ಮೈಸೂರು | ದುಪ್ಪಟ್ಟು ಕಂದಾಯ ವಸೂಲಾತಿ ಇನ್ನೆರೆಡು ದಿನಗಳಲ್ಲಿ ರದ್ದುಗೊಳ್ಳಲಿದೆ : ಶಾಸಕ ಜಿ. ಡಿ. ಹರೀಶ್ ಗೌಡ

Date:

ಮೈಸೂರಿನಲ್ಲಿ ಜಿಲ್ಲಾಧಿಕಾರಿ ಜಿ. ಲಕ್ಷ್ಮೀಕಾಂತ ರೆಡ್ಡಿಯವರೊಂದಿಗೆ ಸಭೆ ನಡೆಸಿ ಮಾತನಾಡಿದ ಹುಣಸೂರು ಶಾಸಕ ಜಿ. ಡಿ. ಹರೀಶ್ ಗೌಡ ಬಿ ಖಾತಾ ಆಂದೋಲನ ಅರಂಭವಾದ ನಂತರ ಮೈಸೂರು ಜಿಲ್ಲೆಯಾದ್ಯಂತ ಸ್ಥಳೀಯ ಸಂಸ್ಥೆಗಳಲ್ಲಿ ಕಳೆದ ೬ ವರ್ಷಗಳ ದುಪ್ಪಟ್ಟು ಕಂದಾಯ ವಸೂಲಾತಿಗೆ ಜಿಲ್ಲಾಧಿಕಾರಿಗಳು ಮೌಖಿಕ ಆದೇಶ ಹೊರಡಿಸಿದ್ದರು. ಈ ಕುರಿತು ಹುಣಸೂರು ನಗರದ ನಾಗರಿಕರು ಮತ್ತು ಜನಪ್ರತಿನಿಧಿಗಳಿಂದ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ತಮ್ಮ ಬಳಿ ಈ ಬಗ್ಗೆ ದೂರುಗಳು ಬಂದಿದ್ದವು. ಸಮಸ್ಯೆಯ ಪರಿಹಾರಕ್ಕಾಗಿ ಜಿಲ್ಲಾಧಿಕಾರಿಗಳೊಂದಿಗೆ ಚರ್ಚಿಸಿ ಕ್ರಮವಹಿಸುವುದಾಗಿ ತಿಳಿಸಿದ್ದೆ.

ಅದರಂತೆ, ಸೋಮವಾರ ಜಿಲ್ಲಾಧಿಕಾರಿಗಳು ಸಮಯ ನಿಗದಿ ಮಾಡಿದ್ದರಿಂದ ಹುಣಸೂರು ನಗರಸಭೆಯ ಕೌನ್ಸಿಲರ್ ಗಳು ಮತ್ತು ನಾಗರೀಕರನ್ನೊಳಗೊಂಡು ಭೇಟಿ ಮಾಡಿ ಸಮಸ್ಯೆಯ ಗಂಭೀರತೆಯನ್ನು ತಿಳಿಸಲಾಯಿತು.

ಸಮಸ್ಯೆಯ ಕುರಿತು ಜಿಲ್ಲಾಧಿಕಾರಿ ಲಕ್ಷ್ಮೀಕಾಂತ್‌ ರೆಡ್ಡಿ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಮತ್ತು ಪ್ರಸ್ತುತ ವರ್ಷದ ಕಂದಾಯವನ್ನು ಮಾತ್ರ ದುಪ್ಪಟ್ಟು ಪ್ರಮಾಣದಲ್ಲಿ ವಸೂಲಾತಿ ಮಾಡಲು ಮತ್ತು ೬ ವರ್ಷಗಳ ದುಪ್ಪಟ್ಟು ಕಂದಾಯವನ್ನು ರದ್ದುಗೊಳಿಸಲು ಕ್ರಮವಹಿಸಿ ಇನ್ನೆರೆಡು ದಿನಗಳಲ್ಲಿ ಉಪಕ್ರಮಗಳನ್ನು ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಕೊಡಗು | ಚೆಟ್ಟಳ್ಳಿಯಲ್ಲಿ ಮರಬಿದ್ದು ಕಾರ್ಮಿಕ ಸಾವು

ಭೇಟಿಯಲ್ಲಿ ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಹರೀಶ್‌ ಕುಮಾರ್, ಉಪಾಧ್ಯಕ್ಷೆ ಆಶಾ ಕೃಷ್ಣನಾಯಕ, ಸದಸ್ಯರಾದ ಗಣೇಶ್, ಕುಮಾರಸ್ವಾಮಿ, ಸತೀಶ್ ಕುಮಾರ್, ಮಾಲಿಕ್ ಪಾಷಾ, ರಾಣಿ ಪೆರುಮಾಳ್, ಶ್ರೀನಾಥ್, ದೇವನಾಯ್ಕ, ಮುಖಂಡ ನಿಂಗರಾಜು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...