ಅಮಿತ್‌ ಶಾ ಹೇಳಿಕೆಗೆ ಖಂಡನೆ; ಮೈಸೂರು ಬಂದ್‌ ಭಾಗಶಃ ಯಶಸ್ವಿ

Date:

ಸಂವಿಧಾನ ಶಿಲ್ಪಿ ಡಾ ಬಿ ಆರ್ ಅಂಬೇಡ್ಕರ್‌ ಅವರ ಕುರಿತಾಗಿ ಕೇಂದ್ರ ಸಚಿವ ಅಮಿತ್‌ ಶಾ ಅವರು ಸಂಸತ್ತಿನಲ್ಲಿ ನೀಡಿದ್ದ ಹೇಳಿಕೆಯನ್ನು ಖಂಡಿಸಿ ಹಮ್ಮಿಕೊಂಡಿದ್ದ ಮೈಸೂರು ಬಂದ್‌ ಭಾಗಶಃ ಯಶಸ್ವಿಯಾಗಿದೆ.

ಉರಿಲಿಂಗ ಪೆದ್ದಿ ಮಠದ ಜ್ಞಾನ ಪ್ರಕಾಶ ಸ್ವಾಮೀಜಿ ಹಾಗೂ ಮಾಜಿ ಮಹಾಪೌರ ಪುರುಷೋತ್ತಮ್ ಅವರ ನೇತೃತ್ವದಲ್ಲಿ ಮೈಸೂರಿನ ಸಬ್‌ ಅರ್ಬನ್‌ ಬಸ್ ನಿಲ್ದಾಣದ ಮುಂಭಾಗದಲ್ಲಿ ಪ್ರತಿಭಟನಾಕಾರರು ಜಮಾಯಿಸಿ ಕೇಂದ್ರ ಸಚಿವ ಅಮಿತ್‌ ಶಾ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದರು.

ಅಂಬೇಡ್ಕರ್‌ ಬಗ್ಗೆ ಹಗುರವಾಗಿ ಮಾತನಾಡಿದ ಕಾರಣ ಅಮಿತ್‌ ಶಾ ದೇಶವ್ಯಾಪಿ ಆಕ್ರೋಶಕ್ಕೆ ಕಾರಣರಾಗಿದ್ದರು. ಅವರ ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಬಂದ್‌ಗೆ ಕರೆ ನೀಡಲಾಗಿತ್ತು. ಈ ಹಿನ್ನೆಲೆಯಲ್ಲಿ ಮೈಸೂರು ನಗರದಲ್ಲಿಯೂ ಅಂಗಡಿ ಮುಂಗಟ್ಟುಗಳನ್ನು ಮುಚ್ಚುವ ಮೂಲಕ ವ್ಯಾಪಾರಸ್ಥರು ಬಂದ್‌ಗೆ ಬೆಂಬಲ ಸೂಚಿಸಿದರು. ಬಂದ್ ಪರಿಣಾಮ ಬಸ್ ಸಂಚಾರ ಅಸ್ತವ್ಯಸ್ತವಾಗಿ ಪ್ರಯಾಣಿಕರಿಗೆ ಅಡಚಣೆಯಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ?: ಬೀದರ್‌ ಬಂದ್‌ಗೆ ವಿವಿಧ ಸಂಘಟನೆಗಳ ಬೆಂಬಲ

ಬ್ಯಾಂಕ್, ಸರ್ಕಾರಿ ಕಚೇರಿಗಳು ಎಂದಿನಂತೆ ಕೆಲಸ ನಿರ್ವಹಣೆ ಮಾಡಿವೆ. ಶಾಲೆ ಕಾಲೇಜುಗಳಿಗೆ ರಜೆ ನೀಡಿರಲಿಲ್ಲ. ಆದರೆ ಕೆಲವು ಶಾಲೆ ಕಾಲೇಜು ಮಕ್ಕಳ ಹಾಜರಾತಿ ಅನುಸಾರ ರಜೆ ನೀಡುವ ತೀರ್ಮಾನ ಕೈಗೊಂಡಿದ್ದವು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...