ಮೈಸೂರು | ನೇಣು ಬಿಗಿದ‌ ಸ್ಥಿತಿಯಲ್ಲಿ ತಾಯಿ-ಮಗಳ ಮೃತದೇಹ ಪತ್ತೆ; ಆತ್ಮಹತ್ಯೆಯೋ? ವರದಕ್ಷಿಣೆ ಕೊಲೆಯೋ?

Date:

ತಾಯಿ ಮತ್ತು ಮಗಳ ಮೃತದೇಹಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಕತ್ತನಹಳ್ಳಿಯಲ್ಲಿ ನಡೆದಿದೆ. ಸಿಇಟಿಯಲ್ಲಿ ಮಗಳಿಗೆ ಕಡಿಮೆ ಅಂಕ ಬಂದ ಕಾರಣಕ್ಕಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ.

ಮೃತರನ್ನು ಮಹದೇವಮ್ಮ (40) ಮತ್ತು ಮಗಳು ಪ್ರಿಯಾ (20) ಎಂದು ಗುರುತಿಸಲಾಗಿದೆ.

ಪ್ರಿಯಾ ದ್ವಿತೀಯ ಪಿಯುಸಿಯಲ್ಲಿ ಉತ್ತಮ ಅಂಕ ಪಡೆದಿದ್ದರು. ವೃತ್ತಿಪರ ಉನ್ನತ ಶಿಕ್ಷಣಕ್ಕಾಗಿ ಸಿಇಟಿ, ಎನ್‌ಇಟಿ ಪರೀಕ್ಷೆಗಳನ್ನು ಬರೆದಿದ್ದರು. ಆದರೆ, ಸಿಇಟಿಯಲ್ಲಿ ಕಡಿಮೆ ಅಂತ ಬಂದಿದ್ದ ಕಾರಣ ಮನನೊಂದು ಪ್ರಿಯಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಗಳ ಸಾವಿನಿಂದ ದಿಗ್ಭ್ರಾಂತಿಗೊಂಡ ತಾಯಿಯೂ ಮಗಳ ಮೃತದೇಹದ ಪಕ್ಕದಲ್ಲಿಯೇಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆದಾಗ್ಯೂ, ಮಹದೇವಮ್ಮ ಅವರ ಪತಿ ಜಯರಾಮು ವಿರುದ್ಧ ವರದಕ್ಷಿಣೆ ಕಿರುಕುಳದ ಆರೋಪಗಳೂ ಕೇಳಿಬಂದಿವೆ. ವರದಕ್ಷಿಣೆ ವಿಚಾರವಾಗಿ ಪದೇ-ಪದೇ ಮಹದೇವಮ್ಮ ಜೊತೆ ಜಯರಾಮು ಜಗಳ ಮಾಡುತ್ತಿದ್ದರು.ಆತನೇ ಕೊಲೆ‌ ಮಾಡಿ ಆತ್ಮಹತ್ಯೆಯೆಂದು ಬಿಂಬಿಸಿರಬಹುದು ಎಂದೂ ಆರೋಪಿಸಲಾಗುತ್ತಿದೆ.

ಘಟನೆ ಸಂಬಂಧ ಹುಲ್ಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...