ಮೈಸೂರು | ವಿದ್ಯುತ್ ಸಂಪರ್ಕ, ರೈತರಿಂದ ದುಪ್ಪಟ್ಟು ವಸೂಲಿ; ರೈತ ಸಂಘದಿಂದ ಪ್ರತಿಭಟನೆಯ ಎಚ್ಚರಿಕೆ

Date:

ಕರ್ನಾಟಕ ರಾಜ್ಯ ರೈತ ಸಂಘದ ಮೈಸೂರು ಜಿಲ್ಲಾಧ್ಯಕ್ಷ ಹೊಸೂರು ಕುಮಾರ್ ಪತ್ರಿಕಾ ಹೇಳಿಕೆಯಲ್ಲಿ ‘ ವಿದ್ಯುತ್ ಸಂಪರ್ಕ ಪಡೆಯಲು ನಿಗದಿತ ಹಣಕ್ಕಿಂತ ದುಪ್ಪಟ್ಟಾಗಿ ರೈತರಿಂದ ಗುತ್ತಿಗೆದಾರರು ಹಣ ಸುಲಿಗೆ ಮಾಡುತಿದ್ದು ದಂಧೆಯಾಗಿ ಪರಿಣಮಿಸಿದೆ. ಕೂಡಲೇ ಸಂಭಂದ ಪಟ್ಟ ಅಧಿಕಾರಿಗಳು, ಸರ್ಕಾರ ಎಚ್ಚೆತ್ತುಕೊಳ್ಳದೆ ಇದ್ದಲಿ ಜಿಲ್ಲೆಯ ಎಲ್ಲಾ ಕಚೇರಿಗಳ ಮುಂದೆ ಪ್ರತಿಭಟನೆ ನಡೆಸಲಾಗುವುದು’ ಎಂದು ಎಚ್ಚರಿಸಿದ್ದಾರೆ.

” ರೈತರು ವಿದ್ಯುತ್ ಸಂಪರ್ಕ ಪಡೆಯಲು ವಿದ್ಯುತ್ ಇಲಾಖೆ ಐಪಿ ಸೆಟ್‌ 5 ಹೆಚ್ ಪಿ ಗೆ ₹ 7,400 ನಿಗದಿಪಡಿಸಿದೆ. ಗುತ್ತಿಗೆದಾರರು ರೈತರಿಂದ 15 ಸಾವಿರದಿಂದ 18 ಸಾವಿರ ರೂಪಾಯಿ ಹಣ ವಸೂಲಿ ಮಾಡುತ್ತಿದ್ದು, ದೊಡ್ಡ ದಂಧೆಯಾಗಿ ಮಾಡಿಕೊಂಡಿದ್ದಾರೆ ” ಎಂದು ಆರೋಪಿಸಿದರು.

” ಕಾಂಗ್ರೆಸ್ ಸರ್ಕಾರ ಆಡಳಿತಕ್ಕೆ ಬಂದಾಗಿನಿಂದ ಹೊಸದಾಗಿ ವಿದ್ಯುತ್ ಸಂಪರ್ಕ ಪಡೆಯುವುದಾಗಲಿ, ಅಗತ್ಯಕ್ಕನುಗುಣವಾಗಿ ಹೊಸ ಟ್ರಾನ್ಸ್ ಫಾರ್ಮರ್ ಗಳನ್ನು ಅಳವಡಿಸುವುದಾಗಲಿ ಸಾಧ್ಯವಾಗದಂತಾಗಿದೆ. ಸರ್ಕಾರದ ಈ ನಿಲುವಿನಿಂದ ರೈತರು ಹೊಸ ಸಂಪರ್ಕವನ್ನು ಪಡೆಯಲು 2 ಲಕ್ಷ ರೂಪಾಯಿಗಳ ಹಣ ಸಂದಾಯ ಮಾಡಿ ವಿದ್ಯುತ್ ಸಂಪರ್ಕ ಪಡೆಯುವ ಕೆಟ್ಟ ಪರಿಸ್ಥಿತಿ ಒದಗಿ ಬಂದಿದೆ.ವೈಜ್ಞಾನಿಕ ಬೆಲೆ ಸಿಗುವವರೆಗೆ ವಿದ್ಯುಚ್ಛಕ್ತಿ ಬಿಲ್ಲನ್ನು ಕಟ್ಟುವುದಿಲ್ಲ ಎಂದು ರೈತ ಸಂಘ ಹೋರಾಟ ಮಾಡಿದರ ಫಲವಾಗಿ 10 ಹೆಚ್ ಪಿ ವರೆಗೆ ವಿದ್ಯುಚ್ಛಕ್ತಿ ಉಚಿತವಾಗಿ ನೀಡಲು ಸರ್ಕಾರವು ಘೋಷಣೆ ಮಾಡಿದೆ”.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆದರೆ, ಇತ್ತೀಚಿನ ದಿನಗಳಲ್ಲಿ ರೈತರು ವಿದ್ಯುಚ್ಛಕ್ತಿ ಪಡೆಯಲಾಗದ ಪರಿಸ್ಥಿತಿ ನಿರ್ಮಾಣವಾಗಿರುತ್ತದೆ. ಈ ರೈತ ವಿರೋಧಿ ನೀತಿಯನ್ನು ಕಳೆದ ಎರಡು ವರ್ಷಗಳಿಂದ ಹೋರಾಟ ಮಾಡುತ್ತಾ ಬಂದಿದ್ದು, ರಾಜ್ಯದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ರವರ ಗಮನಕ್ಕೆ ತಂದರೂ ಕೂಡ ರೈತರಿಗಾಗುವ ಸಮಸ್ಯೆಯನ್ನು ಬಗೆಹರಿಸುವಲ್ಲಿ ವಿಫಲರಾಗಿದ್ದಾರೆ.

ಇತ್ತೀಚಿನ ದಿನಗಳಲ್ಲಿ ಹೊಸ ಟ್ರಾನ್ಸ್ ಫಾರ್ಮರ್ ಗಳನ್ನು ಅಳವಡಿಸದ ಕಾರಣ ರೈತರಿಗೆ ಅಪಾರ ನಷ್ಟ ಉಂಟಾಗುತ್ತಿದೆ. ಕಾರಣ ಅಗತ್ಯತೆಗೆ ಮೀರಿದ ಸಂಪರ್ಕವನ್ನು ಪಡೆದುಕೊಂಡಿರುವ ರೈತರಿಗೆ ಹಿಂದಿನಂತೆ ಟ್ರಾನ್ಸ್ ಫಾರ್ಮರ್ ಗಳನ್ನು ಅಳವಡಿಸದೆ ವೋಲ್ವೇಜ್ ಅಭಾವದಿಂದ ರೈತರ ಪಂಪ್ ಸೆಟ್‌ಗಳು ಸುಟ್ಟು ಹೋಗುತ್ತಿದ್ದು, ಬೆಳೆ ನಷ್ಟಕ್ಕೆ ಒಳಗಾಗುತ್ತಿದ್ದೇವೆ.

ಈ ಸುದ್ದಿ ಓದಿದ್ದೀರಾ? ಚಾಮರಾಜನಗರ | ಯುವಕ ಸಂಘಗಳಿಗೆ ಕ್ರೀಡಾ ಸಲಕರಣೆ ವಿತರಣೆ

ರೈತರಿಂದ ಹೆಚ್ಚುವರಿಯಾಗಿ ಪಡೆಯುತ್ತಿರುವ ಹಣಕ್ಕೆ ಕಡಿವಾಣ ಹಾಕುವ ಮೂಲಕ ಹಾಗೂ ರೈತರಿಗೆ ತೊಂದರೆಯಾಗದಂತೆ ಇಲಾಖೆಗೆ ಅರಿವು ಮೂಡಿಸಿ, ಕಟ್ಟಬೇಕಾದ ಕನಿಷ್ಠ ಹಣವನ್ನು ಮಾತ್ರ ವಡೆಯಬೇಕು. ಇಲ್ಲವಾದಲ್ಲಿ ರೈತ ಸಂಘವು ಎಲ್ಲಾ ಕಚೇರಿಗಳ ಮುಂಭಾಗ ಪ್ರತಿಭಟನೆ ಹಮ್ಮಿಕೊಳ್ಳಲಿದೆ ಎಂದು ಎಚ್ಚರಿಕೆ ನೀಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...