ಮೈಸೂರು | ಗೋರಕ್ಷಣೆ ಹೆಸರಲ್ಲಿ ಸುಲಿಗೆ; 6 ಮಂದಿ ಹಿಂದುತ್ವವಾದಿಗಳ ಬಂಧನ

Date:

ನಕಲಿ ಹಿಂದುತ್ವವಾದಿಗಳು ಮತ್ತು ಗೋರಕ್ಷಕರ ಹಾವಳಿ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಗೋರಕ್ಷಣೆಯ ಹೆಸರಿನಲ್ಲಿ ದಾಳಿಗಳು, ಹಲ್ಲೆಗಳು, ಕೊಲೆಗಳು ಹಾಗೂ ಸುಲಿಗೆಗಳು ನಡೆಯುತ್ತಿರುವುದು ವರದಿಯಾಗುತ್ತಿದೆ. ಅಂತದ್ದೇ ಪ್ರಕರಣವೊಂದರಲ್ಲಿ ಹಿಂದುತ್ವ ಸಂಘಟನೆ ಮತ್ತು ಜಾನುವಾರು ಸಂರಕ್ಷಣೆ ಹೆಸರಿನಲ್ಲಿ ಹಣ ವಸೂಲಿ ದಂಧೆ ನಡೆಸುತ್ತಿರುವುದು ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನಲ್ಲಿ ಬೆಳಕಿಗೆ ಬಂದಿದೆ.

ಹಿಂದುತ್ವವಾದಿ ಸಂಘಟನೆ ಮತ್ತು ಗೋರಕ್ಷಣೆಯ ಹೆಸರಿನಲ್ಲಿ ಹುಣಸೂರಿನಲ್ಲಿ ದಾಂಧಲೆ, ಸುಲಿಗೆ ನಡೆಸುತ್ತಿರುವ ಗುಂಪು, ಹಸು-ಎಮ್ಮೆಗಳನ್ನು ಸಾಗಿಸುವ ವಾಹನಗಳನ್ನು ತಡೆದು ಹಣ ವಸೂಲಿ ಮಾಡುವುದನ್ನೇ ಕಾಯಕವನ್ನಾಗಿಸಿಕೊಂಡಿತ್ತು. ಆ ಗುಂಪು ಹುಣಸೂರು ಬಳಿಯ ಕಟ್ಟೆಮಳಲವಾಡಿ ಗ್ರಾಮದಲ್ಲಿ ಹಣ ವಸೂಲಿ ನಡೆಸುತ್ತಿತ್ತು. ಈ ವೇಳೆ, ಆ ಗುಂಪಿನ ಆರು ಮಂದಿಯನ್ನು ಹುಣಸೂರು ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ. ಅಲ್ಲದೆ, ಅವರಿಂದ ಎರಡು ಕಾರುಗಳನ್ನು ವಶಕ್ಕೆ ಪಡೆದಿದ್ದಾರೆ.

ಬಂಧಿತ ಆರೋಪಿಗಳನ್ನು ಹಿಂದು ರಾಷ್ಟ್ರ ರಕ್ಷಣಾ ವೇದಿಕೆ ರಾಷ್ಟ್ರೀಯ ಅಧ್ಯಕ್ಷ ಬೆಂಗಳೂರಿನ ಉತ್ತರಹಳ್ಳಿ ನಿವಾಸಿ ರಾಮಕೃಷ್ಣ, ಬೆಂಗಳೂರಿನವರೇ ಆದ ಶಿವಕುಮಾರ್, ಲಿಂಗರಾಜು, ಕಿಶೋರ್, ಪ್ರೇಮಕುಮಾರ್, ಪುಷ್ಪಲತಾ ಹಾಗೂ ಕೆಆರ್ ಪೇಟೆ ತಾಲೂಕಿನ ಮಾರಗೌಡನಹಳ್ಳಿಯ ಸ್ವಾಮಿ ಎಂದು ಹೆಸರಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬುಧವಾರ ಚುಂಚನಕಟ್ಟೆ ಸಂತೆ ಇತ್ತು. ಸಂತೆಯಲ್ಲಿ ಹುಣಸೂರು ತಾಲೂಕಿನ ರತ್ನಪುರಿ ಗ್ರಾಮದ ಕಿರಣ್ ಅವರು ಮೂರು ಜಾನುವಾರುಗಳನ್ನು ಖರೀದಿಸಿ, ತಮ್ಮೂರಿಗೆ ವಾಹನದಲ್ಲಿ ಕೊಂಡೊಯ್ಯುತ್ತಿದ್ದರು. ಈ ವೇಳೆ, ಅವರನ್ನು ಹಿಂಬಾಲಿಸಿಕೊಂಡು ಬಂದ ಆರೋಪಿಗಳು, ಕಟ್ಟೆಮಳಲವಾಡಿ ಬಳಿ ವಾಹನವನ್ನು ಅಡ್ಡಗಟ್ಟಿ ದಾಂಧಲೆ ನಡೆಸಿದ್ದಾರೆ.

ಜಾನುವಾರುಗಳನ್ನು ಹತ್ಯೆಗೈಯಲು ಕಸಾಯಿಖಾನೆಗೆ ಸಾಗಿಸುತ್ತಿದ್ದೀರಾ ಎಂದು ಚಾಲಕ ಕಿರಣ್‌ನನ್ನು ಬೆದರಿಸಿ, ರಾದ್ಧಾಂತ ನಡೆಸಿದ್ದಾರೆ. ಅಲ್ಲದೆ, 25 ಸಾವಿರ ರೂ. ಹಣ ಕೊಡುವಂತೆ ಬೇಡಿಕೆ ಇಟ್ಟಿದ್ದಾರೆ. ಕಿರಣ್, ತಾವು ವ್ಯವಸಾಯಕ್ಕಾಗಿ ಜಾನುವಾರುಗಳನ್ನು ಖರೀದಿಸಿ, ಕೊಂಡೊಯ್ಯುತ್ತಿರುವುದಾಗಿ ಹೇಳಿಕೊಂಡಿದ್ದಾರೆ. ಆದರೂ, ಅವರನ್ನು ಬಿಡದ ಹಿಂದುತ್ವವಾದಿ ದುಷ್ಕರ್ಮಿಗಳು, ಹಣ ಕಟ್ಟರೆ ಮಾತ್ರವೇ ಬಿಡುತ್ತೇವೆ. ಇಲ್ಲವೇ ಪೊಲೀಸರಿಗೆ ಒಪ್ಪಿಸುತ್ತೇವೆಂದು ಧಮ್ಕಿ ಹಾಕಿದ್ದಾರೆ.

ಹಿಂದುತ್ವವಾದಿ ಪುಂಡರ ದಾಂಧಲೆಯನ್ನು ಗಮನಿಸಿದ ಸಾರ್ವಜನಿಕರು ಸ್ಥಳಕ್ಕೆ ಬಂದು, ಆರೋಪಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಆರೋಪಿಗಳನ್ನು ಹಿಡಿದು ಥಳಿಸಿ, ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ಪೊಲೀಸರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಕಿರಣ್‌ ಅವರು ಹಣಸೂರು ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ದೂರನ್ನೂ ದಾಖಲಿಸಿದ್ದಾರೆ.

ಈ ಹಿಂದೆ, ಇದೇ ತಂಡ ಕೆ.ಆರ್.ನಗರದಲ್ಲೂ ದಾಂಧಲೆ ನಡೆಸಿ, ಹಣ ವಸೂಲಿ ಮಾಡಿತ್ತು ಎಂದು ಆರೋಪಿಸಲಾಗಿದೆ. ಕೆ.ಆರ್ ನಗರದ ಗ್ಯಾಸ್ ಅಂಗಡಿಯೊಂದರ ಮಾಲೀಕನನ್ನು ಬೆದರಿಸಿ 20 ಸಾವಿರ ರೂ. ಸುಲಿಗೆ ಮಾಡಿತ್ತು. ಮಾತ್ರವಲ್ಲದೆ, ಎರಡು ವರ್ಷಗಳ ಹಿಂದೆ, ಚಾಮರಾಜನಗರ ಜಿಲ್ಲೆಯಲ್ಲಿಯೂ ಇಂಥದ್ದೇ ಹಲವಾರು ಸುಲಿಗೆಗಳನ್ನು ಮಾಡಿದೆ. ಆರೋಪಿಗಳ ವಿರುದ್ಧ ಬೆಂಗಳೂರು, ಹುಣಸೂರು ಹಾಗೂ ಕೆ.ಆರ್ ನಗರ ಪೊಲೀಸ್‌ ಠಾಣೆಗಳಲ್ಲಿ ಪ್ರಕರಣಗಳು ದಾಖಲಾಗಿವೆ.

ಈ ಲೇಖನ ಓದಿದ್ದೀರಾ?: ಕಲ್ಲಡ್ಕ ಭುಜಕ್ಕೆ ಭುಜ ತಾಗಿಸಿ ನಿಂತರು ಜಾತ್ಯತೀತವಾದಿ ದೇವೇಗೌಡರು!

ಆರೋಪಿಗಳು ತಾವು ಕೃತ್ಯಕ್ಕೆ ಬಳಸುತ್ತಿದ್ದ ಕಾರಿಗೆ ಹಿಂದುರಾಷ್ಟ್ರ, ಹಿಂದು ರಾಷ್ಟ್ರ ರಕ್ಷಣಾ ಪಡೆ ಎಂಬ ಸ್ಟಿಕ್ಕರ್‌ಗಳನ್ನು ಅಂಟಿಸಿಕೊಂಡಿದ್ದಾರೆ. ಮಾತ್ರವಲ್ಲದೆ, ‘ಜೆ.ಕೆ 24*7’ ಕನ್ನಡ ನ್ಯೂಸ್ ಚಾನಲ್ ಎಂಬ ಸ್ಟಿಕರ್‌ಅನ್ನೂ ಹಾಕಿಕೊಂಡಿದ್ದಾರೆ. ಆರೋಪಿಗಳು ಪತ್ರಿಕೆ ಮತ್ತು ಹಿಂದುತ್ವದ ಹೆಸರೇಳಿಕೊಂಡು ವಸೂಲಿ ದಂಧೆ ನಡೆಸುತ್ತಿದ್ದರು ಎಂದು ತಿಳಿದುಬಂದಿದೆ.

ಅಲ್ಲದೆ, ಆರೋಪಿ ರಾಮಕೃಷ್ಣ ಎಂಬಾತನ ಮೊಬೈಲ್‌ನಲ್ಲಿ ಆತ ಮತ್ತೊಬ್ಬ ಹಿಂದುತ್ವವಾದಿ ಸುಲಿಗೆಕೋರ ಎಂದೇ ಕುಖ್ಯಾತಿ ಪಡೆದಿರುವ ಪುನೀತ್ ಕೆರೆಹಳ್ಳಿಯ ಜೊತೆಗಿರುವ ಫೋಟೋಗಳಿದ್ದು, ಅವುಗಳನ್ನು ಜಾನುವಾರು ಸಾಗಿಸುವವರಿಗೆ ತೋರಿಸಿ, ಬೆದರಿಕೆ ಹಾಕಿ, ಹಣ ವಸೂಲಿ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.

ಈ ಪುನೀತ್ ಕೆರೆಹಳ್ಳಿ ಕೂಡ ಗೋರಕ್ಷಣೆಯ ಹೆಸರಿನಲ್ಲಿ ದಾಂಧಲೆ ನಡೆಸುತ್ತಿದ್ದರು. ರಾಮನಗರ ಜಿಲ್ಲೆಯ ಸಾತನೂರು ಬಳಿ, ಜಾನುವಾರು ಸಾಗಿಸುತ್ತಿದ್ದ ಆರೋಪದ ಮೇಲೆ ಇದ್ರೀಸ್‌ ಪಾಷಾ ಅವರನ್ನು ಪುನೀತ್ ಕೆರೆಹಳ್ಳಿ ಮತ್ತು ಆತನ ತಂಡ ಅಮಾನುಷವಾಗಿ ಥಳಿಸಿ, ಕೊಂದಿತ್ತು. ಪ್ರಕರಣದಲ್ಲಿ ತಲೆ ಮರೆಸಿಕೊಂಡಿದ್ದ ಪುನೀತ್ ಕೆರೆಹಳ್ಳಿಯನ್ನು ರಾಜಸ್ತಾನದಲ್ಲಿ ರಾಮನಗರ ಪೊಲೀಸರು ಬಂಧಿಸಿದ್ದರು. ಈಗ, ಆತನ ಹೆಸರು ಹೇಳಿಕೊಂಡು ಹುಣಸೂರು ಬಳಿ, ಹಿಂದುತ್ವವಾದಿಗಳ ಗ್ಯಾಂಗ್‌ ಸುಲಿಗೆ ಮಾಡಿ, ಸಿಕ್ಕಿಬಿದ್ದಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...