ಮೈಸೂರು‌ | ಕೂರ್ಗಳ್ಳಿ ಹಾಲು ಉತ್ಪಾದಕರ ಸಂಘದಲ್ಲಿ ಅವ್ಯವಹಾರ; ಕಾಡಾ ಕಚೇರಿಗೆ ದೂರು

Date:

ಮೈಸೂರು ಗ್ರಾಮಾಂತರ ಕೂರ್ಗಳ್ಳಿ ಹಾಲು ಉತ್ಪಾದಕರ ಸಂಘದಲ್ಲಿ ಸಂಘದ ನಿರ್ದೇಶಕರೇ ಅವ್ಯವಹಾರ ನಡೆಸಿದ್ದು, ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ ಗ್ರಾಮಸ್ಥರು ಕಾಡಾ ಕಚೇರಿಯ ಸಹಕಾರ ಇಲಾಖೆಗೆ ದೂರು ನೀಡಿದ್ದಾರೆ.

“ಹಾಲು ಉತ್ಪಾದಕರ ಸಂಘದಲ್ಲಿ ಕೂರ್ಗಳ್ಳಿ ಮಹದೇವ್ ಎಂಬುವರು ಹತ್ತು ವರ್ಷಗಳಿಂದ ನಿರ್ದೇಶಕರಾಗಿದ್ದು, ಹಾಲು ಉತ್ಪಾದನೆ ಮಾಡದ ತಮ್ಮದೇ ಕುಟುಂಬದ ಸದಸ್ಯರನ್ನು ಮತದಾರರ ಪಟ್ಟಿಯಲ್ಲಿ ಸೇರ್ಪಡೆ ಮಾಡಿ ಅಧಿಕಾರದ ಹಿಡಿತ ಸಾಧಿಸುತ್ತ ಬಂದಿದ್ದಾರೆ. ಅದಲ್ಲದೆ ಹತ್ತು ವರ್ಷಗಳಿಂದ ಸಹಕಾರ ಸಂಘಕ್ಕೆ ಚುನಾವಣೆಯನ್ನೇ ನಡೆಸದಂತೆ ನೋಡಿಕೊಂಡಿದ್ದಾರೆ” ಎಂದು ಆರೋಪಿಸಲಾಗಿದೆ.

“ನಿಜವಾದ ಹಾಲು ಉತ್ಪಾದಕರನ್ನು ಮತದಾರರ ಪಟ್ಟಿಯಿಂದ ಹೊರಗಿಟ್ಟು ಚುನಾವಣೆ ನಡೆಸಲು ಹುನ್ನಾರ ಮಾಡಿದ್ದು,
ಸುಮಾರು 180ಕ್ಕೂ ಹೆಚ್ಚು ಸದಸ್ಯರನ್ನು ಉದ್ದೇಶ ಪೂರ್ವಕವಾಗಿ ಮತದಾರರ ಪಟ್ಟಿಯಿಂದ ಕೈಬಿಟ್ಟು ಅನ್ಯಾಯ ಮಾಡಿದ್ದಾರೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.‌

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
ಕೂರ್ಗಳ್ಳಿ

“ಕಳೆದ ಹತ್ತು ವರ್ಷಗಳಿಂದ ಹಾಲು ಉತ್ಪಾದಕರ ಸಂಘದಲ್ಲಿ ಅಭಿವೃದ್ಧಿಯ ಕೆಲಸಗಳಾಗಿಲ್ಲ. ರೈತರಿಗೆ ಅನ್ಯಾಯವಾಗುತ್ತಿದೆ. ವಾಮ ಮಾರ್ಗದಲ್ಲಿ ಅಧಿಕಾರದ ಹಿಡಿತ ಸಾಧಿಸಿದ್ದಾರೆ. ಮತದಾರರ ಪಟ್ಟಿಯಲ್ಲಿರುವ ಲೋಪ ಸರಿಪಡಿಸಿ, ಮಹದೇವ್ ವಿರುದ್ಧ ತನಿಖೆ ಆದೇಶ ಮಾಡಿದ ನಂತರವೇ ನ್ಯಾಯಸಮ್ಮತ ಚುನಾವಣೆ ನಡೆಸಬೇಕು” ಎಂದು ರವಿಕುಮಾರ್ ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ಯಾದಗಿರಿ | ದಲಿತ ಅಪ್ರಾಪ್ತೆಯರ ಅತ್ಯಾಚಾರ, ಕುಟುಂಬಗಳಿಗೆ ಬಹಿಷ್ಕಾರ; ಸವರ್ಣೀಯರ ವಿರುದ್ಧ ಕ್ರಮ ಕೈಗೊಳ್ಳದ ಪೊಲೀಸ್‌ ಇಲಾಖೆ

ಗ್ರಾಮದ ರೈತ ಮುಖಂಡ ಕೆ ಎಚ್ ರಾಜೇಂದ್ರ, ಕೃಷ್ಣ ಎಸ್, ಮಲ್ಲಿಕಾರ್ಜುನ, ಎಂ ವಾಸು, ಲಿಂಗೇಗೌಡ, ರವಿಕುಮಾರ್, ರಾಮು, ಮರಿಗೌಡ, ಲೋಕೇಶ್ ಸೇರಿದಂತೆ ಅನೇಕ ರೈತ ಮುಖಂಡರು, ಮಹಿಳೆಯರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...