ಮೈಸೂರು | ‘ಸುಸ್ಥಿರ ಘನತ್ಯಾಜ್ಯ ನಿರ್ವಹಣಾ ಘಟಕ’ ಉದ್ಘಾಟನೆ

Date:

ಮೈಸೂರು ತಾಲೂಕಿನ ನಾಗವಾಲ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ‘ಹಸಿರು ದಳ ಮತ್ತು ಆಶ್ರಯ ಹಸ್ತ ಟ್ರಸ್ಟ್ ಸಹಯೋಗದೊಂದಿಗೆ ನೂತನವಾಗಿ ನಿರ್ಮಿಸಿರುವ ʼಸುಸ್ಥಿರ ಘನತ್ಯಾಜ್ಯ ನಿರ್ವಹಣಾ ಘಟಕʼವನ್ನು ಜೆಡಿಎಸ್‌ ಶಾಸಕ ಜಿ ಟಿ ದೇವೇಗೌಡ ಉದ್ಘಾಟಿಸಿದರು.

ಜಿ ಟಿ ದೇವೇಗೌಡ ಮಾತನಾಡಿ, “ಗ್ರಾಮದ ಸ್ವಚ್ಛತೆ ಕಡೆಗೆ ಗಮನ ಕೊಡಬೇಕು. ಎಲ್ಲೆಂದರಲ್ಲಿ ಕಸ ಎಸೆಯುವುದು, ಸುರಿಯುವುದು ತಪ್ಪು. ಆದ್ದರಿಂದ ರೋಗರುಜಿನಗಳು ಹರಡುತ್ತವೆ. ಗ್ರಾಮದ ಸ್ವಚ್ಛತೆ ಹದಗೆಡುತ್ತದೆ. ಹಾಗಾಗಿ ಗ್ರಾಮಸ್ಥರು ಸುಸ್ಥಿರ ಘನತ್ಯಾಜ್ಯ ಘಟಕದ ಉಪಯೋಗ ಪಡೆದುಕೊಳ್ಳಬೇಕು” ಎಂದು ಸಲಹೆ ನೀಡಿದರು.

ಜಿಲ್ಲಾ ಪಂಚಾಯತ್ ಸಿಇಒ ಕೆ ಎಂ ಗಾಯತ್ರಿ ಮಾತನಾಡಿ, “ಪ್ರತಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ತ್ಯಾಜ್ಯ ನಿರ್ವಹಣಾ ಘಟಕ ತೆರೆಯಲಾಗಿದೆ. ಆದಷ್ಟು ಕಸ ವಿಂಗಡಿಸಿ ವಿಲೇವಾರಿ ಮಾಡಲು ಸಹಕರಿಸಬೇಕು. ಗ್ರಾಮ ಪಂಚಾಯಿತಿ ಕಸ ಸಂಗ್ರಹ ಕೂಡ ಆಯಾ ಸಮಯಕ್ಕೆ ನಿಯೋಜನೆ ಮಾಡಿ, ಸಂಗ್ರಹಿಸಿದ ಕಸವನ್ನು ತ್ಯಾಜ್ಯ ಘಟಕದ ನೆರವಿನಿಂದ ವಿಲೇವಾರಿ ಮಾಡಬೇಕು. ಗ್ರಾಮ ಪಂಚಾಯಿತಿಗಳೂ ಕೂಡಾ ಸ್ವಚ್ಛತೆಯ ಕಡೆಗೆ ಗಮನಕೊಟ್ಟು ಎಲ್ಲಿಯೂ ಕಸ ಸಂಗ್ರಹವಾಗದಂತೆ ನೋಡಿಕೊಳ್ಳಬೇಕು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಚಾಮರಾಜನಗರ | ಮಕ್ಕಳ ಕಲಿಕಾ ಸಾಮರ್ಥ್ಯ ಹೆಚ್ಚಿಸಲು ಸುಧಾರಣಾ ಕ್ರಮ ಕೈಗೊಳ್ಳಿ; ಜಿಲ್ಲಾಧಿಕಾರಿ ಶಿಲ್ಪಾನಾಗ್

ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಸಿ ಕೃಷ್ಣ, ನಾಗವಾಲ ಗ್ರಾಮ ಪಂಚಾಯಿತಿ ಅಧ್ಯಕ್ಷ ಕಾಮಾಕ್ಷಮ್ಮ, ಮಾಜಿ ಅಧ್ಯಕ್ಷ ನರೇಂದ್ರ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಎಂ ಡಿ ಮಾಯಪ್ಪ, ಆಶ್ರಯ ಹಸ್ತ ಟ್ರಸ್ಟ್‌ನ ಎನ್ ಕೆ ಶರ್ಮ, ಹಸಿರು ದಳ ಸಂಸ್ಥೆಯ ಕಾರ್ಯನಿರ್ವಾಹಕ ನಿರ್ದೇಶಕಿ ನಳಿನಿ ಶೇಖರ್, ಗ್ರಾಮ ಪಂಚಾಯಿತಿ ಸದಸ್ಯರು, ಸಿಬ್ಬಂದಿ, ಎಸ್ಎಚ್ ಜಿ ಸದಸ್ಯರು ಸೇರಿದಂತೆ ಹಲವರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...