ಮೈಸೂರು | ಅಶೋಕಪುರಂ ನಿಲ್ದಾಣದವರೆಗೆ ರೈಲುಗಳ ವಿಸ್ತರಣೆ; ಸ್ಥಳೀಯರ ವಿರೋಧ

Date:

ಮೈಸೂರು ನಗರ ವ್ಯಾಪ್ತಿಯಲ್ಲಿ ರೈಲ್ವೆ ನಿಲ್ದಾಣದಿಂದ ಅಶೋಕಪುರಂ ರೈಲ್ವೆ ನಿಲ್ದಾಣದವರೆಗೆ ಪ್ರಮುಖ ಎಂಟು ರೈಲುಗಳ ವಿಸ್ತರಣೆಗೆ ನಗರದ ನಿವಾಸಿಗಳು ವಿರೋಧಿಸುತ್ತಿದ್ದಾರೆ.

“ಎಂಟು ದೈನಂದಿನ ರೈಲುಗಳು ಅಶೋಕಪುರಂನಿಂದ ಪ್ರಾರಂಭವಾಗಿ, ಕೊನೆಗೊಳ್ಳುವುದು ಪ್ರಾರಂಭವಾದರೆ, ಎರಡು ಪ್ರಮುಖ ಸ್ಥಳಗಳಾದ ಟೆನ್ನಿಸ್ ಕೋರ್ಟ್/ಚಾಮರಾಜಪುರಂ ರೈಲ್ವೆ ನಿಲ್ದಾಣ ಮತ್ತು ಕುಕ್ಕರಹಳ್ಳಿ ರೈಲ್ವೆ ಲೆವೆಲ್ ಕ್ರಾಸಿಂಗ್‌ಗಳ ಬಳಿ ಹೆಚ್ಚಿನ ಸಮಯವನ್ನು ಕಳೆಯಬೇಕಾಗುತ್ತದೆ. ಪ್ರಸ್ತುತ, ಆರು ಜೋಡಿ ರೈಲುಗಳು ಈ ಎರಡು ರೈಲ್ವೆ ಲೆವೆಲ್ ಕ್ರಾಸಿಂಗ್ ಮೂಲಕ ಹಾದುಹೋಗುತ್ತವೆ. ಪ್ರತಿ ಬಾರಿ ರೈಲುಗಳು ಬಂದಾಗ, ಈ ಕ್ರಾಸಿಂಗ್‌ಗಳನ್ನು ಕನಿಷ್ಠ 10 ನಿಮಿಷಗಳ ಕಾಲ ಮುಚ್ಚಲಾಗುತ್ತದೆ. ಇದು ಎರಡೂ ದಿಕ್ಕುಗಳಲ್ಲಿ ದೀರ್ಘ ಸಂಚಾರದಟ್ಟಣೆ ಉಂಟಾಗುತ್ತದೆ” ಎಂಬುದು ಸ್ಥಳೀಯರ ಅಭಿಪ್ರಾಯವಾಗಿದೆ.

ಪ್ರಸ್ತಾವನೆಯ ಪ್ರಕಾರ, ಎಂಟು ಪ್ರಮುಖ ರೈಲುಗಳಾದ ಎಂಎಎಸ್-ಮೈಸೂರು-ಎಂಎಎಸ್‌ ಕಾವೇರಿ ಎಕ್ಸ್‌ಪ್ರೆಸ್‌(16021/22), ಎಂಎಎಸ್-ಮೈಸೂರು-ಎಂಎಎಸ್‌ ಎಕ್ಸ್‌ಪ್ರೆಸ್‌(12609/10), ಎಸ್‌ಬಿಸಿ-ಎಂವೈಎಸ್-ಎಸ್‌ಬಿಸಿ ಮಾಲ್ಗುಡಿ ಎಕ್ಸ್‌ಪ್ರೆಸ್‌(20624/23), ಕೆಸಿಜಿ-ಎಂವೈಎಸ್-ಕೆಸಿಜಿ ಎಕ್ಸ್‌ಪ್ರೆಸ್‌(12785/86), ಎಸ್‌ಬಿಸಿ-ಮೈಸೂರು-ಎಸ್‌ಬಿಸಿ ಮೆಮು(06525/26), ಎಸ್‌ಬಿಸಿ-ಮೈಸೂರು-ಎಸ್‌ಬಿಸಿ ಮೆಮು(06559/60), ಎಸ್‌ಬಿಸಿ-ಮೈಸೂರು-ಎಸ್‌ಬಿಸಿ ಮೆಮು(06255/56), ಮತ್ತು ಎಸ್‌ಬಿಸಿ-ಮೈಸೂರು ಮೆಮು(06257/58) ರೈಲುಗಳನ್ನು ಇತ್ತೀಚೆಗೆ ಪುನರಾಭಿವೃದ್ಧಿ ಮಾಡಲಾದ ಅಶೋಕಪುರಂ ರೈಲು ನಿಲ್ದಾಣಕ್ಕೆ ವಿಸ್ತರಿಸಲಾಗುವುದು ಎನ್ನಲಾಗುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಳೆದ ನಾಲ್ಕೈದು ವರ್ಷಗಳಿಂದ ಕುಕ್ಕರಹಳ್ಳಿ ಕೆರೆ ಬಳಿಯ ರೈಲ್ವೆ ಕ್ರಾಸಿಂಗ್‌ನಲ್ಲಿ ರೈಲ್ವೆ ಅಂಡರ್ ಬ್ರಿಡ್ಜ್ (ಆರ್‌ಯುಬಿ) ಬಗ್ಗೆ ಕೇಳುತ್ತಿದ್ದೇವೆ. ಆದರೆ ಕಾಮಗಾರಿ ಇನ್ನೂ ಆರಂಭವಾಗಿಲ್ಲ. ಪ್ರತಿ ಬಾರಿ ಈ ಎರಡು ಕ್ರಾಸಿಂಗ್‌ಗಳ ಮೂಲಕ ರೈಲು ಹಾದುಹೋದಾಗ, ಸಂಚಾರ ದಟ್ಟಣೆ ಉಂಟಾಗುತ್ತದೆ. ಇದರಿಂದ ವಾಹನ ಚಾಲಕರು ರಸ್ತೆಯಲ್ಲಿ ಸಿಲುಕಿಕೊಳ್ಳುತ್ತಾರೆ. ಈ ಮಾರ್ಗದಲ್ಲಿ ಇನ್ನೂ ಎಂಟು ರೈಲುಗಳಿಗೆ ವಿಸ್ತರಣೆ ಮಾಡಿದರೆ ಉಂಟಾಗುವ ಪರಿಣಾಮದ ಬಗ್ಗೆ ಸ್ಥಳೀಯರು ಚಿಂತಿತರಾಗಿದ್ದಾರೆ.

ಈ ಸುದ್ದಿ ಓದಿದ್ದೀರಾ? ಮೈಸೂರು | ಎಂಸಿಸಿ ಇ-ಖಾತಾ ಅಭಿಯಾನ; ಡಿಸೆಂಬರ್‌ನಲ್ಲಿ ₹1.7 ಕೋಟಿ ಆದಾಯ ಹೆಚ್ಚಳ

“ನಗರದ ರೈಲ್ವೆ ನಿಲ್ದಾಣದ ದಟ್ಟಣೆಯನ್ನು ಕಡಿಮೆ ಮಾಡುವುದು ಮತ್ತು ನಗರದ ದಕ್ಷಿಣ ಭಾಗದಲ್ಲಿ ಉಳಿದುಕೊಂಡಿರುವ ಪ್ರಯಾಣಿಕರಿಗೆ ರೈಲು ಸೇವೆ ಒದಗಿಸುವುದು ಸೇರಿದಂತೆ ವಿವಿಧ ಕಾರಣಗಳಿಗಾಗಿ ರೈಲುಗಳನ್ನು ಅಶೋಕಪುರಂ ರೈಲ್ವೆ ನಿಲ್ದಾಣಕ್ಕೆ ವಿಸ್ತರಿಸುವುದು ಮುಖ್ಯವಾಗಿದೆ. ಕುಕ್ಕರಹಳ್ಳಿ ಕೆರೆ ಬಳಿ ರೈಲ್ವೆ ಕ್ರಾಸಿಂಗ್‌ಗೆ ಅಂಡರ್‌ಗ್ರೌಂಡ್‌ ಮಂಜೂರಾಗಿದ್ದು, ಅದನ್ನು ತ್ವರಿತವಾಗಿ ನಿರ್ಮಿಸಬೇಕು” ಎಂದು ಮೈಸೂರು ರೈಲ್ವೆ ಪ್ರಯಾಣಿಕರ ವೇದಿಕೆಯ ಎಸ್ ಯೋಗೇಂದ್ರ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಸಾರ್ವಜನಿಕರು ಯಾವುದೇ ಸಮಸ್ಯೆ ಅಥವಾ ಅನಾನುಕೂಲತೆಗಳನ್ನು ಅನುಭವಿಸುವಂತಾದರೆ ಕೂಡಲೇ ಪರಿಶೀಲಿಸಲಾಗುವುದೆಂದು ನೈಋತ್ಯ ರೈಲ್ವೆಯ ಮೈಸೂರು ವಿಭಾಗದ ವಿಭಾಗೀಯ ವಾಣಿಜ್ಯ ವ್ಯವಸ್ಥಾಪಕ ಮತ್ತು ಸಾರ್ವಜನಿಕ ಸಂಪರ್ಕಾಧಿಕಾರಿ ಗಿರೀಶ್ ಧರ್ಮರಾಜ್ ಕಲಗೊಂಡ ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...