ಮೈಸೂರು | ರಾಜ್ಯದಲ್ಲಿ ಮಳೆಕೊರತೆ; ತಮಿಳುನಾಡಿಗೆ ನೀರು ಹರಿಸದಂತೆ ರೈತ ಸಂಘ ಒತ್ತಾಯ

Date:

ಕಾವೇರಿ ಜಲಾನಯನ ಪ್ರದೇಶದ ಜಲಾಶಯಗಳಿಂದ ತಮಿಳುನಾಡಿಗೆ ನೀರು ಹರಿಸದಂತೆ ಒತ್ತಾಯಿಸಿ ಕರ್ನಾಟಕ ರೈತ ಸಂಘದ ಕಾರ್ಯಕರ್ತರು ಮೈಸೂರಿನ ದಕ್ಷಿಣ ನೀರಾವರಿ ವಲಯ ಮುಖ್ಯ ಅಭಿಯಂತರರ ಮುಖಾಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದರು.

ಕರ್ನಾಟಕ ರಾಜ್ಯ ರೈತ ಸಂಘದ ಅಧ್ಯಕ್ಷ ಬಡಗಲಪುರ ನಾಗೇಂದ್ರ ಮಾತನಾಡಿ, “ರಾಜ್ಯದಲ್ಲಿ ಮಳೆ ಕೊರತೆಯಿಂದಾಗಿ ನೀರಾವರಿ ಜಲಾಶಯಗಳಿಗೆ ಒಳಹರಿವು ಅತ್ಯಂತ ಕಡಿಮೆಯಾಗಿದೆ. ಅಲ್ಲದೆ ಈವರೆಗೆ ಜಲಾಶಯಗಳ ನೀರಿನ ಶೇಖರಣೆಯೂ ಕಡಿಮೆ ಇರುವುದು ಕಳವಳಕಾರಿಯಾಗಿದೆ. ಉಪಯೋಗಿಸಲು ಸಾಧ್ಯವಿರುವ ನೀರು ಕಡಿಮೆ ಇದ್ದು, ಕಾವೇರಿ ನೀರು ನಿಯಂತ್ರಣ ಸಮಿತಿಯ ನಿರ್ದೇಶನದಂತೆ, ರಾಜ್ಯದ ಜಲಾಶಯಗಳಿಂದ ತಮಿಳುನಾಡಿಗೆ 15 ದಿನಗಳವರೆಗೆ 5 ಸಾವಿರ ಕ್ಯೂಸೆಕ್‌ ನೀರು ಹರಿಸಿದರೆ ಅಚ್ಚುಕಟ್ಟಿನಲ್ಲಿ ಬೆಳೆದಿರುವ ಫಸಲು ಉಳಿಸುವುದಿರಲಿ, ಕುಡಿಯುವ ನೀರಿಗೂ ಹಾಹಾಕಾರ ಉಂಟಾಗುತ್ತದೆ” ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ? ಕೊಪ್ಪಳ | ಬರಪೀಡಿತ ಪ್ರದೇಶ ಘೋಷಣೆಗೆ ರೈತ ಸಂಘ ಆಗ್ರಹ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಾವೇರಿ ನೀರು ನಿಯಂತ್ರಣ ಸಮಿತಿಯ ತೀರ್ಮಾನ ಖಂಡನೀಯವಾಗಿದ್ದು, ರಾಜ್ಯದಿಂದ ತಮಿಳುನಾಡಿಗೆ ನೀರು ಬಿಡದೆ ರಾಜ್ಯದ ರೈತರನ್ನು ರಕ್ಷಿಸಬೇಕು. ತಮಿಳುನಾಡಿಗೆ ನೀರು ಹರಿಸದಿರಲು ಸ್ಪಷ್ಟ ತೀರ್ಮಾನ ಮಾಡಿ, ಕಾನೂನು ಹೋರಾಟಕ್ಕೆ ಮುಂದಾಗಬೇಕು. ಅಗತ್ಯ ಇರುವ ಇತರೆ ಎಲ್ಲ ಕ್ರಮಗಳನ್ನು ಅನುಸರಿಸಿ, ರಾಜ್ಯದ ರೈತರನ್ನು ರಕ್ಷಿಸಲೇಬೇಕು” ಎಂದು ಒತ್ತಾಯಿಸಿದರು.

ಜಿಲ್ಲಾಧ್ಯಕ್ಷ ಹೊಸೂರು ಕುಮಾರ್‌, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹೊಸಕೋಟೆ ಬಸವರಾಜ್‌, ರಾಜ್ಯ ಮಹಿಳಾ ಪ್ರಧಾನ ಕಾರ್ಯದರ್ಶಿ ನೇತ್ರಾವತಿ, ರೈತ ಯುವಮುಖಂಡ ಪ್ರಸನ್ನ ಎನ್‌ ಗೌಡ ಸೇರಿದಂತೆ ಹಲವು ಮಂದಿ ರೈತರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...