ಮೈಸೂರು | ವಾಹನ ತಪಾಸಣೆ ಹೆಸರಲ್ಲಿ ಹಗಲು ದರೋಡೆ; ಸ್ಥಳೀಯರ ಆರೋಪ

Date:

ಮೈಸೂರು ನಗರ ಪ್ರದೇಶಗಳಲ್ಲಿ ನಗರ ಸಂಚಾರ ಪೊಲೀಸರಿಂದ ವಾಹನ ತಪಾಸಣೆ ನಡೆಯುತ್ತಿದೆ. ನಗರ ಸಂಚಾರ ಪೊಲೀಸರು ತಪಾಸಣೆ ವೇಳೆ ಎಲ್ಲ ವಾಹನಗಳನ್ನು ತಡೆದು, ಗಂಟೆಗಟ್ಟಲೆ ನಿಲ್ಲಿಸಿಕೊಂಡು ಸಮಯ ವ್ಯರ್ಥ ಮಾಡುತ್ತಿದ್ದಾರೆ ಎಂದು ಸಾರ್ವಜನಿಕರು ಆರೋಪಿಸುತ್ತಿದ್ದಾರೆ.

“ನಗರದ ಸಬರ್‌ ರಸ್ತೆ, ಅರಮನೆ ರಸ್ತೆ ಆರ್‌ ಗೇಟ್‌ ಬಳಿ ಸಂಚಾರ ಪೊಲೀಸರ ದಂಡು ಜಮಾಯಿಸಿದ್ದು, ತಪಾಸಣೆ ಹೆಸರಿನಲ್ಲಿ ಎಲ್ಲ ವಾಹನಗಳನ್ನು ತಡೆದು ಹಣ ವಸೂಲಿ ಮಾಡುತ್ತಿದ್ದಾರೆ. ಮೇಲ್ನೋಟಕ್ಕೆ ಹಗಲು ದರೋಡೆಯಂತೆ ಕಂಡುಬರುತ್ತಿದೆ” ಎಂದು ಸ್ಥಳೀಯ ವಾಹನ ಸವಾರರು ಆರೋಪಿಸಿದ್ದಾರೆ.

ವಾಹನ ತಪಾಸಣೆ

“ಪರೀಕ್ಷೆ ಮುಗಿಸಿಕೊಂಡು, ಮುಂದಿನ ಪರೀಕ್ಷೆಗೆ ಕೆಲವು ನೋಟ್ಸ್‌ಗಳನ್ನು ತೆಗೆದುಕೊಳ್ಳಲು ಅರಮನೆ ರಸ್ತೆ ಮಾರ್ಗದಲ್ಲಿ ಹೋಗುತ್ತಿದ್ದಾಗ ಆರ್‌ ಗೇಟ್‌ ಬಳಿ ತನ್ನ ವಾಹನವನ್ನು ತಡೆದು ಗಂಟೆ ಗಟ್ಟಲೆ ನಿಲ್ಲಿಸಿಕೊಂಡಿದ್ದಾರೆ. ದಾಖಲೆಗಳೆಲ್ಲವನ್ನು ತೋರಿಸಿದರೂ ಯಾವಾಗಲೋ ಸಿಗ್ನಲ್‌ ಜಂಪ್‌ ಮಾಡಿದ್ದೀಯ ಎಂದು ಹೇಳಿ ಗಾಡಿ ತಡೆದಿದ್ದಾರೆ” ಎಂದು ವಿದ್ಯಾರ್ಥಿಯೊಬ್ಬರು ಈ ದಿನ. ಕಾಮ್‌ಗೆ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಹಣವಿಲ್ಲ ಎಂದು ಹೇಳಿದರೂ ಬಿಡದೆ ತಡೆ ಹಿಡಿದಿದ್ದು, ಕೊನೆಗೆ ₹500 ಹಣ ಕಸಿದುಕೊಂಡು ಕಳುಹಿಸಿದರು. ನಾನು ಕೆಲಸ ಮಾಡಿಕೊಂಡು ಓದುತ್ತಿದ್ದೇನೆ. ಬಂದ ಹಣದಲ್ಲಿ ಮನೆಗೆ ಕೊಡುವುದರ ಜೊತೆಗೆ ನನ್ನ ಓದಿಗೂ ಅದೇ ಹಣವನ್ನು ಬಳಸಿಕೊಳ್ಳಬೇಕು. ಪರೀಕ್ಷೆಗೆ ಓದಲು ನೋಟ್ಸ್‌ ತೆಗೆದುಕೊಳ್ಳಲು ಇಟ್ಟುಕೊಂಡು ಹೋಗುತ್ತಿದ್ದ ಹಣವನ್ನು ಅವರಿಗೆ ನೀಡಿ ಪುಸ್ತಕವಿಲ್ಲದೇ ಬರಿಗೈಯಲ್ಲಿ ಮನೆಗೆ ಹೋಗುವಂತಾಯಿತು” ಎಂದು ಅವಲತ್ತುಕೊಂಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಧಾರವಾಡ | ವ್ಯಾಪಕವಾದ ಅಪ್ರಾಪ್ತ ಮಕ್ಕಳ ಬೈಕ್ ಸವಾರಿ; ಸಂಚಾರಿ ಪೊಲೀಸ್‌ ನಿರ್ಲಕ್ಷ್ಯ

ವಾಹನ ತಪಾಸಣೆಗೆ ಸಂಬಂಧಿಸಿದಂತೆ ಈ ದಿನ.ಕಾಮ್‌ ಎಸಿಪಿ ಟ್ರಾಫಿಕ್‌ ಅವರನ್ನು ಸಂಪರ್ಕಿಸಿದಾಗ ಪ್ರತಿಕ್ರಿಯಿಸಿದ್ದು, ಯಾರೋ ಹಾಗೆ ಹೇಳಿ ಹಣ ತೆಗೆದುಕೊಳ್ಳುತ್ತಿದ್ದಾರೆಂದು ಹೇಳಿದರೆ ಹೇಗೆ? ಹಣ ತೆಗೆದುಕೊಂಡು ರಶೀದಿ ಕೊಡದೆ ಕಳುಹಿಸಿರುವುದಕ್ಕೆ ಪ್ರೂಫ್‌ ಬೇಕಲ್ಲವೇ ಎಂದರು.

“ಯಾರ ಬಳಿ ಹಣ ತೆಗೆದುಕೊಂಡು ರಶೀದಿ ಕೊಡದೆ ಕಳುಹಿಸಿದ್ದಾರೆ, ಹಣ ನೀಡಿದವರು ಬಂದು ತೆಗೆದುಕೊಂಡಿರುವವರ ವಿರುದ್ಧ ದೂರು ನೀಡಲಿ. ಸಂಬಂಧಪಟ್ಟವರ ಮೇಲೆ ಸೂಕ್ತ ಕ್ರಮ ತೆಗೆದುಕೊಳ್ಳುತ್ತೇವೆ” ಎಂದು ಹೇಳಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...