ಮೈಸೂರು | ಕಾರ್ಗಿಲ್ ವಿಜಯೋತ್ಸವ ಪ್ರಯುಕ್ತ ಎಕ್ಸ್ ಸರ್ವಿಸ್ ಮೆನ್ ಮೂವ್ಮೆಂಟ್‌ನಿಂದ ಪಾದಯಾತ್ರೆ

Date:

ಮೈಸೂರು ಎಕ್ಸ್ ಸರ್ವಿಸ್ ಮೆನ್ ಮೂವ್ಮೆಂಟ್(ರಿ) ತಂಡದವರು ಹಮ್ಮಿಕೊಂಡಿದ್ದ 25ನೇ ವರ್ಷದ ಕಾರ್ಗಿಲ್ ವಿಜಯೋತ್ಸವದ ಅಂಗವಾಗಿ ನಗರದ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದ ಹೆಬ್ಬಾಗಿಲಿನಲ್ಲಿ ಕಾರ್ಗಿಲ್ ಹುತಾತ್ಮರಾದ ಕ್ಯಾಪ್ಟನ್ ವಿಕ್ರಂ ಭತ್ರ, ಲೆಫ್ಟಿನೆಂಟ್ ಮನೋಜ್ ಕುಮಾರ್ ಪಾಂಡೆ ಮತ್ತು ಕ್ಯಾಪ್ಟನ್ ಸೌರಭ್ ಕಾಲಿಯ ಭಾವಚಿತ್ರಕ್ಕೆ ಜಿಲ್ಲಾಧಿಕಾರಿ ಲಕ್ಷ್ಮಿಕಾಂತ್ ಪುಷ್ಪಾರ್ಚನೆ ಮಾಡುವುದರ ಮೂಲಕ ಪಾದಯಾತ್ರೆಗೆ
ಚಾಲನೆ ನೀಡಿದರು.

ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದಿಂದ ದೊಡ್ಡ ಗಡಿಯಾರ, ಗಾಂಧಿ ವೃತ್ತ, ದೇವರಾಜ ಅರಸ್ ರಸ್ತೆ ಮೂಲಕ ಮೆಟ್ರೋಪಾಲ್ ವೃತ್ತದಲ್ಲಿರುವ ಫೀಲ್ಡ್ ಮಾರ್ಷಲ್ ಕೆ ಎಂ ಕಾರಿಯಪ್ಪ ಪ್ರತಿಮೆ ಬಳಿಗೆ ತೆರಳಿದರು.

ಪಾದಯಾತ್ರೆಯಲ್ಲಿ ಮೈಸೂರು ಎಕ್ಸ್ ಸರ್ವಿಸ್ ಮನ್ ಮೂವ್ಮೆಂಟ್‌ನ 70ಕ್ಕೂ ಹೆಚ್ಚು ಮಾಜಿ ಸೈನಿಕರು, 250 ಎನ್‌ಸಿಸಿ ವಿದ್ಯಾರ್ಥಿಗಳು, 60 ಸೈನಿಕ್ ಅಕಾಡೆಮಿಯ ಭವಿಷ್ಯದ ಸೈನಿಕರು ಹಾಗೂ ನೂರಾರು ಸಂಖ್ಯೆಯಲ್ಲಿ ದೇಶಭಿಮಾನಿಗಳು, ಭಾಗಿಯಾಗಿ ಪಾದಯಾತ್ರೆ ಉದ್ದಕ್ಕೂ “ಭಾರತ್ ಮಾತಾಕೀ” ಜೈ ಘೋಷಣೆಯೊಂದಿಗೆ ಸಾಗಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

Mysore 1 1

ಫೀಲ್ಡ್ ಮಾರ್ಷಲ್ ಕೆ ಎಂ ಕಾರಿಯಪ್ಪ ಪ್ರತಿಮೆ ಬಳಿ ಹುತಾತ್ಮರಾದ ಕಾರ್ಗಿಲ್ ಯೋಧರಿಗೆ ಮುಖ್ಯ ಅತಿಥಿಗಳಾದ ನಿವೃತ್ತ ಸೈನ್ಯಾಧಿಕಾರಿ ಕರ್ನಲ್ ಮಹೇಂದ್ರ ಸಿಂಗ್‌ರವರಿಂದ ರಿತ್ ಪೆರೇಡ್ ಮಾಡಿಸಿಲಾಯಿತು.

ಜಿಲ್ಲಾಧಿಕಾರಿ ಲಕ್ಷ್ಮಿಕಾಂತ್ ರೆಡ್ಡಿ ಮಾತನಾಡಿ, “ನಾವುಗಳು ಇಲ್ಲಿ ಸುರಕ್ಷಿತವಾಗಿ,ಕ್ಷೇಮವಾಗಿ ಇದ್ದೇವೆ ಅಂದ್ರೆ ಅದಕ್ಕೆ ಗಡಿ ಕಾಯುತ್ತಿರುವ ಸೈನಿಕರೇ ಕಾರಣ. ಈ ಸಂದರ್ಭದಲ್ಲಿ ಹುತಾತ್ಮ ವೀರ ಯೋಧರನ್ನು ಸ್ಮರಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯ” ಎಂದರು.

ಮೈಸೂರು ಎಕ್ಸ್ ಸರ್ವಿಸ್ ಮೆನ್ ಮೂವ್ಮೆಂಟ್ ನ ಸಂಸ್ಥಾಪಕ ಮಹೇಶ್ ವಿ ಮಾತನಾಡಿ, “ಕಾರ್ಗಿಲ್ ಯುದ್ಧದಲ್ಲಿ ಹುತಾತ್ಮರಾಗಿರುವ 527 ವೀರ ಯೋಧರನ್ನು ನಾವುಗಳು ಸ್ಮರಿಸಬೇಕು ಈ ದಿನ ನಮಗೆಲ್ಲ ವಿಶೇಷವಾದದ್ದು. ದೇಶಕ್ಕಾಗಿ ಬಲಿದಾನ ನೀಡಿದ ವೀರ ಯೋಧರ ಸ್ಮರಣೆ ಮಾಡುವುದು ಭಾರತೀಯರಾದ ನಮ್ಮೆಲ್ಲರ ಕರ್ತವ್ಯ. ಯೋಧರಿಗೆ ನಾವು ಸಲ್ಲಿಸುವ ಗೌರವ. ದೇಶ ರಕ್ಷಣೆಗಾಗಿ, ನಮ್ಮೆಲ್ಲರ ರಕ್ಷಣೆಗಾಗಿ ಹೋರಾಡಿ ವೀರ ಮರಣನಪ್ಪಿದ ಸಾಹಸಿಗರಿಗೆ ನಾವೆಂದೂ ಚಿರಋಣಿಯಾಗಿರಬೇಕು” ಎಂದರು.

ಕಾರ್ಯಕ್ರಮದಲ್ಲಿ ಮಹಾ ನಗರ ಪಾಲಿಕೆ ಉಪ ಆಯುಕ್ತ ಮಂಜುನಾಥ್ ರೆಡ್ಡಿ,ಮಣಿಪಾಲ ಆಸ್ಪತ್ರೆಯ ಡಾ ಸುಮಿತ್,ಎಂಇಎಂನ ಉಪಾಧ್ಯಕ್ಷ ವಿವೇಕಾನಂದ, ಪ್ರಧಾನ ಕಾರ್ಯದರ್ಶಿ ಶ್ರೀಧರ್,ನಿರ್ದೇಶಕರುಗಳಾದ ಕಿಶೋರ್ ಕದಂ,ವಿಶ್ವನಾಥ್, ಲೋಕೇಶ್,ಧನಂಜಯ,ಸುರೇಶ್,ರಾಮನಾರಾಯಣ,ಮೋಹನ್,ಮಹದೇವ್ ಸೇರಿದಂತೆ ಪ್ರಮುಖರು ಭಾಗಿಯಾಗಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...