ಮೈಸೂರು | ನೀರಿನ ಸಮಸ್ಯೆ ನಿವಾರಣೆಗೆ ಗಮನ ಹರಿಸುವಂತೆ ಅಧಿಕಾರಿಗಳಿಗೆ ಸೂಚನೆ

Date:

ತಿ.ನರಸೀಪುರ ತಾಲೂಕಿನ 36 ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಗಮನ ಹರಿಸುವಂತೆ ಮೈಸೂರು ಜಿಲ್ಲಾ ಪಂಚಾಯಿತಿ ಸಿಇಒ ಕೆ ಎಂ ಗಾಯತ್ರಿ ಅವರು ಎಲ್ಲ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಸೂಚಿಸಿದರು.

ತಿ.ನರಸೀಪುರದ ತಾಲೂಕು ಪಂಚಾಯಿತಿ ಕಚೇರಿಯಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಾನುವಾರುಗಳಿಗೆ ಮೇವು ಮತ್ತು ಕುಡಿಯುವ ನೀರು ಒದಗಿಸುವಂತೆ ಪಂಚಾಯಿತಿ ಅಧಿಕಾರಿಗಳಿಗೆ ಸೂಚಿಸಿದರು.

ಎಲ್ಲ ಮನೆಗಳಿಗೆ ನಲ್ಲಿ ನೀರಿನ ಸಂಪರ್ಕ ಒದಗಿಸುವ ಜಲ ಜೀವನ್ ಮಿಷನ್, ಬಡತನ ನಿರ್ಮೂಲನೆ ಮತ್ತು ಯೋಜನೆಯಡಿ ನೋಂದಾಯಿತ ಎಲ್ಲ ಜಾಬ್ ಕಾರ್ಡ್‌ ದಾರರಿಗೆ 150 ದಿನಗಳ ಕೆಲಸದ ಗ್ಯಾರಂಟಿಗಳನ್ನು ಒದಗಿಸುವ ಮನರೇಗಾ ಅನುಷ್ಠಾನ, ಸ್ವಚ್ಛ ಭಾರತ್ ಮಿಷನ್, ಮಿಷನ್ ಅಂತ್ಯೋದಯ, ರಾಷ್ಟ್ರೀಯ ನಗರ ಮತ್ತು ಗ್ರಾಮೀಣ ಜೀವನೋಪಾಯ ಕಾರ್ಯಕ್ರಮ, ಡಿಜಿಟಲ್ ಗ್ರಂಥಾಲಯದಲ್ಲಿ ಗ್ರಾಮ ಪಂಚಾಯಿತಿ ಸಾಧಿಸಿದ ಪ್ರಗತಿಯನ್ನು ಗಾಯತ್ರಿ ಪರಿಶೀಲಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಕಾಂಗ್ರೆಸ್ ಗ್ಯಾರಂಟಿಗಳು ಜನರಿಗೆ ತಲುಪದಂತೆ ಕೇಂದ್ರ ಸರ್ಕಾರದಿಂದ ಷಡ್ಯಂತ್ರ: ಪ್ರಿಯಾಂಕ್‌ ಖರ್ಗೆ ಕಿಡಿ

ಗರ್ಗೇಶ್ವರಿ ಗ್ರಾಮ ಪಂಚಾಯತ್ ಸ್ಥಾಪಿಸಿರುವ ಡಿಜಿಟಲ್ ಗ್ರಂಥಾಲಯ ಮತ್ತು ಘನತ್ಯಾಜ್ಯ ಸಂಸ್ಕರಣಾ ಘಟಕವನ್ನು ಅವರು ಪರಿಶೀಲಿಸಿದರು.

ಸಭೆಯಲ್ಲಿ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಸಿ.ಕೃಷ್ಣ, ಗ್ರಾಮೀಣ ಕುಡಿಯುವ ನೀರು ಸರಬರಾಜು ಸಹಾಯಕ ಕಾರ್ಯಪಾಲಕ ಎಂಜಿನಿಯರ್ ರಶ್ಮಿ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...