ಮೈಸೂರು | ಗ್ರಾಮಾಡಳಿತಾಧಿಕಾರಿಗಳ ಅನಿರ್ದಿಷ್ಟಾವಧಿ ಮುಷ್ಕರ :ಕರ್ನಾಟಕ ರಾಜ್ಯ ರೈತ ಸಂಘದ ಬೆಂಬಲ

Date:

ಮೈಸೂರು ಜಿಲ್ಲೆ ಹುಣಸೂರು ಪಟ್ಟಣದ ತಾಲ್ಲೂಕು ಕಛೇರಿ ಮುಂಭಾಗದಲ್ಲಿ ಗ್ರಾಮಾಡಳಿತಾಧಿಕಾರಿಗಳು ಅನಿರ್ದಿಷ್ಟಾವಧಿ ಧರಣಿ ನಡೆಸುತ್ತಿದ್ದು, ಕರ್ನಾಟಕ ರಾಜ್ಯ ರೈತ ಸಂಘದ ಮುಖಂಡರು ಪ್ರತಿಭಟನೆಯಲ್ಲಿ ಭಾಗಿಯಾಗುವುದರ ಮೂಲಕ ಬೆಂಬಲ ನೀಡಿದ್ದಾರೆ.

ಕಂದಾಯ ಇಲಾಖೆಯ ಕರ್ನಾಟಕ ರಾಜ್ಯದ ಗ್ರಾಮಾಡಳಿತಾಧಿಕಾರಿಗಳ ಸಮಸ್ಯೆಗಳನ್ನು ಇಟ್ಟುಕೊಂಡು ದಿನಾಂಕ 10/02/2025 ರಿಂದ ರಾಜ್ಯಾದ್ಯಂತ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿದ್ದಾರೆ.ಅದರ ಭಾಗವಾಗಿ ಹುಣಸೂರಿನ ತಾಲ್ಲೂಕು ಕಚೇರಿ ಮುಂಭಾಗದಲ್ಲಿ ಸ್ಥಳೀಯ ನೌಕರರು ಧರಣಿ ನಡೆಸುತ್ತಿದ್ದಾರೆ.ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷರಾದ ಹೊಸೂರು ಕುಮಾರ್ ನೇತೃತ್ವದಲ್ಲಿ ಧರಣಿಯಲ್ಲಿ ಭಾಗಿಯಾಗುವುದರ ಮೂಲಕ ಬೆಂಬಲ ಸೂಚಿಸಿದೆ.

ಗ್ರಾಮ ಆಡಳಿತಾಧಿಕಾರಿಗಳಿಗೆ ಸ್ಥಳೀಯವಾಗಿ ಕಛೇರಿಯ ಗುಣಮಟ್ಟದ ತಂತ್ರಜ್ಞಾನಕ್ಕೆ ಸಂಬಂಧಪಟ್ಟಂತೆ ಮೊಬೈಲ್ ಫೋನ್ (12 ಜಿಬಿ, 256 ಜಿಬಿ) ಸಿಮ್ ಮತ್ತು ಡೇಟಾ. ಗೂಗಲ್ ಕ್ರೋಮ್ ಬುಕ್, ಲ್ಯಾಪ್ಟಾಪ್, ಪ್ರಿಂಟರ್ ಮತ್ತು ಸ್ಕ್ಯಾನರ್‌ಗಳ ಸಲಕರಣೆಗಳನ್ನು ಸರ್ಕಾರವು ಮಂಜೂರು ಮಾಡಬೇಕು.ಇದರಿಂದ ಗ್ರಾಮ ಆಡಳಿತಾಧಿಕಾರಿಗಳು ತಾಂತ್ರಿಕತೆಗೆ ಸಂಬಂಧಿಸಿದಂತೆ ಸರ್ಕಾರದ ಮೊಬೈಲ್ ತಂತ್ರಾಂಶಗಳಾದ 21 ಆಪ್‌ಗಳಿಂದ ರೈತರಿಗೆ ಮಾಹಿತಿ ಸಿಗುವ ಎಲ್ಲಾ ಆಪ್‌ಗಳು ಸಿಗುವಂತೆ ಅನುಕೂಲವಾಗುತ್ತದೆ. ಈಗಿರುವ ವ್ಯವಸ್ಥೆಯಲ್ಲಿ ಸಾರ್ವಜನಿಕರಿಗೆ ಹಾಗೂ ರೈತರಿಗೆ ಬೇಕಾದ ದಾಖಲೆ ಪತ್ರಗಳು ದೊರಕುತ್ತಿಲ್ಲ. ಈ ಸಮಸ್ಯೆಗಳಿಂದಾಗಿ ರೈತರಿಗೆ ಸಾರ್ವಜನಿಕರಿಗೆ ದೊರಕಬೇಕಾದ ಸೌಲಭ್ಯಗಳು ದೊರೆಯದೆ ಸಮಸ್ಯೆ ಅನುಭವಿಸುತ್ತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಮಸ್ಯೆಗಳನ್ನು ಪರಿಹರಿಸುವುದು ಸರ್ಕಾರದ ಜವಾಬ್ದಾರಿಯಾಗಿದ್ದು,ಈ ಸಮಸ್ಯೆಗಳಿಗೆ ಅಧಿಕಾರಿಗಳು ಧರಣಿ ಮಾಡುತ್ತಿರುವುದು ರೈತರ ಮತ್ತು ಸಾರ್ವಜನಿಕರ ಹಿತಕ್ಕಾಗಿ ಹಾಗಾಗಿ ರೈತ ಸಂಘವು ಗ್ರಾಮ ಆಡಳಿತಾಧಿಕಾರಿಗಳು ಮಾಡುತ್ತಿರುವ ಮುಷ್ಕರಕ್ಕೆ ಬೆಂಬಲಿಸಿದೆ.

ಸರ್ಕಾರವು ಗಂಭೀರವಾಗಿ ಪರಿಗಣಿಸಿ ಅಧಿಕಾರಿಗಳ ಮುಷ್ಕರದ ಮೂಲಭೂತ ಸೌಲಭ್ಯಗಳನ್ನು ಈಡೇರಿಸುವ ಮೂಲಕ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಬೇಕು.ದಿನಾಂಕ ದಿನಾಂಕ 17/02/2025 ರ ಸೋಮವಾರದೊಳಗೆ ಸರ್ಕಾರವು ಅಧಿಕಾರಿಗಳ ಮುಷ್ಕರವನ್ನು ಕೈ ಬಿಡುವಂತೆ ಮನವೊಲಿಸಿ ಬೇಡಿಕೆ ಈಡೇರಿಸಬೇಕು.

ಒಂದು ವೇಳೆ ಸಮಸ್ಯೆಯನ್ನು ಪರಿಹರಿಸದೆ ರಾಜ್ಯವ್ಯಾಪಿ ಅಧಿಕಾರಿಗಳು ಹೀಗೆ ಮುಷ್ಕರ ಮುಂದುವರಿಸಿದರೆ ಅಧಿಕಾರಿಗಳ ಪರವಾಗಿ ಹೋರಾಟ ರೂಪಿಸಬೇಕಾಗುತ್ತದೆ ಎಂದು ಮೈಸೂರು ಜಿಲ್ಲಾ ರೈತ ಸಂಘದ ಅಧ್ಯಕ್ಷರಾದ ಹೊಸೂರು ಕುಮಾರ್ ಎಚ್ಚರಿಕೆ ನೀಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಕೊಡಗು | ಭಯದಲ್ಲೇ ದಿನ ದೂಡುವ ಆದಿವಾಸಿಗಳು; ಪರ್ಯಾಯ ವ್ಯವಸ್ಥೆಗೆ ಮನವಿ

ಗ್ರಾಮ ಆಡಳಿತಾಧಿಕಾರಿಗಳ ಸಮಸ್ಯೆಗಳನ್ನು ಈಡೇರಿಸುವಂತೆ ಹುಣಸೂರು ಉಪವಿಭಾಗಾಧಿಕಾರಿ ವಿಜಯ್ ಕುಮಾರ್ ಅವರಿಗೆ ಮನವಿ ಪತ್ರ ಸಲ್ಲಿಸಿದ್ದು,ಉಪ ವಿಭಾಗಧಿಕಾರಿ ವಿಜಯ್ ಕುಮಾರ್ ಮಾತನಾಡಿ ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ಅವರಿಗೆ ಕಳಿಸಿಕೊಡಲಾಗುವುದು ಎಂದಿದ್ದಾರೆ.

ಕರ್ನಾಟಕ ರಾಜ್ಯ ರೈತ ಸಂಘದ ಕಿರಿಜಾಜಿ ಧನಂಜಯ, ಮೂಕನಹಳ್ಳಿ ವಿಜಿ ಸೇರಿದಂತೆ ಹಲವರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...