ಮೈಸೂರು | ಭಾರೀ ಪ್ರಮಾಣದ ಸ್ಫೋಟಕ ವಸ್ತುಗಳು ಪತ್ತೆ; ಅಧಿಕಾರಿಗಳಿಂದ ಪರಿಶೀಲನೆ

Date:

ಮೈಸೂರು ನಗರದ ಹೊರವಲಯದ ತಿ.ನರಸೀಪುರದ ಕೆಂಪಯ್ಯನಹುಂಡಿ ಗೇಟ್ ಬಳಿಯ ಹೋಟೆಲ್ ಸಮೀಪ 10 ಸ್ಫೋಟಕ ವಸ್ತುಗಳು ಪತ್ತೆಯಾಗಿದೆ. ದಸರಾ ಸಿದ್ಧತೆಯ ನಡುವೆಯೇ ಈ ಸ್ಫೋಟಕಗಳು ಪತ್ತೆಯಾಗಿರುವುದು ಆತಂಕಕ್ಕೆ ಎಡೆಮಾಡಿಕೊಟ್ಟಿದೆ.

ಸ್ಫೋಟಕ ವಸ್ತುಗಳನ್ನು ಅಪರಿಚಿತರು ನೀಲಿ ಬಣ್ಣದ ಪ್ಲಾಸ್ಟಿಕ್ ಕವರ್‌ನಲ್ಲಿಟ್ಟು ಹೋಗಿದ್ದರು. ಸ್ಥಳೀಯರು ಹಾಗೂ ಹೋಟೆಲ್ ಸಿಬ್ಬಂದಿ ಅನುಮಾನಗೊಂಡು ನೋಡಿದಾಗ ಸ್ಫೋಟಕ ವಸ್ತುಗಳು ಎಂದು ತಿಳಿದು ಬಂದಿದೆ.

ಬಳಿಕ ಹೋಟೆಲ್ ಸಿಬ್ಬಂದಿ ಪ್ಲಾಸ್ಟಿಕ್ ಕವರ್ ಅನ್ನು ಪಕ್ಕದಲ್ಲಿರುವ ಮರಕ್ಕೆ ನೇತು ಹಾಕಿ ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಿದ ತಕ್ಷಣವೇ ಸ್ಥಳಕ್ಕೆ ಬಾಂಬ್ ನಿಷ್ಕ್ರಿಯ ದಳದ ಜೊತೆ ಧಾವಿಸಿದ ಪೊಲೀಸರು, ಸ್ಫೋಟಕಗಳಿದ್ದ ಕವರ್‌ ಅನ್ನು ಪರಿಶೀಲಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
ಸ್ಫೋಟಕ 1

ಕವರ್‌ನಲ್ಲಿ ಟ್ಯೂಬ್ ಆಕಾರದಲ್ಲಿರುವ 9 ಸ್ಪೋಟಕಗಳು ಮತ್ತು ಒಂದು ನಾಡ ಬಾಂಬ್ ಆಕಾರದ ವಸ್ತು ಪತ್ತೆಯಾಗಿದೆ. ಸ್ಫೋಟಕ ವಸ್ತುಗಳು ಕಲ್ಲು ಗಣಿಗಾರಿಕೆಗೆ ಹಾಗೂ ನಾಡ ಬಾಂಬ್ ಕಾಡು ಪ್ರಾಣಿಗಳ ಬೇಟೆಗೆ ಬಳಕೆಗೆ ಬಳಸಲಾಗುವ ವಸ್ತುಗಳಂತೆ ಕಂಡುಬಂದಿವೆ.

ಇದನ್ನು ಓದಿದ್ದೀರಾ? ‘ಈ ದಿನ’ ಫಲಶೃತಿ | ಚಿಕ್ಕಮಗಳೂರಿನ ಬೆಳಗೋಡು ಅಂಗನವಾಡಿಗೆ ‘ವಿದ್ಯುತ್ ಭಾಗ್ಯ’

ಪೊಲೀಸರು ಹಾಗೂ ಬಾಂಬ್ ನಿಷ್ಕ್ರಿಯ ದಳದ ಸಿಬ್ಬಂದಿ ಸ್ಫೋಟಕ ವಸ್ತುಗಳನ್ನು ವಶಕ್ಕೆ ಪಡೆದು ಪ್ರಯೋಗಾಲಯಕ್ಕೆ ಕಳುಹಿಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದು, ಮುಂದಿನ ತನಿಖೆ ಕೈಗೊಂಡಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...