ಮೈಸೂರು | ‘ಫ್ಲಾಗಿಂಗ್ ಅಭಿಯಾನ’ ಒಂದೇ ಗಂಟೆಯಲ್ಲಿ 600ಕೆಜಿ ಒಣ ಕಸ ಸಂಗ್ರಹ

Date:

ಸಾಂಸ್ಕೃತಿಕ ನಗರಿ ಮೈಸೂರು ಸ್ವಚ್ಛತೆಯಲ್ಲಿ ದೇಶಕ್ಕೇ ಅಗ್ರಸ್ಥಾನಕ್ಕೇರಿಸುವ ಸಂಕಲ್ಪದೊಂದಿಗೆ ಮೈಸೂರು ಮಹಾನಗರ ಪಾಲಿಕೆ ಹಮ್ಮಿಕೊಂಡಿದ್ದ ‘ಫ್ಲಾಗಿಂಗ್ ಅಭಿಯಾನ’ದ ಭಾಗವಾಗಿ ಮೈಸೂರು ನಗರದಲ್ಲಿ ಬೃಹತ್ ಸ್ವಚ್ಛತಾ ಕಾರ್ಯಕ್ರಮ ಜರುಗಿತು. ಸ್ವಚ್ಛ ಸರ್ವೇಕ್ಷಣ್ 2.0 ಅಭಿಯಾನದ ಭಾಗವಾಗಿ ಸ್ವಚ್ಛತೆಯಲ್ಲಿ ಸಾರ್ವಜನಿಕರ ಸಹಭಾಗಿತ್ವ ಇದಾಗಿದ್ದು ಒಂದೇ ಗಂಟೆಯಲ್ಲಿ 600ಕೆಜಿ ಒಣ ಕಸ ಸಂಗ್ರಹವಾಗಿದೆ.

ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ನಡೆದ ಶ್ರಮದಾನದಲ್ಲಿ ಫೀನಿಕ್ಸ್ ಇಂಟರ್ನ್ಯಾಷನಲ್ ಅಕಾಡೆಮಿಯ ವಿದ್ಯಾರ್ಥಿಗಳು, ಜೆಎಸ್ಎಸ್ ಕಾಲೇಜಿನ ಎನ್.ಎಸ್.ಎಸ್ ಮತ್ತು ಎನ್.ಸಿ.ಸಿ ವಿದ್ಯಾರ್ಥಿಗಳು ಸೇರಿದಂತೆ ಸುಮಾರು 200ಕ್ಕೂ ಹೆಚ್ಚು ಮಂದಿ ಪಾಲ್ಗೊಂಡಿದ್ದರು. ಈ ಬೃಹತ್ ಕಾರ್ಯಾಚರಣೆಯ ಸಮಯದಲ್ಲಿ ಸುಮಾರು 600 ಕೆಜಿಯಷ್ಟು ಒಣ ಕಸವನ್ನು ಸಂಗ್ರಹಿಸಿ ವಿಲೇವಾರಿ ಮಾಡಲಾಯಿತು.

ಅಭಿಯಾನದ ಅಂಗವಾಗಿ ನಡೆದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ಸ್ವಯಂಸೇವಕರು ಪ್ರಥಮ ಬಹುಮಾನವನ್ನು ಮುಡಿಗೇರಿಸಿಕೊಂಡರೆ, ಫೀನಿಕ್ಸ್ ಇಂಟರ್ನ್ಯಾಷನಲ್ ಅಕಾಡೆಮಿ ದ್ವಿತೀಯ ಬಹುಮಾನವನ್ನು ತನ್ನದಾಗಿಸಿಕೊಂಡಿತು. ಜೆ ಎಸ್ ಎಸ್ ತೃತೀಯ ಬಹುಮಾನ ನೀಡಲಾಯಿತು. ಸಮುದಾಯ ಸಂಘಟಕರು ಮತ್ತು ನಾಗರಿಕರು ಅಭಿಯಾನದಲ್ಲಿ ಸಕ್ರಿಯವಾಗಿ ಪಾಲ್ಗೊಂಡು, ಮೈಸೂರನ್ನು ಪ್ಲಾಸ್ಟಿಕ್ ಮುಕ್ತ ಮತ್ತು ಸ್ವಚ್ಛ ನಗರವನ್ನಾಗಿ ಮಾಡುವ ಪ್ರತಿಜ್ಞೆ ಮಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಕೊಡಗು | ‘ದಿ. ಬಿ ಎಸ್ ಗೋಪಾಲಕೃಷ್ಣ ದತ್ತಿ’ ಪ್ರಶಸ್ತಿಗೆ ಭಾಜನರಾದ ವೈದ್ಯ ಡಾ. ಕೆ ಬಿ ಸೂರ್ಯಕುಮಾರ್

ಅಭಿಯಾನದಲ್ಲಿ ಪಾಲಿಕೆ ಆಯುಕ್ತ ಶೇಖ್ ತನ್ವೀರ್ ಆಸೀಫ್, ಪ್ರೊಬೇಷನರಿ ಐಎಎಸ್ ಅಧಿಕಾರಿ ಸಮೀರ್ ಪ್ರಕಾಶ್ ಕೋಡೆ, ವಲಯ ಆಯುಕ್ತ ಎ. ರಮೇಶ್ , ಸ್ವಚ್ಛ ಭಾರತ ಅಭಿಯಾನದ ನೋಡಲ್ ಅಧಿಕಾರಿ ಹಾಗೂ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಕೆ.ಎಸ್. ಮೃತ್ಯುಂಜಯ, ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಮೀನಾಕ್ಷಿ ಸೇರಿದಂತೆ ಪರಿಸರ ಇಂಜಿನಿಯರ್ಗಳು, ಆರೋಗ್ಯ ನಿರೀಕ್ಷಕರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...