ಮೈಸೂರು | ಪತ್ರಕರ್ತರ ಸಂಘದ ವಾರ್ಷಿಕ ಕ್ರೀಡಾಕೂಟಕ್ಕೆ ಚಾಲನೆ

Date:

ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ವತಿಯಿಂದ ಓವಲ್ ಮೈದಾನದಲ್ಲಿ ಇಂದಿನಿಂದ ಎರಡು ದಿನಗಳ ಕಾಲ ಆಯೋಜಿಸಿರುವ ವಾರ್ಷಿಕ ಕ್ರೀಡಾಕೂಟಕ್ಕೆ ಚಾಲನೆ ನೀಡಲಾಯಿತು.

ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಎನ್. ಕೆ. ಲೋಕನಾಥ್, ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ ನ ಮೈಸೂರು ವಲಯದ ಸಂಯೋಜಕ ಆರ್. ಕೆ. ಹರಿಕೃಷ್ಣ ಕುಮಾರ್, ಮೈಸೂರು ವಿವಿ ದೈಹಿಕ ಶಿಕ್ಷಣ ವಿಭಾಗದ ಮುಖ್ಯಸ್ಥ ಡಾ. ಸಿ. ವೆಂಕಟೇಶ್ ಸೇರಿದಂತೆ ಮತ್ತಿತರ ಗಣ್ಯರು ಬಲೂನ್ ಗಳನ್ನು ಹಾರಿಬಿಡುವುದರ ಜೊತೆಗೆ, ಕ್ರಿಕೆಟ್ ಬ್ಯಾಟ್ ಬೀಸುವ ಮೂಲಕ ಪತ್ರಕರ್ತರ ವಾರ್ಷಿಕ ಕ್ರೀಡಾಕೂಟಕ್ಕೆ ಚಾಲನೆ ನೀಡಿದರು.

ಇದೇ ವೇಳೆ, ಮೈಸೂರು ವಿವಿಯ ಕುಲಪತಿ ಲೋಕನಾಥ್ ಮಾತನಾಡಿ, ” ಮನೋ ವಿಕಾಸ ಮತ್ತು ಬುದ್ದಿ ಚುರುಕುಗೊಳ್ಳಲು ಕ್ರೀಡೆ ಪ್ರತಿಯೊಬ್ಬರಿಗೂ ಅಗತ್ಯ. ಹಾಗೆಯೇ, ದೈಹಿಕ, ಮಾನಸಿಕ ಆರೋಗ್ಯಕ್ಕೂ ಸಹಕಾರಿ‌ಯಾಗಿದೆ. ಕೆಲಸದ ಒತ್ತಡದ ನಡುವೆಯೂ ಪತ್ರಕರ್ತರು ಒಂದೆಡೆ ಸೇರಿ ಕ್ರೀಡೆಯಲ್ಲಿ ಪಾಲ್ಗೊಂಡಿರುವುದು ಸಂತಸದ ಸಂಗತಿಯಾಗಿದೆ. ಕೇವಲ ಗೆಲುವು‌ ಮುಖ್ಯವಲ್ಲ ಸ್ಪರ್ಧೆಯಲ್ಲಿ ಭಾಗವಹಿಸುವುದು ಮುಖ್ಯವಾಗಿದ್ದು, ಸೋಲು ಗೆಲುವನ್ನು ಸಮಾನವಾಗಿ ಸ್ವೀಕರಿಸಿ. ಈ ರೀತಿಯ ಚಟುವಟಿಕೆಗಳು ಸಂಘದ ಸದಸ್ಯರ ಸೌಹಾರ್ದತೆಯ ವೃದ್ದಿಗೆ ಸಹಕಾರಿಯಾಗಲಿದೆ ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಕೆ. ದೀಪಕ್ ಮಾತನಾಡಿ,” ಮೈಸೂರು ಪತ್ರಿಕೋದ್ಯಮಕ್ಕೆ ಕೆಬಿಜಿ ಮತ್ತು ಕೋಟಿ ಅವರು ಎರಡು ಕಣ್ಣುಗಳಂತೆ, ಕೆಬಿಜಿ ಅವರಿಗೆ ಕ್ರೀಡೆಯ ಬಗ್ಗೆ ಸಾಕಷ್ಟು ಒಲವಿತ್ತು. ಈ ಹಿನ್ನೆಲೆಯಲ್ಲಿ ಈ ಬಾರಿಯ ಕ್ರೀಡಾ ಕೂಟದಲ್ಲಿ ನಡೆಯುತ್ತಿರುವ ಕ್ರಿಕೆಟ್ ಕಪ್ ಗೆ ‘ ಕೆಬಿಜಿ‌ ಕಪ್ ‘ ಎಂದು ಹೆಸರಿಡಲಾಗಿದೆ. ಈ ಮೂಲಕ ಅವರಿಗೆ ಗೌರವ ಸಲ್ಲಿಸುವುದು ನಮ್ಮ ಕರ್ತವ್ಯ ” ಎಂದರು.

ಈ ಸುದ್ದಿ ಓದಿದ್ದೀರಾ? ಕೊಡಗು | ಜನ ಜೀವನಕ್ಕೆ ಕಂಟಕರಾದ ಅರಣ್ಯ ಇಲಾಖೆ; ಶಾಸಕ ಡಾ ಮಂತರ್ ಗೌಡ ಆಕ್ರೋಶ

ಜಿಲ್ಲಾ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಧರ್ಮಾಪುರ ನಾರಾಯಣ್ ಹಾಗೂ ಪದಾಧಿಕಾರಿಗಳು ಮತ್ತು ಕಾರ್ಯಕಾರಿ ಸಮಿತಿಯ ಸದಸ್ಯರು ಸೇರಿದಂತೆ ಇನ್ನಿತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...