ಮೈಸೂರು | ಹಳೇ ಉಂಡವಾಡಿ ನೀರು ಸರಬರಾಜು ಯೋಜನೆ ಸ್ಥಾವರಕ್ಕೆ ಹೆಚ್ ಸಿ ಮಹದೇವಪ್ಪ ಭೇಟಿ

Date:

ಕೆಆರ್‌ಎಸ್‌ನಿಂದ ಸುಮಾರು 2 ಕಿಮೀ ಮೇಲ್ಭಾಗದಲ್ಲಿರುವ ಮೈಸೂರಿಗೆ ಶಾಶ್ವತವಾಗಿ ನೀರು ಪೂರೈಸುವ ಹಳೇ ಉಂಡವಾಡಿ ನೀರು ಸರಬರಾಜು ಯೋಜನೆ ಸ್ಥಾವರಕ್ಕೆ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ ಹೆಚ್ ಸಿ ಮಹದೇವಪ್ಪ ಅವರು ಸೋಮವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಜಿಲ್ಲಾಧಿಕಾರಿ ಲಕ್ಷ್ಮೀಕಾಂತ್ ರೆಡ್ಡಿ, ಮೈಸೂರು ಮಹಾನಗರ ಪಾಲಿಕೆ ಆಯುಕ್ತ ಶೇಖ್ ತನ್ವೀರ್ ಆಸಿಫ್ ಸೇರಿದಂತೆ ಪ್ರಮುಖ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಚಿವರು, “ಕೆಆರ್‌ಎಸ್ ಅಣೆಕಟ್ಟಿನ ಹಿನ್ನೀರು ಪ್ರದೇಶದಿಂದ ನೇರವಾಗಿ ಮೈಸೂರು ಹಾಗೂ 92 ಗ್ರಾಮಗಳಿಗೆ ನೀರು ಪೂರೈಸುವ ಉಂಡುವಾಡಿ ನೀರಾವರಿ ಯೋಜನೆ ಇದಾಗಿದೆ. ಈ ಪ್ರದೇಶದಾದ್ಯಂತ ಹೆಚ್ಚು ಪರಿಣಾಮಕಾರಿ ನೀರು ಸರಬರಾಜು ವಿತರಣೆಗಾಗಿ ಈ ಯೋಜನೆಗಳನ್ನು ಜೋಡಿಸಬೇಕು” ಎಂದು ನಿರ್ದೇಶನ ನೀಡಿದರು.

“ಕಬಿನಿ ಕುಡಿಯುವ ನೀರಿನ ಯೋಜನೆಯ 2ನೇ ಹಂತ ಶೇ.90ರಷ್ಟು ಪೂರ್ಣಗೊಂಡಿದೆ. ಪೂರ್ಣಗೊಂಡ ನಂತರ, ಇದು ಈ ವರ್ಷದ ಕೊನೆಯಲ್ಲಿ ದಿನಕ್ಕೆ ಹೆಚ್ಚುವರಿ 60 ಮಿಲಿಯನ್ ಲೀಟರ್(ಎಂಎಲ್‌ಡಿ) ಪೂರೈಸುತ್ತದೆ. ಕಬಿನಿ ನದಿಯಿಂದ ಮೈಸೂರು ನಗರಕ್ಕೆ ಕುಡಿಯುವ ನೀರು ಸರಬರಾಜು ಹೆಚ್ಚಿಸುವ ಗುರಿಯನ್ನು ಈ ಯೋಜನೆ ಹೊಂದಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಹದೇವಪ್ಪ ಅವರು ಅಧಿಕಾರಿಗಳೊಂದಿಗೆ ಬಿದರಗೋಡಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಕಾಮಗಾರಿಯನ್ನು ಪರಿಶೀಲಿಸಿ, “ಇದು ಮುಂದಿನ ತಿಂಗಳೊಳಗೆ ಪೂರ್ಣಗೊಳ್ಳುವ ನಿರೀಕ್ಷೆಯಿದೆ. ಆಗಸ್ಟ್ ವೇಳೆಗೆ ನೀರು ವಿತರಣೆ ಪ್ರಾರಂಭವಾಗಲಿದೆ. ಈ ಯೋಜನೆಯನ್ನು ಮೊದಲು 2008ರಲ್ಲಿ ರೂಪಿಸಲಾಯಿತು. ಇದನ್ನು ಮೂರು ಹಂತಗಳಲ್ಲಿ ಅಭಿವೃದ್ಧಿಪಡಿಸಲಾಗುತ್ತಿದ್ದು, ಒಟ್ಟು 184 ಎಂಎಲ್‌ಡಿ ಸಾಮರ್ಥ್ಯವನ್ನು ಹೊಂದಿದೆ. ಪ್ರಸ್ತುತ, ನೀರು ಶುದ್ಧೀಕರಣ ಘಟಕಗಳ ನಿರ್ಮಾಣ ಮತ್ತು ಪಂಪಿಂಗ್ ಹಾಗೂ ವಿದ್ಯುತ್ ಉಪಕರಣಗಳ ಸ್ಥಾಪನೆಯ ಕೆಲಸ ನಡೆಯುತ್ತಿದೆ. ಈ ಯೋಜನೆಯು ನೀರು ಸರಬರಾಜು ಸಾಮರ್ಥ್ಯವನ್ನು 120 ಎಂಎಲ್‌ಡಿಗೆ ಹೆಚ್ಚಿಸುವ ನಿರೀಕ್ಷೆಯಿದ್ದು, ₹38 ಕೋಟಿ ವೆಚ್ಚದಲ್ಲಿ ಕಬಿನಿ ಯೋಜನೆಯ ಎರಡನೇ ಹಂತದ ಕಾಮಗಾರಿ ನಡೆಯುತ್ತಿದೆ” ಎಂದು ಹೇಳಿದರು.

“ಕೆಆರ್‌ಎಸ್‌ ಅಣೆಕಟ್ಟಿನ ಹಿನ್ನೀರಿನಿಂದ ಮೈಸೂರು ಮತ್ತು ಚಾಮುಂಡೇಶ್ವರಿ ಕ್ಷೇತ್ರದ ಸುತ್ತಮುತ್ತಲಿನ 92 ಗ್ರಾಮಗಳಿಗೆ ನೀರು ಒದಗಿಸುವ ಉದ್ದೇಶದ ಹಳೇ ಉಂಡುವಾಡಿ ಯೋಜನೆಯೂ ಸುಗಮವಾಗಿ ನಡೆಯುತ್ತಿದೆ. ಈ ಯೋಜನೆಯು ಪೂರ್ಣಗೊಂಡ ನಂತರ, ಸಂಗ್ರಹಣಾ ಮಟ್ಟವು 50 ಅಡಿಗೆ ಇಳಿದರೂ ಅಣೆಕಟ್ಟಿನ ಹಿನ್ನೀರಿನಿಂದ ನೀರನ್ನು ಹೊರತೆಗೆಯಲು ಅನುವು ಮಾಡಿಕೊಡುತ್ತದೆ. ಈ ಯೋಜನೆಯು ಒಂದು ವರ್ಷದೊಳಗೆ ಪೂರ್ಣಗೊಳ್ಳುವ ನಿರೀಕ್ಷೆಯಿದೆ. ಹೆಚ್ಚುವರಿ 150 ಎಂಎಲ್‌ಡಿ ನೀರನ್ನು ಒದಗಿಸುತ್ತದೆ. ಒಟ್ಟು ₹595 ಕೋಟಿ ವೆಚ್ಚದಲ್ಲಿ ಹಳೇ ಉಂಡುವಾಡಿ ಯೋಜನೆಯನ್ನು ಕೈಗೊಳ್ಳಲಾಗುತ್ತಿದೆ” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಚಿಕ್ಕಮಗಳೂರು l ಭದ್ರಾ ನದಿಗೆ ಈಜಲು ಹೋಗಿ ಯುವಕ ಸಾವು

“ಪ್ರಸ್ತುತ, ಮೈಸೂರು 306 ಎಂಎಲ್‌ಡಿ ನೀರನ್ನು ಪಡೆಯುತ್ತಿದ್ದು, ಇದು ಕೈಗಾರಿಕಾ ಅಗತ್ಯಗಳು ಸೇರಿದಂತೆ ಸುಮಾರು 13ರಿಂದ 14 ಲಕ್ಷ ಜನಸಂಖ್ಯೆಗೆ ಸಾಕಾಗುತ್ತದೆ. ಆದರೂ ಕೆಲವು ಪ್ರದೇಶಗಳಲ್ಲಿ ಹೆಚ್ಚಿನ ನೀರು ಸರಬರಾಜಿಗೆ ಬೇಡಿಕೆ ಇದೆ” ಎಂದು ಹೇಳಿದರು.

ಈ ಸಂದರ್ಭದಲ್ಲಿ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಶಾಸಕ ಜಿ ಟಿ ದೇವೆಗೌಡ, ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷ ಆಯುಬ್ ಖಾನ್, ಜಿಲ್ಲಾಧಿಕಾರಿ ಜಿ ಲಕ್ಷ್ಮೀಕಾಂತ್ ರೆಡ್ಡಿ, ಮಹಾನಗರ ಪಾಲಿಕೆ ಆಯುಕ್ತ ಶೇಕ್ ತನ್ವಿರ್ ಆಸಿಫ್ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...