ಮೈಸೂರು | ಮತದಾನದ ವೇಳೆ ವ್ಯಕ್ತಿಯೋರ್ವನಿಂದ ಇವಿಎಂ ನಿಯಂತ್ರಣ ದ್ವಂಸ

Date:

ಮೈಸೂರು ನಗರ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರ ಬೂತ್ ಸಂಖ್ಯೆ 40ರಲ್ಲಿ ಮತದಾನ ಮಾಡಲು ಬಂದಿದ್ದ ಹೂಟಗಳ್ಳಿ ನಿವಾಸಿ ಶಿವಮೂರ್ತಿ (48) ವಿದ್ಯುನ್ಮಾನ ಮತಯಂತ್ರ (ಇವಿಎಂ) ನಿಯಂತ್ರಣ ಘಟಕ ಉಪಕರಣ ದ್ವಂಸಗೊಳಿಸಿದ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.

ಮೇ.10ರಂದು ನಡೆದ ವಿಧಾನಸಭಾ ಚುನಾವಣೆಯಲ್ಲಿ ಮತದಾನ ಮಾಡುವ ವೇಳೆ ತನ್ನ ಅಧಿಕೃತ ಗುರುತಿನ ಚೀಟಿ ತೋರಿಸಿ, ಸಹಿ ಮಾಡಿ, ಬೆರಳಿಗೆ ಶಾಯಿ ಹಾಕಿದ ಬಳಿಕ ಶಿವಮೂರ್ತಿ ಎಂಬುವವರು ಏಕಾಏಕಿ ವಿದ್ಯುನ್ಮಾನ ಉಪಕರಣವನ್ನು ಒಡೆದು ಹಾಕಿದ್ದಾರೆ.

ಮತಯಂತ್ರ ಒಡೆದ ವ್ಯಕ್ತಿ
ಮತಯಂತ್ರ ನಿಯಂತ್ರಣ ಒಡೆದು ಹಾಕಿದ ವ್ಯಕ್ತಿ

ಶಿವಮೂರ್ತಿ ಜೊತೆಯಲ್ಲಿ ಬಂದಿದ್ದ ಪತ್ನಿ ಹಾಗೂ ಸ್ಥಳದಲ್ಲಿದ್ದ ಅಧಿಕಾರಿಗಳು ಒಮ್ಮೆಲೆ ಗಾಬರಿಗೊಂಡಿದ್ದಾರೆ. ವಿಜಯನಗರ ಪೊಲೀಸ್ ಠಾಣೆ ಅಧಿಕಾರಿಗಳು ಅವರನ್ನು ಬಂಧಿಸಿ ಕರೆದೊಯ್ದಿದ್ದಾರೆ ಎನ್ನಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ನಾಳೆ ಚುನಾವಣೆ ಫಲಿತಾಂಶ ಪ್ರಕಟ: ಮತ ಎಣಿಕೆ ಕೇಂದ್ರಗಳಲ್ಲಿ ಪೊಲೀಸ್ ಬಿಗಿ ಬಂದೋಬಸ್ತ್

ಅರ್ಧ ಗಂಟೆ ತಡವಾಗಿ ವಿದ್ಯುನ್ಮಾನ ಯಂತ್ರ ಬದಲಾಯಿಸಿದ ಅಧಿಕಾರಿಗಳು ಎಂದಿನಂತೆ ಮತ ಚಲಾಯಿಸಲು ಅನುವು ಮಾಡಿಕೊಟ್ಟಿದ್ದಾರೆ.

ಮಾಸಿಕ ಅಸ್ವಸ್ತ
ಮತಯಂತ್ರ ನಿಯಂತ್ರಣ ದ್ವಂಸಗೊಳಿಸಿದ ವ್ಯಕ್ತಿಯನ್ನು ನಿಯಂತ್ರಿಸುತ್ತಿರುವ ಸಿಬ್ಬಂದಿ

ಪೊಲೀಸ್ ಅಧಿಕಾರಿಗಳು ಬಂಧಿತ ವ್ಯಕ್ತಿಯನ್ನು ತನಿಖೆಗೆ ಒಳಪಡಿಸಿದ ಬಳಿಕ ಮಾನಸಿಕ ಖಿನ್ನತೆಗೆ ಒಳಗಾಗಿರುವುದು ದೃಢಪಟ್ಟಿದೆ. ನಂತರ ಬಂಧಿತ ಶಿವಮೂರ್ತಿ ಅವರಿಗೆ ತಿಳುವಳಿಕೆ ಹೇಳಿ ಬಿಡುಗಡೆ ಮಾಡಿದ್ದಾರೆ ಎಂದು ತಿಳಿದುಬಂದಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...