ಮೈಸೂರು | ಕುಸಿದು ಬಿದ್ದ ಸೇತುವೆ; ನಾಲೆಗೆ ಜಾರಿದ ಲಾರಿ

Date:

ಭತ್ತ ತುಂಬಿದ ಲಾರಿಯೊಂದು ತೆರಳುತ್ತಿದ್ದಾಗ ಸೇತುವೆ ಕುಸಿದು ಬಿದ್ದಿರುವ ಘಟನೆ ಮೈಸೂರು ಜಿಲ್ಲೆಯ ಸರಗೂರು ತಾಲೂಕಿನ ಹಾಲುಗಡದಲ್ಲಿ ನಡೆದಿದೆ. ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಚಾಲಕ ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.

ಹಾಲುಗಡ ಬಳಿ ಕಬಿಸಿ ಬಲದಂಡೆ ನಾಲೆಯ ಮೇಲೆ ನಿರ್ಮಿಸಲಾಗಿದ್ದ ಸೇತುವೆಯು ಭತ್ತದ ಮೂಟೆಗಳನ್ನು ಹೊತ್ತ ಲಾರಿ ಸಾಗುತ್ತಿದ್ದಾಗ ಕುಸಿದು ಬಿದ್ದಿದೆ. ಈ ಸೇತುವೆಯು ಚಿಕ್ಕದೇವಮ್ಮನ ಬೆಟ್ಟ ಮತ್ತು ವಿವಿಧ ಗ್ರಾಮಗಳಿಗೆ ತೆರಳುವ ಪ್ರಮುಖ ರಸ್ತೆಯ ಭಾಗವಾಗಿತ್ತು. ಇದೀಗ, ವಿವಿಧ ಗ್ರಾಮಗಳ ನಡುವಿನ ಸಂಪರ್ಕಕೊಂಡಿ ಕಳಚಿದಂತಾಗಿದೆ.

ಭತ್ತದ ಮೂಟೆಗಳು ತುಂಬಿದ್ದ ಲಾರಿಯು ಸರಗೂರು ಬಳಿಯ ಇಟ್ನ ಗ್ರಾಮದಿಂದ ತಮಿಳುನಾಡಿಗೆ ತೆರಳುತ್ತಿತ್ತು. ಲಾರಿಯು ಸೇತುವೆ ಮೇಲೆ ಬಂದಾಗ, ಸೇತುವೆ ಕುಸಿದಿದೆ. ಲಾರಿ ನಾಲೆಗೆ ಜಾರಿದೆ. ಅದೃಷ್ಟವಶಾತ್, ಚಾಲಕಿಗೆ ಯಾವುದೇ ಅಪಾಯವಾಗಿಲ್ಲ. ಲಾರಿಗೂ ಹೆಚ್ಚಿನ ಹಾನಿಯಾಗಿಲ್ಲ ಎಂದು ವರದಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸೇತುವೆಯು ಹಲವು ದಶಕಗಳಷ್ಟು ಹಳೆಯದಾಗಿದ್ದು, ದುರಸ್ತಿ ಮಾಡಿಸುವಂತೆ ಗ್ರಾಮಸ್ಥರು ಅಧಿಕಾರಿಗಳಿಗೆ ಹಲವು ಬಾರಿ ಮನವಿ ಸಲ್ಲಿಸಿದ್ದರು. ಆದರೂ, ಯಾವುದೇ ಕ್ರಮ ಕೈಗೊಳ್ಳಲಾಗಿಲ್ಲ. ಪರಿಣಾಮವಾಗಿ, ಈ ಅವಘಡ ನಡೆದಿದೆ ಎಂದು ಸ್ಥಳೀಯರು ಅಸಮಧಾನ ವ್ಯಕ್ತಪಡಿಸಿದ್ದಾರೆ.

ಘಟನಾ ಸ್ಥಳಕ್ಕೆ ಕಬಿನಿ ಜಲಾಶಯದ ಕಾರ್ಯಪಾಲಕ ಅಭಿಯಂತರ ಕೆ ಉಷಾ ಹಾಗೂ ಸರಗೂರು ಪೊಲೀಸ್‌ ಠಾಣೆಯ ಎಸ್‌ಐ ಕಿರಣ್ ಕುಮಾರ್ ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.

ಈ ವರದಿ ಓದಿದ್ದೀರಾ?: ಯುವತಿಯ ಅಪಹರಣ- ಪ್ರತ್ಯಕ್ಷ ಸಾಕ್ಷಿಯಿಂದ ಎಸ್‌ಐಟಿಗೆ ದೂರು; ಅಲ್ಲಿದ್ದ ಆ ವ್ಯಕ್ತಿ ಯಾರು ಗೊತ್ತೇ?

“ಹಳೆಯದಾದ ಸೇತುವೆಯ ಮೇಲೆ ಭಾರೀ ವಾಹನಗಳು ಸಂಚರಿಸದಂತೆ ಎಚ್ಚರಿಕೆ ವಹಿಸಲು ಗ್ರಾಮಸ್ಥರು ಮತ್ತು ರೈತರಿಗೆ ಸೂಚಿಸಿದ್ದೆವು. ಆದರೂ, ದೊಡ್ಡ ವಾಹನಗಳು ಇದೇ ಸೇತುವೆ ಮೇಲೆ ಸಂಚರಿಸುತ್ತಿವೆ. ಅದಕ್ಕಾಗಿ, ವಾಹನಗಳನ್ನು ತಡೆಯಲು ಬ್ಯಾರಿಕೇಡ್‌ಗಳನ್ನು ಹಾಕಲಾಗಿತ್ತು. ಆದರೆ, ಲಾರಿ ಚಾಲಕರು ರಾತ್ರಿ ವೇಳೆ, ಬ್ಯಾರಿಕೇಡ್‌ಗಳನ್ನು ಸರಿಸಿ, ಸೇತುವೆ ಮೇಲೆ ಲಾರಿಗಳನ್ನು ಚಲಾಯಿಸುತ್ತಿದ್ದಾರೆ” ಎಂದು ಉಷಾ ಆರೋಪಿಸಿದ್ದಾರೆ.

“ಹೊಸ ಸೇತುವೆ ನಿರ್ಮಾಣಕ್ಕಾಗಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುತ್ತದೆ ರೈತರ ಅನುಕೂಲಕ್ಕೆ ತಾತ್ಕಾಲಿಕವಾಗಿ ಬೇರೆ ಸೇತುವೆ ನಿರ್ಮಾಣ ಮಾಡಲು ಮುಂದಾಗುತ್ತೇವೆ” ಎಂದು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...