ್ಮ ಜೀವನದ ಒಂದು ಭಾಗವಾಗಬೇಕು ‘ ಎಂದರು.

ಪೂರ್ಣಿಮಾ ಆಸ್ಪತ್ರೆಯ ನಿರ್ದೇಶಕಿ ಡಾ ಪೂರ್ಣಿಮಾ ಮಾತನಾಡಿ ‘ ಅಲೋಪತಿ ಚಿಕಿತ್ಸಾ ಪದ್ಧತಿ ರೋಗಕ್ಕೆ ಪ್ರಾಥಮಿಕ ಪರಿಹಾರ ನೀಡಬಹುದು. ಆದರೆ ಶಾಶ್ವತ ಪರಿಹಾರ ನೀಡುವುದಿಲ್ಲ. ಆದರೆ ಯೋಗ, ಧ್ಯಾನ, ಪ್ರಾಣಾಯಾಮವನ್ನು ಜೀವನದಲ್ಲಿ ಅಳವಡಿಸಿಕೊಂಡೆರೆ ದೇಹಕ್ಕೆ ರೋಗ ಬರದಂತೆ ತಡೆಯಬಹುದಾಗಿದೆ ‘ ಎಂದು ತಿಳಿಸಿದರು.

ಹಿರಿಯ ಯೋಗ ಸಾಧಕರಾದ ಕೆ ಆರ್ ಜಗನ್ನಾಥಯ್ಯ ಶೆಟ್ಟಿ ಮಾತನಾಡಿ ‘ ಯೋಗವು ಹಲವು ರೋಗಗಳಿಗೆ ರಾಮಭಾಣವಾಗಿದೆ. ಹಲವಾರು ಕಾಯಿಲೆಗಳು ಯೋಗದಿಂದ ಗುಣಮುಖವಾಗಿದೆ. ಪ್ರತಿಯೊಬ್ಬರು ಯೋಗಾಭ್ಯಾಸದಲ್ಲಿ ತೊಡಗಿಸಿಕೊಳ್ಳಬೇಕು ‘ ಎಂದರು.

ಹಿರಿಯ ಯೋಗ ಸಾಧಕರಾದ ಕೆ ಅರ್ ಜಗನ್ನಾಥಯ್ಯ ಶೆಟ್ಟಿ, ಟಿ ಜಲೇಂದ್ರ ಕುಮಾರ್ ಅವರಿಗೆ ಯೋಗ ವಿಭೂಷಣ ಪ್ರಶಸ್ತಿ ಹಾಗೂ ನಾಗಮಲ್ಲು, ಎಚ್ ನಾಗರಾಜಪ್ಪ, ಕೆ ಚಂದ್ರು, ಕುಮುದಾ, ಎಚ್ ಪಿ ನವೀನ್ ಕುಮಾರ್ ಹಾಗೂ ನಿಷ್ಕಲ್‌ ಅವರಿಗೆ ಯೋಗ ಭೂಷಣ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.

ಈ ಸುದ್ದಿ ಓದಿದ್ದೀರಾ? ಮೈಸೂರು | ಅರಣ್ಯ ಪಾಲಾದ ಲಕ್ಷ್ಮಣಪುರ ಗ್ರಾಮ : ಪರಿಹಾರವೂ ಇಲ್ಲ, ಪುನರ್ವಸತಿಯು ಇಲ್ಲ

ಕಾರ್ಯಕ್ರಮದಲ್ಲಿ ಹಿಮಾಲಯ ಪ್ರತಿಷ್ಠಾನದ ಅಧ್ಯಕ್ಷ ಎನ್ ಅನಂತ್, ಉಪಾಧ್ಯಕ್ಷರಾದ ಎನ್ ಪಶುಪತಿ, ರಾಮಕೃಷ್ಣ ಪರಮಹಂಸ ಸೇವಾ ಸಂಸ್ಥೆ ಕಾರ್ಯದರ್ಶಿ ಕೆಂಪ ಲಿಂಗರಾಜು, ಮೈಸೂರು ಯೋಗ ಒಕ್ಕೂಟದ ಕಾರ್ಯಾಧ್ಯಕ್ಷ ಬಿ ಶಾಂತಾರಾಂ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...