ಮೈಸೂರು | ಪತ್ರಕರ್ತರಿಗೆ ಕೊಲೆ ಬೆದರಿಕೆ, ಜಾತಿ ನಿಂದನೆ; ಅರಮನೆ ಮಂಡಳಿ ಸಿಬ್ಬಂದಿ ವಿರುದ್ಧ ಎಫ್‌ಐಆರ್

Date:

ವರದಿಗೆ ತೆರಳಿದ್ದ ಪತ್ರಕರ್ತರ ಮೇಲೆ ಅರಮನೆ ಮಂಡಳಿ ಉಪನಿರ್ದೇಶಕ ಮತ್ತು ಇತರ ಸಿಬ್ಬಂದಿ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿ ಕೊಲೆ ಬೆದರಿಕೆ ಒಡ್ಡಿರುವ ಆರೋಪದ ಮೇಲೆ ದೇವರಾಜ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿರುವುದಾಗಿ ವರದಿಯಾಗಿದೆ.

ಫೆ.25ರಂದು ಘಟನೆ ನಡೆದಿದ್ದು, ಇಂಡಿಯನ್ ಟಿವಿ ವರದಿಗಾರ ಕೆಂಡಗಣ್ಣ ಮತ್ತು ಕ್ಯಾಮರಾಮೆನ್ ರವಿ ಎಂ ಎಂಬವವರ ಮೇಲೆ ಹಲ್ಲೆ ಮಾಡಲಾಗಿದೆ. ಅರಮನೆ ಆಡಳಿತ ಮಂಡಳಿ ಉಪ ನಿರ್ದೇಶಕ ಟಿ.ಎಸ್. ಸುಬ್ರಹ್ಮಣ್ಯ ಅವರಿಂದ ಅರಮನೆ ಕೋಟೆ ಆಂಜನೇಯಸ್ವಾಮಿ ದೇವಸ್ಥಾನದ ಎದುರು ಅರಮನೆ ಗೋಡೆ ಬಿರುಕು ಬಿಟ್ಟಿರುವ ಸಂಬಂಧ ಮಾಡಿದ್ದ ಸುದ್ದಿಗೆ ಪ್ರತಿಕ್ರಿಯೆ ಕೇಳಲು ತೆರಳಿದ್ದಾಗ ಸುಬ್ರಹ್ಮಣ್ಯ ಅವರು ಅವಾಚ್ಯ ಶಬ್ದಗಳಿಂದ ನಿಂದಿಸಿ, ಸಹಚರರಿಂದ ಹಲ್ಲೆ ಮಾಡಿಸಿದ್ದಲ್ಲದೆ, ಕೊಲೆ ಬೆದರಿಕೆ ಒಡ್ಡಿದ್ದಾರೆ ಎಂದು ಕ್ಯಾಮರಾಮನ್ ರವಿ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಘಟನೆ ಸಂಬಂಧ ಟಿ.ಎಸ್. ಸುಬ್ರಹ್ಮಣ್ಯ, ಸಿಬ್ಬಂದಿ ಗಂಗಾಧರ ಸ್ವಾಮಿ, ಸಮರ್ಥ್ ಕೌಶಿಕ್ ಸೇರಿದಂತೆ ಇತರರ ವಿರುದ್ಧ ದೂರು ದಾಖಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ?: ಮೈಸೂರು | ಪಾತಾಳಕ್ಕಿಳಿದ ಶುಂಠಿ ಬೆಲೆ; ಬೆಳೆಗಾರರ ಆದಾಯಕ್ಕೆ ಪೆಟ್ಟು

ಇನ್ನು ಘಟನೆಯನ್ನು ಮೈಸೂರು ಜಿಲ್ಲಾ ಪತ್ರಕರ್ತರ ಸಂಘ ತೀವ್ರವಾಗಿ ಖಂಡಿಸಿದೆ. ಪತ್ರಕರ್ತರು ನಿರ್ಭೀತಿಯಿಂದ ಕೆಲಸ ಮಾಡಲು ಸಾಧ್ಯವಾಗದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ವರದಿಗಾರರನ್ನು ಇಷ್ಟು ನಿಕೃಷ್ಟವಾಗಿ ನಡೆಸಿಕೊಂಡಿದ್ದಾರೆ ಎಂದರೆ ಸಾಮಾನ್ಯರ ಗತಿಯೇನು.. ಈ ರೀತಿ ಘಟನೆ ಜಿಲ್ಲೆಯಲ್ಲಿ ಇದೇ ಮೊದಲ ಬಾರಿಗೆ ನಡೆದಿದ್ದು, ಘಟನೆಗೆ ಕಾರಣರಾದ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಸಂಘ ಒತ್ತಾಯಿಸಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...