ಹುಣಸೂರು | ತಾಲೂಕಿನ ಜನರ ಸಮಸ್ಯೆಗಳನ್ನು ಬಗೆಹರಿಸುವಂತೆ ಒತ್ತಾಯಿಸಿ ಪ್ರಗತಿಪರ ಸಂಘಟನೆಗಳಿಂದ ಪಾದಯಾತ್ರೆ

Date:

ಮೈಸೂರು ಜಿಲ್ಲೆ ಹುಣಸೂರಿನಲ್ಲಿ ಪ್ರಗತಿಪರ ಸಂಘಟನೆಗಳ ಒಕ್ಕೂಟದಿಂದ ತಾಲೂಕಿನ ಸಾರ್ವಜನಿಕ ಸಮಸ್ಯೆಗಳನ್ನು ಬಗೆಹರಿಸುವಂತೆ ಪಾದಯಾತ್ರೆ ಮೂಲಕ ತಹಶೀಲ್ದಾರ್ ಮಂಜುನಾಥ್ ಅವರಿಗೆ ಮನವಿ ಸಲ್ಲಿಸಲಾಯಿತು.

ಈ ವೇಳೆ ಮಾತನಾಡಿದ ದಸಂಸ ಹಿರಿಯ ಮುಖಂಡ ಹರಿಹರ ಆನಂದ ಸ್ವಾಮಿ, “ಹುಣಸೂರು ತಾಲೂಕು ಶೋಷಿತ ವರ್ಗಗಳ ಹರಿಕಾರ ಮಾಜಿ ಮುಖ್ಯಮಂತ್ರಿ ಡಿ ದೇವರಾಜ ಅರಸು ಅವರ ಕರ್ಮಭೂಮಿ. ವಿವಿಧತೆಯಲ್ಲಿ ಏಕತೆ ಹೊಂದಿರುವ ಸರ್ವ ಜನಾಂಗದ ಶಾಂತಿಯ ತೋಟವಾಗಿದೆ. ತಾಲೂಕು ದಿನಗಳೆದಂತೆ ವಾಣಿಜ್ಯ ಚಟುವಟಿಕೆಯ ಕೇಂದ್ರವಾಗಿ ಬೆಳೆಯುತ್ತಿದೆ. ಆದರೆ ಇಲ್ಲಿನ ಸಮಸ್ಯೆಗಳು ಮಾತ್ರ ಜನರನ್ನು ಹಿಂಡಿ ಹಿಪ್ಪೆ ಮಾಡುತ್ತಿವೆ” ಎಂದು ಆಕ್ರೋಶ ಹೊರಹಾಕಿದರು.

“ನೂರಾರು ಕುಟುಂಬಗಳು ವಸತಿ, ನಿವೇಶನವಿಲ್ಲದೆ ಬವಣೆಪಡುವಂತಾಗಿದೆ. ಇದಕ್ಕೆಲ್ಲ ಸರ್ಕಾರಿ ಕಚೇರಿಗಳಲ್ಲಿ ಸಾರ್ವಜನಿಕರಿಗೆ ಸೂಕ್ತ ಉತ್ತರ ಇಲ್ಲ. ಹಿಂದೆಲ್ಲ ಹೋರಾಟಗಾರರು ಎಂದರೆ ಭಯ ಇತ್ತು. ಸಂಘಟನೆಯವರು ಬಂದರೆ ಸಾಕು ಅಧಿಕಾರಿಗಳು ಭಯಭೀತರಾಗಿ ಕೆಲಸ ಮಾಡುತ್ತಿದ್ದರು. ಆದರೆ ಪರಿಸ್ಥಿತಿ ಈಗ ಹಾಗೆ ಇಲ್ಲ. ನಮ್ಮ ಸಂಘಟನೆಗಳಲ್ಲಿ ಒಗ್ಗಟ್ಟು ಇಲ್ಲ. ನಮ್ಮ ಬಲ ಕುಗ್ಗಿದೆ. ಇದನ್ನೆಲ್ಲ ಮೆಟ್ಟಿ ನಿಲ್ಲಬೇಕಾದರೆ ಸಂಘಟನೆಗಳು ಒಂದಾಗಬೇಕು ಬಲಿಷ್ಠವಾಗಬೇಕು” ಎಂದು ಕರೆಕೊಟ್ಟರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹುಣಸೂರು ಮನವಿ

ಕರ್ನಾಟಕ ರಾಜ್ಯ ರೈತ ಸಂಘ ಜಿಲ್ಲಾಧ್ಯಕ್ಷ ಹೊಸೂರು ಕುಮಾರ್ ಮಾತನಾಡಿ, “ಪಟ್ಟಣದಲ್ಲಿ ಅರಸು ಭವನ, ಸರ್ಕಾರಿ ಆಸ್ಪತ್ರೆ ಹೊಸದಾಗಿ ನಿರ್ಮಿಸಿ ವರ್ಷಗಳೇ ಕಳೆದಿವೆ. ಆದರೆ ಉದ್ಘಾಟನೆ ಭಾಗ್ಯ ಇನ್ನೂ ಸಿಕ್ಕಿಲ್ಲ. ರಸ್ತೆಗಳು ಗುಂಡಿ ಬಿದ್ದಿವೆ ಯಾರು ಕೇಳುವವರಿಲ್ಲ. ಈ ಎಲ್ಲ ಸಮಸ್ಯೆಗಳಿಗೆ ಮುಕ್ತಿ ನೀಡಬೇಕು. ಮುಖ್ಯಮಂತ್ರಿಗಳು ತಮ್ಮ ತವರು ಜಿಲ್ಲೆಯ ಬಗ್ಗೆ ಗಮನಹರಿಸಬೇಕು” ಎಂದರು.

ಪ್ರತಿಭಟನೆಯಲ್ಲಿ ಪ್ರಗತಿಪರ ಸಂಘಟನೆಗಳ ಒಕ್ಕೂಟದ ಸಂಚಾಲಕ ಅತ್ತಿಕುಪ್ಪೆ ರಾಮಕೃಷ್ಣ, ನಿಂಗರಾಜು ಮಲ್ಲಾಡಿ, ರತ್ನಾಪುರಿ ಪುಟ್ಟಸ್ವಾಮಿ,ನೇತ್ರಾವತಿ, ಬೆಂಕಿಪುರ ಚಿಕ್ಕಣ್ಣ,ಸ್ವಾಮಿ ಗೌಡ, ಶಿವರಾಜು,ಮಹದೇವಮ್ಮ, ವಿ ಬಸವರಾಜು, ಕಾಂತರಾಜು, ಪ್ರಕಾಶ್, ದಶರಥ, ದೇವರಾಜ್ ಸೇರಿದಂತೆ ನೂರಾರು ಕಾರ್ಯಕರ್ತರು ಭಾಗಿಯಾಗಿದ್ದರು.

ಈ ದಿನ ಇಂಪ್ಯಾಕ್ಟ್:

ಹುಣಸೂರು ತಾಲೂಕು ಸರ್ಕಾರಿ ಆಸ್ಪತ್ರೆ ಕುರಿತು ಈ ದಿನ.ಕಾಮ್ ಇತ್ತೀಚೆಗೆ ವಿಶೇಷ ಸುದ್ದಿ ಮಾಡಿತ್ತು. ಇದರ ಪರಿಣಾಮವಾಗಿ ಸರ್ಕಾರದಿಂದ 9 ಕೋಟಿ ಹಣ ಬಿಡುಗಡೆಯಾಗಿದೆ. ಪ್ರಗತಿಪರ ಸಂಘಟನೆಗಳು ಈ ದಿನ.ಕಾಮ್ ಮಾಧ್ಯಮಕ್ಕೆ ಧನ್ಯವಾದ ಸಲ್ಲಿಸಿದರು.

ಮೈಸೂರು 14

 

ಬೇಡಿಕೆಗಳು:

  • ಸಾರ್ವಜನಿಕ ಆಸ್ಪತ್ರೆ ಹೊಸ ಕಟ್ಟಡವನ್ನು ಕೂಡಲೇ ಸಾರ್ವಜನಿಕರ ಬಳಕೆಗೆ ಮುಕ್ತಗೊಳಿಸಬೇಕು.
  • ಅರಸು ಭವನ ಕೂಡಲೆ ಉದ್ಘಾಟಿಸಬೇಕು.
  • ಸಕ್ರಮ ಸಮಿತಿ ರಚಿಸಿ ಸಾಗುವಳಿ ಮಾಡುತ್ತಿರುವ ಎಲ್ಲ ರೈತರಿಗೂ ಸಾಗುವಳಿ ನೀಡಬೇಕು.
  • ತಾಲೂಕಿನಲ್ಲಿರುವ ವಸತಿ ನಿವೇಶನ ರಹಿತರಿಗೆ ವಸತಿ ನಿವೇಶನ ಕಲ್ಪಿಸಬೇಕು.
  • ರೈತರಿಗೆ ಹಗಲಿನ ಸಮಯದಲ್ಲಿ 8 ಗಂಟೆಗೆ 3 ಫೇಸ್ ವಿದ್ಯುತ್ ನೀಡಬೇಕು.
  • ಸರ್ಕಾರಿ ಕಚೇರಿಗಳಲ್ಲಿ ಸಾರ್ವಜನಿಕರು ನೀಡುವ ಅರ್ಜಿಗಳನ್ನು ಶೀಘ್ರ ವಿಲೇವಾರಿ ಮಾಡಬೇಕು.
  • ನಗರಸಭೆ ಹಾಗೂ ಪಂಚಾಯ್ತಿಗಳಲ್ಲಿ ಮೀಸಲಿಟ್ಟ ಹಣವನ್ನು ಎಸ್ಸಿ,ಎಸ್ಟಿ ಪಂಗಡದ ಅಂಗವಿಕಲರಿಗೆ ಹಾಗೂ ಹಿಂದುಳಿದ ವರ್ಗಗಳಿಗೆ ಬಳಸಬೇಕು
  • ಎಪಿಎಂಸಿ ಸ್ವಚ್ಚತೆ ಕಾಪಾಡಲು ಕ್ರಮವಹಿಸಬೇಕು.
  • ದುಸ್ಥಿತಿಯಲ್ಲಿರುವ ಬಿಳಿಕೆರೆ ನಾಡ ಕಚೇರಿಗೆ ಹೊಸ ಕಟ್ಟಡ ನಿರ್ಮಿಸಲು ಕ್ರಮವಹಿಸಬೇಕು.
  • ಚಿಲ್ಕುಂದವನ್ನು ಹೋಬಳಿ ಕೇಂದ್ರವನ್ನಾಗಿಸಬೇಕು.
WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...