ಮೈಸೂರು | ಜೀವಿಕಾದಿಂದ ಇದೇ ಆಗಸ್ಟ್.10 ರಂದು ರಾಜ್ಯಮಟ್ಟದ ಸಮಾವೇಶ; ಒಕ್ಕೂಟದ ಚುನಾವಣೆ

Date:

ಮೈಸೂರಿನ ಪತ್ರಕರ್ತರ ಭವನದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಜೀತ ವಿಮುಕ್ತಿ ಕರ್ನಾಟಕ (ಜೀವಿಕ) ಹಾಗೂ ಕರ್ನಾಟಕ ಜೀತದಾಳು ಮತ್ತು ಕೃಷಿ ಕಾರ್ಮಿಕರ ಒಕ್ಕೂಟ (ರಿ) ಸಂಘಟನೆಯಿಂದ ಇದೇ ಆಗಸ್ಟ್. 10 ರಂದು ಕಲಾ ಮಂದಿರದಲ್ಲಿ ರಾಜ್ಯಮಟ್ಟದ ಸಮಾವೇಶ ಹಾಗೂ ಒಕ್ಕೂಟದ ಚುನಾವಣೆ ನಡೆಯಲಿದೆ ಎಂದು ಹೇಳಿದರು.

ಸಂಘಟನೆಯು ಕರ್ನಾಟಕ ರಾಜ್ಯಾಧ್ಯಂತ ಸುಮಾರು 35 ವರ್ಷಗಳಿಂದ ಡಾ. ಕಿರಣ್ ಕಮಲ್ ಪ್ರಸಾದ್ ರವರ ನೇತೃತ್ವದಲ್ಲಿ ಸಾಮಾಜಿಕ ಅನಿಷ್ಠ ಪಿಡುಗಾದ ಜೀತ ಪದ್ಧತಿ ನಿರ್ಮೂಲನೆಗಾಗಿ ಹಗಲಿರುಳು ಜಾಗೃತಿ ಮತ್ತು ಸಂಘಟನೆಯ ಕೆಲಸ ಮಾಡುತ್ತಾ ಬರುತ್ತಿದೆ. ಸಂಘಟನೆಯ ಅವಿರತ ಹೋರಾಟದ ಫಲವಾಗಿ ಮತ್ತು ಸಂಘಟನೆಯ ಪ್ರೇರಣೆಯಿಂದ ಸಾವಿರಾರು ಮಂದಿ ಸ್ವತಂತ್ರವಾಗಿ ಜೀತಮುಕ್ತರಾಗಿ ಇಂದು ಸಮಾಜದ ಮುಖ್ಯವಾಹಿನಿಗೆ ಬಂದಿದ್ದಾರೆ.

ಕರ್ನಾಟಕ ಸರ್ಕಾರದ ಜನಪರ ನಿಲುವುಗಳಲ್ಲಿ ಒಂದಾದ ಮತ್ತು ಸಂವಿಧಾನದ ಆಶಯವಾದ 1976ರ ಜೀತಪದ್ಧತಿ ನಿರ್ಮೂಲನೆ ಕಾಯ್ದೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನ ಮಾಡುವ ನಿಟ್ಟಿನಲ್ಲಿ ತೆಗೆದುಕೊಂಡ ನಿಲುವುಗಳು ಅತ್ಯಂತ ಶ್ಲಾಘನೀಯ. ಇದರ ಪರಿಣಾಮವಾಗಿ 2000 ನೇ ಇಸವಿಯಿಂದ 2024 ರ ತನಕ ರಾಜ್ಯಾಧ್ಯಂತ ಸುಮಾರು 7000 ಮಂದಿ ಸರ್ಕಾರದಿಂದ ಅಧಿಕೃತ ಜೀತವಿಮುಕ್ತಿ ಪ್ರಮಾಣ ಪತ್ರ ಪಡೆದಿರುವುದು ಸರಿಯಷ್ಟೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮೈಸೂರು ಜಿಲ್ಲೆಯಲ್ಲಿ ಇದುವರೆವಿಗೂ ಸುಮಾರು 1155 ಕ್ಕೂ ಹೆಚ್ಚು ಜೀತವಿಮುಕ್ತರಾಗಿದ್ದು ಇವರಿಗೆ ಸರ್ಕಾರದಿಂದ ಪರಿಹಾರ ಮತ್ತು ಪುನರ್ವಸತಿ ಸೌಲಭ್ಯಗಳು ಸರಿಯಾಗಿ ಹಾಗೂ ಸಕಾಲದಲ್ಲಿ ಸಿಗದೆ ಮತ್ತೆ ಜೀತಕ್ಕೆ ಹೋಗುವ ಪ್ರಸಂಗ ನಿರ್ಮಾಣವಾಗಿದೆ.
ಆದರೆ, ಜೀತಪದ್ದತಿ ಕಾನೂನು ಪ್ರಕಾರ ಕರ್ನಾಟಕ ಸರ್ಕಾರದ 2006 ಜೀತವಿಮುಕ್ತರ ಕ್ರಿಯಾಯೋಜನೆಯ ಪ್ರಕಾರ ಸಿಗಬೇಕಾದ ಸಮಗ್ರ ಪುನರ್ವಸತಿಯು ಸಕಾಲದಲ್ಲಿ ಸಿಗದೆ ಬಿಡುಗಡೆಗೊಂಡ ಜೀತವಿಮುಕ್ತರ ಜೀವನ ಅತಂತ್ರ ಪರಿಸ್ಥಿತಿಯಲ್ಲಿದೆ.

ಈ ಹಿನ್ನೆಲೆಯಲ್ಲಿ ದಿನಾಂಕ-10-08-2025 ರಂದು ಮೈಸೂರಿನ ಕಲಾಮಂದಿರದಲ್ಲಿ ಬಿಡುಗಡೆಗೊಂಡ ಎಲ್ಲಾ ಜೀತವಿಮುಕ್ತರಿಗೆ ಭೂಮಿ, ನಿವೇಶನ, ವಸತಿ, ಪುನರ್‌ ವಸತಿ, ಸಾಮಾಜಿಕ ಭದ್ರತೆ. ಹಾಗೂ ಪುನರ್‌ವಸತಿಗೆ ಮಾರಕವಾಗಿರುವ ತೊಡಕುಗಳನ್ನು ನಿವಾರಿಸಿ, ಸಮಗ್ರ ಪುನರ್ವಸತಿ ಕಲ್ಪಿಸಬೇಕು. ಎಸ್.ಓ.ಪಿ.ಯನ್ನು ರದ್ದುಪಡಿಸುವುದು ಸೇರಿದಂತೆ ಹಲವಾರು ಬೇಡಿಕೆಗಳನ್ನಿಟ್ಟುಕೊಂಡು ಮುಖ್ಯಮಂತ್ರಿಗಳು ಹಾಗೂ ಸಮಾಜ ಕಲ್ಯಾಣ ಸಚಿವರಿಗೆ ಮನವರಿಕೆ ಮಾಡಲು ರಾಜ್ಯ ಮಟ್ಟದ ಸಮಾವೇಶ ಹಾಗೂ ಒಕ್ಕೂಟದ ಚುನಾವಣೆಯನ್ನು ನಡೆಸುತ್ತಿದ್ದು ಈ ಕಾರ್ಯಕ್ರಮಕ್ಕೆ ವಿವಿಧ ಜಿಲ್ಲೆಗಳಿಂದ 3000 ಕ್ಕೂ ಹೆಚ್ಚು ಜೀತದಾಳುಗಳು ಹಾಗೂ ಕೃಷಿಕಾರ್ಮಿಕರು ಭಾಗವಹಿಸುತ್ತಿದ್ದಾರೆ.

ಕಾರ್ಯಕ್ರಮ ಉದ್ಘಾಟನೆಯನ್ನು ಜ್ಞಾನಪ್ರಕಾಶ್ ಸ್ವಾಮೀಜಿ ಹಾಗೂ ಸಮಾಜ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಹೆಚ್. ಸಿ. ಮಹದೇವಪ್ಪ ನೆರವೇರಿಸಲಿದ್ದಾರೆ. ಶಾಸಕರಾದ ಅನಿಲ್ ಚಿಕ್ಕಮಾದು, ಯತಿಂದ್ರ ಸಿದ್ದರಾಮಯ್ಯ, ಹರೀಶ್ ಗೌಡ, ರೈತ ಸಂಘದ ಬಡಗಲಪುರ ನಾಗೇಂದ್ರ, ದಸಂಸ ರಾಜ್ಯ ಸಂಚಾಲಕರಾದ ಗುರುಪ್ರಸಾದ್ ಕೆರಗೋಡು, ಕರ್ನಾಟಕ ಜನಶಕ್ತಿ ರಾಜ್ಯಾಧ್ಯಕ್ಷ ನೂರ್ ಶ್ರೀಧರ್ ಸೇರಿದಂತೆ ಹಲವರು ಉಪಸ್ಥಿತರಿರುತ್ತಾರೆಂದು ಮಾಹಿತಿ ನೀಡಿದರು.

ಈ ಸುದ್ದಿ ಓದಿದ್ದೀರಾ? ಮೈಸೂರು | ಆಗಸ್ಟ್. 12 ರಿಂದ 14 ರ ವರೆಗೆ ರಾಜ್ಯವ್ಯಾಪಿ ಆಶಾ ಕಾರ್ಯಕರ್ತೆಯರ ಅಹೋರಾತ್ರಿ ಧರಣಿ

ಪತ್ರಿಕಾಗೋಷ್ಟಿಯಲ್ಲಿ ರಾಜ್ಯ ಸಂಘಟನಾ ಸಂಚಾಲಕ ಉಮೇಶ್, ರಾಜ್ಯಾಧ್ಯಕ್ಷ ಮಹಾದೇವ, ತಾಲ್ಲೂಕು ಸಂಚಾಲಕ ಚಂದ್ರಶೇಖರ ಮೂರ್ತಿ, ಜಿಲ್ಲಾ ಸಂಚಾಲಕ ಬಸವರಾಜು, ತಾಲ್ಲೂಕು ಒಕ್ಕೂಟದ ಅಧ್ಯಕ್ಷ ಗಣೇಶ್ ಕೆ. ಎಡತೊರೆ, ಸರಗೂರು ತಾಲ್ಲೂಕು ಅಧ್ಯಕ್ಷ ಬಸವರಾಜು, ಜಾಗೃತಿ ಸಮಿತಿ ಸದಸ್ಯ ಶಿವಣ್ಣ ಯಲವತ್ತೂರು ಸೇರಿದಂತೆ ಇನ್ನಿತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...