ಮೈಸೂರು | ಕಾವೇರಿ ಕುಡಿಯುವ ನೀರು ಸರಬರಾಜು ಮಾಡುವಂತೆ ದಸಂಸ ಮನವಿ

Date:

ಮೈಸೂರಿನ ಏಕಲವ್ಯ ನಗರ ಹಾಗೂ ಚಾಮುಂಡೇಶ್ವರಿ ರೈಲ್ವೆ ಬಡಾವಣೆಯ ನಿವಾಸಿಗಳಿಗೆ ಕಾವೇರಿ ಶುದ್ಧ ಕುಡಿಯುವ ನೀರು ಸರಬರಾಜು ಮಾಡುವಂತೆ, ಸರ್ಕಾರದಿಂದ ಮಂಜೂರಾಗಿ ಕಾಮಗಾರಿ ಪೂರ್ಣಗೊಂಡಿದ್ದರೂ ಈ ಎರಡು ಬಡಾವಣೆಗಳಿಗೆ ನಗರ ನೀರು ಸರಬರಾಜು ಒಳಚರಂಡಿ ಮಂಡಳಿಯವರು ನೀರನ್ನು ಪೂರೈಕೆ ಮಾಡದೆ ವಿಳಂಬ ಮಾಡುತ್ತಿರುವುದನ್ನು ಖಂಡಿಸಿ, ಮೈಸೂರಿನ ಸರಸ್ವತಿಪುರಂನಲ್ಲಿರುವ ಜಲಮಂಡಳಿ ಕಾರ್ಯಪಾಲಕ ಅಭಿಯಂತ ಆಸೀಫ್‌ ಖಲೀಲ್‌ ರವರಿಗೆ ಮನವಿ ಪತ್ರ ಸಲ್ಲಿಸಿದರು.

ದಸಂಸ ಮುಖಂಡ ನಿಂಗರಾಜ್‌ ಮಲ್ಲಾಡಿ ಮಾತನಾಡಿ ” ಏಕಲವ್ಯ ನಗರ ಹಾಗೂ ಚಾಮುಂಡೇಶ್ವರಿ ಬಡಾವಣೆಯ ನಿವಾಸಿಗಳು ಕಲುಷಿತ ನೀರನ್ನು ಕುಡಿದು ಅನೇಕ ರೋಗ, ರುಜಿನಗಳಿಂದ ಬಳಲುತ್ತಾ ತುಂಬಾ ತೊಂದರೆಯನ್ನು ಅನುಭವಿಸುತ್ತಿದ್ದಾರೆ. ಆದ್ದರಿಂದ ಜಲಮಂಡಳಿ ವತಿಯಿಂದ ಕೂಡಲೆ ಶುದ್ಧ ಕುಡಿಯವು ನೀರನ್ನು ಪೂರೈಕೆ ಮಾಡಿಕೊಡಬೇಕು ಎಂದು ಅಧಿಕಾರಿಗಳಲ್ಲಿ ಮನವಿ ಮಾಡಿರುವುದಾಗಿ ” ಹೇಳಿದರು.

ಮನವಿ ಸ್ವೀಕರಿಸಿ ಮಾತನಾಡಿದ ಕಾರ್ಯಪಾಲಕ ಅಭಿಯಂತ ಆಸೀಫ್‌ ಖಲೀಲ್ ” ಕಾಮಗಾರಿ ಪೂರ್ಣಗೊಂಡಿದ್ದು, ಕೆಲವು ತಾಂತ್ರಿಕ ಕಾರಣದಿಂದ ಈ ಎರಡೂ ಬಡಾವಣೆಗಳಿಗೆ ಶುದ್ಧ ಕುಡಿಯುವ ನೀರನ್ನು ಪೂರೈಕೆ ಮಾಡಲಾಗಿಲ್ಲ. ಕೂಡಲೇ ಮೇಲಾಧಿಕಾರಿಗಳ ಗಮನಕ್ಕೆ ತಂದು ಸಮಸ್ಯೆಗಳನು ಪರಿಹರಿಸಿ ನೀರನ್ನು ಪೂರೈಕೆ ಮಾಡಲಾಗುವುದು ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಳಿಕ, ಜಲದರ್ಶಿನಿಯಲ್ಲಿ ದಸಂಸ ಕಾರ್ಯಕರ್ತರ ಸಭೆ ನಡೆಸಿ ದಲಿತರ, ಅಲೆಮಾರಿ ಸಮುದಾಯಗಳ ಸಮಸ್ಯೆಗಳ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವರಿಕೆ ಮಾಡಿ ಈ ಬಾರಿಯ ಬಜೆಟ್ ನಲ್ಲಿ ಜಾರಿ ಮಾಡುವಂತೆ ಹಾಕ್ಕೋತ್ತಾಯ
ಸಲ್ಲಿಸುವ ನಿರ್ಣಯ ಕೈಗೊಂಡರು.

ಹಕ್ಕೋತ್ತಾಯಗಳು:

  • ಈ ಬಾರಿಯ ಬಜೆಟ್‌ನಲ್ಲಿ ದಲಿತರಿಗೆ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ಹೆಚ್ಚು ಹಣ ಮೀಸಲಿಡಬೇಕು. ಮೀಸಲಿಟ್ಟ ಹಣವನ್ನು ಗ್ಯಾರಂಟಿಗಳಿಗೆ ಬಳಕೆ ಮಾಡಿಕೊಳ್ಳಬಾರದು.
  • ಮೈಸೂರು ನಗರದಲ್ಲಿ ಹಲವಾರು ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ಡಾ ಬಿ ಆರ್ ಅಂಬೇಡ್ಕರ್‌ ಭವನದ ಕಾಮಗಾರಿಯನ್ನು ಸರ್ಕಾರದ ವತಿಯಿಂದ ಅಗತ್ಯ ಹಣ ಬಿಡುಗಡೆಗೊಳಿಸಿ ಪೂರ್ಣಗೊಳಿಸಬೇಕು.
  • ರಾಜ್ಯದ ಪರಿಶಿಷ್ಟ ಜಾತಿ/ಪಂಗಡ ಮತ್ತು ಹಿಂದುಳಿದ ಜಾತಿ ನಿರುದ್ಯೋಗಿ ಯುವಕ, ಯುವತಿಯರಿಗೆ ತರಬೇತಿ ನೀಡಿ ಕಾರ್ಖಾನೆಗಳಿಗೆ ಮಾಲೀಕತ್ವ ನೀಡುವ ಯೋಜನೆಗಳನ್ನು ಸರ್ಕಾರ ರೂಪಿಸಬೇಕು.
  • ವೃದ್ಧಾಪ್ಯ ವೇತನ, ವಿಧವಾ ವೇತನ, ಅಂಗವಿಕಲರ ವೇತನದಾರರು ಸಂಕಷ್ಟದಲ್ಲಿದ್ದು, ಪ್ರತಿ ತಿಂಗಳ ಮಾಸಾಶನವನ್ನು ತಲಾ 3000 ರೂ ಗಳಿಗೆ ಹೆಚ್ಚಿಸಬೇಕು.

ಸಭೆಯಲ್ಲಿ ರಾಜ್ಯ ಅಲೆಮಾರಿ, ಅರೆ ಅಲೆಮಾರಿ ಜನಾಂಗಗಳ ಒಕ್ಕೂಟದ ರಾಜ್ಯಾಧ್ಯಕ್ಷ ವೈ ಕುಮಾರ್‌,ದಸಂಸ ಮುಖಂಡ ದೇವೇಂದ್ರ ಕುಳುವಾಡಿ, ಕಿರಿಜಾಜಿ ಗಜೇಂದ್ರ, ವೆಂಕಟೇಶ, ಶ್ರೀಧರ, ನಂದನ್‌ ಕುಮಾರ್‌, ಲೋಕೇಶ, ಸ್ವಾಮಿ, ಮಂಜಪ್ಪ, ಸತೀಶ, ಮಲ್ಲೇಶ, ಶ್ರೀನಿವಾಸ, ಹರೀಶ, ಅಂಗವಿಕಲರ ಸಂಘದ ಅಧ್ಯಕ್ಷ ಶಿವಶೆಟ್ಟಿ ಕೆರೆಯೂರು, ತಿಮ್ಮರಾಯಿ, ಕುಮಾರ,ಶ್ರೀಧರ, ದೇವರಾಜು, ಸಿಂಗೇಗೌಡ,ಆರಾಧ್ಯ, ಲೋಕೇಶ, ಸ್ವಾಮಿ, ಸತೀಶ, ಮಹಿಳಾ ಸದಸ್ಯರಾದ ರಾಜೇಶ್ವರಿ, ಶೈಲಜಾ, ಚಿಕ್ಕಮಾದೇವಮ್ಮ, ರಾಣಿ ಮುಂತಾದವರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...