ಮೈಸೂರು | ಕಬಿನಿ ಕುಡಿಯುವ ನೀರು ಯೋಜನೆ; ಕಾಮಗಾರಿ ವೀಕ್ಷಿಸಿದ ಸಚಿವ ಹೆಚ್‌ ಸಿ ಮಹದೇವಪ್ಪ

Date:

ಮೈಸೂರು ಜಿಲ್ಲಾ ಉಸ್ತುವಾರಿ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ ಹೆಚ್ ಸಿ ಮಹದೇವಪ್ಪ ನೇತೃತ್ವದಲ್ಲಿ ನಂಜನಗೂಡು ಬಳಿಯ ಬಿದರಗೋಡಿನಲ್ಲಿರುವ ಕಬಿನಿ ಕುಡಿಯುವ ನೀರು ಯೋಜನೆ ಕಾಮಗಾರಿ ವೀಕ್ಷಣೆ ನಡೆಸಲಾಯಿತು.

ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಶಾಸಕ ಜಿ ಟಿ ದೇವೆಗೌಡ, ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷ ಆಯುಬ್ ಖಾನ್, ಜಿಲ್ಲಾಧಿಕಾರಿ ಜಿ ಲಕ್ಷ್ಮೀಕಾಂತ್ ರೆಡ್ಡಿ, ಮಹಾನಗರ ಪಾಲಿಕೆ ಆಯುಕ್ತ ಶೈಕ್ ತನ್ವಿರ್ ಆಸಿಫ್ ಹಾಗೂ ಅಧಿಕಾರಿಗಳು ಸಚಿವರಿಗೆ ಸಾಥ್‌ ನೀಡಿದ್ದರು.

ಮೈಸೂರು ನಗರಕ್ಕೆ 2008ನೇ ಸಾಲಿನಲ್ಲಿ ಕಬಿನಿ ನದಿ ಮೂಲದಿಂದ ಜಲ ಮಂಡಳಿ ವತಿಯಿಂದ ಕುಡಿಯುವ ನೀರನ್ನು ವೃದ್ಧಿಸುವ ಯೋಜನೆ ರೂಪಿಸಿ, ವಿಸ್ತೃತ ಯೋಜನಾ ವರದಿ ತಯಾರಿಸಲಾಗಿತ್ತು. ಸದರಿ ಯೋಜನಾ ವರದಿಯಂತೆ ಕಬಿನಿ ನೀರು ಸರಬರಾಜು ಯೋಜನೆಯನ್ನು 3 ಹಂತದಲ್ಲಿ ಒಟ್ಟು 184 ಎಂಎಲ್‌ಡಿ ಸಾಮರ್ಥ್ಯಕ್ಕೆ ಅಭಿವೃದ್ಧಿ ಪಡಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅದರಂತೆ ಮೈಸೂರು ಮಹಾನಗರ ಪಾಲಿಕೆ ಮತ್ತು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಸಹಭಾಗಿತ್ವದಲ್ಲಿ ಸದರಿ ಯೋಜನೆಯ ಸಾಮರ್ಥ್ಯವನ್ನು ಉನ್ನತೀಕರಿಸುವ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿರುತ್ತದೆ.

ಈ ಯೋಜನೆಯಡಿಯಲ್ಲಿ ಕೆಂಬಾಳ್ ಜಲಶುದ್ದೀಕರಣ ಘಟಕದಲ್ಲಿ ಹೊಸದಾಗಿ 60 ಎಂಎಲ್‌ಡಿ ಸಾಮರ್ಥ್ಯದ ಫ್ಲಾಕ್ಯೂಲೇಟರ್ ಮತ್ತು ಟ್ಯೂಬ್ ಸೆಟ್ಟರ್ ಘಟಕವನ್ನು ಮತ್ತು ರ್ಯಾಪಿಡ್ ಸ್ಯಾಂಡ್ ಫಿಲ್ಟ್ರೇಷನ್ ಘಟಕಗಳನ್ನು ನಿರ್ಮಿಸುವ, ದೂರ ಸಬ್‌ ಸ್ಟೇಷನ್‌ನಿಂದ ಕೆಂಬಾಳ್ ಯಂತ್ರಗಾರದವರೆಗೆ 11 ಕೆವಿ ಎಕ್ಸ್‌ಪ್ರೆಸ್ ಭೂಗತ ಕೇಬಲ್ ಅಳವಡಿಸುವ, ಕೆಂಬಾಳ್ ಯಂತ್ರಾಗಾರದಲ್ಲಿ ಮತ್ತು ಪಿಂಜರಾಪೋಲ್ ಐಬಿಪಿಎಸ್ ನಲ್ಲಿ ಹೊಸದಾಗಿ 2500 ಹೆಚ್ ಪಿ ಮತ್ತು 1750 ಹೆಚ್ ಪಿ ಸಾಮರ್ಥ್ಯದ ಪಂಪಿಂಗ್ ಯಂತ್ರೋಪಕರಣಗಳಿಗೆ ವಿದ್ಯುತ್ ಉಪಕರಣಗಳನ್ನು ಅಳವಡಿಸಲಾಗುತ್ತಿದೆ.

ಜಲಶುದ್ದೀಕರಣ ಘಟಕಗಳನ್ನು ನಿರ್ಮಿಸುವ ಕಾಮಗಾರಿ ಮಾರ್ಚ್ 2021ರಲ್ಲಿ ಪ್ರಾರಂಭಿಸಲಾಗಿದ್ದು, ಪಂಪಿಂಗ್ ಮತ್ತು ವಿದ್ಯುತ್ ಉಪಕರಣ ಅಳವಡಿಸುವ ಕಾಮಗಾರಿಯನ್ನು ಏಪ್ರಿಲ್ 2023ರಲ್ಲಿ ಪ್ರಾರಂಭಿಸಲಾಗಿದೆ. ಶೇ. 90% ರಷ್ಟು ಕಾಮಗಾರಿ ಪೂರ್ಣಗೊಂಡಿದ್ದು, ಯಂತ್ರಾಗಾರದ ಒಳಗಡೆ ವಿದ್ಯುತ್ ಉಪಕರಣಗಳನ್ನು ಅಳವಡಿಸುವ ಕಾಮಗಾರಿಗಳು ಬಾಕಿಯಿರುತ್ತವೆ.

ಈ ಕಾಮಗಾರಿಯು ಪೂರ್ಣಗೊಂಡ ನಂತರ ಶುದ್ದೀಕರಣ ಘಟಕಗಳ ಸಾಮರ್ಥ್ಯ 120 ಎಂಎಲ್‌ಡಿ ಮತ್ತು ಪಂಪಿಂಗ್ ಸಾಮರ್ಥ್ಯವು 100 ಎಂಎಲ್‌ಡಿಗೆ ಹೆಚ್ಚಳವಾಗುತ್ತದೆ ಮತ್ತು ಇದರಿಂದ ಮೈಸೂರು ನಗರಕ್ಕೆ ಸಾರ್ವಜನಿಕ ಬಳಕೆಗೆ ಹೆಚ್ಚುವರಿಯಾಗಿ 40 ಎಂಎಲ್‌ಡಿ ನೀರು ಲಭ್ಯವಾಗುತ್ತದೆ.

ಈ ಸುದ್ದಿ ಓದಿದ್ದೀರಾ? ಮೈಸೂರು | ಅಪಾರ್ಟ್‌ಮೆಂಟ್‌ನಲ್ಲಿ ಒಂದೇ ಕುಟುಂಬದ ನಾಲ್ವರು ಶವವಾಗಿ ಪತ್ತೆ: ಆತ್ಮಹತ್ಯೆ ಶಂಕೆ

ಹೆಚ್ಚುವರಿ ನೀರನ್ನು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಬಡಾವಣೆಗಳಿಗೆ 13 ಎಂಎಲ್‌ಡಿ ಮತ್ತು ಉಳಿಕೆ ನೀರನ್ನು ಮೈಸೂರು ಮಹಾನಗರ ಪಾಲಿಕೆಯ ವಾರ್ಡ್‌ಗಳಿಗೆ ಸರಬರಾಜು ಮಾಡಲು ಉದ್ದೇಶಿಸಲಾಗಿದೆ. ಈ ಎಲ್ಲಾ ಯೋಜನೆ ಉಪ ಯೋಜನೆಗಳು ಶೀಘ್ರ ಕಾಮಗಾರಿ ಪೂರ್ಣಗೊಳಿಸಿದರೆ ನಗರದ ಸಾರ್ವಜನಿಕರಿಗೆ ನೀರಿನ ಸಮಸ್ಯೆ ಇರುವುದಿಲ್ಲ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...