ಮೈಸೂರು | ಪೆ.10ರಿಂದ 12ರವರೆಗೆ ಕುಂಭಮೇಳ; ಅಗತ್ಯ ಮೂಲಸೌಲಭ್ಯ ಕಲ್ಪಿಸಲು ಎಚ್ ಸಿ ಮಹದೇವಪ್ಪ ಸೂಚನೆ

Date:

ಮೈಸೂರು ಜಿಲ್ಲೆಯ ಟಿ ನರಸೀಪುರದ ತ್ರಿವೇಣಿ ಸಂಗಮದಲ್ಲಿ ಮೂರು ವರ್ಷಕ್ಕೊಮ್ಮೆ ನಡೆಯುವ ‘ಕುಂಭಮೇಳ-2025’ನ್ನು
ಫೆಬ್ರವರಿ 10ರಿಂದ 12ರವರೆಗೆ ಹಮ್ಮಿಕೊಳ್ಳಲಾಗಿದ್ದು, ಕಾರ್ಯಕ್ರಮಕ್ಕೆ ಬರುವವರಿಗೆಲ್ಲ ಅಗತ್ಯ ಮೂಲಸೌಲಭ್ಯ ಕಲ್ಪಿಸಬೇಕು ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಚ್ ಸಿ ಮಹದೇವಪ್ಪ ಸೂಚನೆ ನೀಡಿದ್ದಾರೆ.

ಕುಂಭ ಮೇಳ-2025ರ ಸಂಬಂಧ ಜಲದರ್ಶಿನಿ ಅಥಿತಿ ಗೃಹದಲ್ಲಿ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ, “ಮೊದಲಿಗೆ 1989ರಲ್ಲಿ ಆರಂಭಗೊಂಡು, ಪ್ರತಿ ಮೂರು ವರ್ಷಗಳಿಗೊಮ್ಮೆ ಕುಂಭಮೇಳ ಆಚರಿಸಿಕೊಂಡು ಬರಲಾಗುತ್ತಿದೆ.
2019ರಲ್ಲಿ ನಡೆದಿತ್ತು. 2021ರಲ್ಲಿ ಕೋವಿಡ್ ಕಾರಣಕ್ಕೆ ನಡೆದಿರಲಿಲ್ಲ” ಎಂದು ಹೇಳಿದರು.

ಕುಂಭಮೇಳದ ಪೂರ್ವಭಾವಿ ಸಭೆ 1

“ಕುಂಭಮೇಳದಲ್ಲಿ ಸ್ವಚ್ಚತೆ ಕಾಪಾಡಬೇಕು. ಪ್ಲಾಸ್ಟಿಕ್ ಮುಕ್ತ ಪ್ರದೇಶವೆಂದು ಘೋಷಣೆ ಮಾಡಬೇಕು. ಶುದ್ಧ ಕುಡಿಯುವ ನೀರಿನ ವ್ಯವಸ್ಥೆ, ಮೊಬೈಲ್ ಟಾಯ್ಲೆಟ್ ವ್ಯವಸ್ಥೆ ಕಲ್ಪಿಸಬೇಕು. ಸಾಂಸ್ಕೃತಿಕ ಹಾಗೂ ಜನಪದ ಸಂಗೀತ ಕಾರ್ಯಕ್ರಮಗಳನ್ನು ಆಯೋಜನೆ ಮಾಡಬೇಕು. ಸ್ಥಳೀಯ ಕಲಾವಿದರಿಗೆ ಅವಕಾಶ ನೀಡಬೇಕು. ಕೆಎಸ್ಆರ್‌ಟಿಸಿ ಹೆಚ್ಚಿನ ಬಸ್ ವ್ಯವಸ್ಥೆ ಕಲ್ಪಿಸಬೇಕು” ಎಂದು ಸೂಚಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವಿಧಾನ ಪರಿಷತ್ ಸದಸ್ಯ ಡಾ ಯತೀಂದ್ರ ಸಿದ್ದರಾಮಯ್ಯ ಮಾತನಾಡಿ, “3 ದಿನ ಕಾರ್ಯಕ್ರಮ ನಡೆಯಲಿದ್ದು, ಲಕ್ಷಾಂತರ ಭಕ್ತರು ಆಗಮಿಸಿ ಕಾವೇರಿ ಆರತಿಯನ್ನು ಫೆಬ್ರವರಿ 11ರಂದು ಮಾಡಲಾಗುತ್ತದೆ. ಹಾಗಾಗಿ ಸಾಂಸ್ಕೃತಿಕ ಕಾರ್ಯಕ್ರಮಗಳು ದೇಶೀಯ ಸಂಸ್ಕೃತಿಯನ್ನು ಬಿಂಬಿಸುವಂತೆ ಮಾಡಬೇಕು. ಸ್ನಾನ ಘಟ್ಟಗಳಲ್ಲಿ ಸ್ವಚ್ಚತೆ ಹಾಗೂ ಮುನ್ನೆಚ್ಚರಿಕೆ ಕ್ರಮವಹಿಸಬೇಕು” ಎಂದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಆಕ್ರಮವಾಗಿ ಸೇಂದಿ ಮಾರಾಟ; ಆರೋಪಿಗಳು ಪೊಲೀಸರ ವಶ

ಜಿಲ್ಲಾಧಿಕಾರಿ ಜಿ ಲಕ್ಷ್ಮಿಕಾಂತ್ ರೆಡ್ಡಿ ಮಾತನಾಡಿ, “ಅಗ್ನಿ ಅವಘಡ ಮುನ್ನೆಚ್ಚರಿಕೆ, ಕುಟೀರಗಳ ಭದ್ರತೆ, ಉತ್ತಮ ರಸ್ತೆಗಳ ಸಂಪರ್ಕ,
ನದಿಯಲ್ಲಿ ಸ್ನಾನ ಮಾಡಲು 5 ಕಡೆ ಜಾಗ, 1 ಯಾಗ ಶಾಲೆ, 6 ಕುಟೀರಗಳನ್ನು ನಿರ್ಮಾಣ ಮಾಡಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು” ಎಂದರು.

ಜಿಲ್ಲಾ ಪಂಚಾಯತ್ ಸಿಇಒ ಕೆ ಎಂ ಗಾಯತ್ರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...