ಮೈಸೂರು | ಮಹರ್ಷಿ ವಾಲ್ಮೀಕಿ ಎಲ್ಲರಿಗೂ ಆದರಣೀಯ ಪುರುಷ: ಎಚ್ ಸಿ ಮಹದೇವಪ್ಪ

Date:

ಜನಜೀವನದಲ್ಲಿ ಸಾಮರಸ್ಯ, ಪ್ರೀತಿ, ಅಭಿವೃದ್ಧಿ ಪರವಾದ ಆಡಳಿತ, ತ್ಯಾಗ ಮತ್ತು ಗುಣಾತ್ಮಕವಾದ ನಡವಳಿಕೆಯನ್ನು ತಮ್ಮ ಕಾವ್ಯದ ಮೂಲಕ ಇಡೀ ಪ್ರಪಂಚಕ್ಕೆ ಸಾರಿದ ಮಹರ್ಷಿ ವಾಲ್ಮೀಕಿ ಅವರು ಎಲ್ಲರಿಗೂ ಆದರಣೀಯ ಪುರುಷ ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ ಎಚ್ ಸಿ ಮಹದೇವಪ್ಪ ತಿಳಿಸಿದರು.

ಮೈಸೂರು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಮತ್ತು ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮ ಹಾಗೂ ನಾಯಕ ಜನಾಂಗದ ಸಂಘಗಳ ಸಂಯುಕ್ತಾಶ್ರಯದಲ್ಲಿ ಶನಿವಾರ ಕಲಾಮಂದಿರದಲ್ಲಿ ನಡೆದ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು.

“ಮಹರ್ಷಿ ರಾಮಾಯಣವು ಪ್ರಪಂಚದಲ್ಲೇ ಒಂದು ಮಹಾಕಾವ್ಯ. ಈ ಕಾವ್ಯಕ್ಕೆ ಪರ್ಯಾಯವಾಗಿ ಮತ್ತೊಂದು ಕಾವ್ಯ ಬರಲಿಲ್ಲ. ಬೆಟ್ಟ, ಗುಡ್ಡ, ಕಾಡು, ಮೇಡುಗಳಲ್ಲಿ ಅಲೆದಾಡಿ ಅಂತಹ ಕಾವ್ಯ ರಚಿಸಿದ್ದು ನಾವೆಲ್ಲರೂ ಹೆಮ್ಮೆ ಪಡುವ ಸಂಗತಿ. ಮಹರ್ಷಿ ಅವರ ಸಂಸ್ಕಾರ, ಸಂಸ್ಕೃತಿ, ಮಾನವೀಯ ಮೌಲ್ಯಗಳು, ಮುಂದಾಲೋಚನೆಯು ಶೋಷಿತ ವರ್ಗಗಳು ಹಾಗೂ ತುಳಿತಕ್ಕೊಳಗಾದ ಸಮುದಾಯಗಳಿಗೆ ಮಾರ್ಗದರ್ಶನವಾಗಲಿ” ಎಂದು ಆಶಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ರಾಮನ ವ್ಯಕ್ತಿತ್ವವನ್ನು ಚಿತ್ರಿಸಿದವರು ಮಹರ್ಷಿ ವಾಲ್ಮೀಕಿ. ರಾಮಾಯಣದಲ್ಲಿನ ಸೀತೆ, ಲಕ್ಷ್ಮಣ, ರಾವಣ, ಆಂಜನೇಯ ಸೇರಿದಂತೆ ವಿಭಿನ್ನವಾದ ಪಾತ್ರಗಳನ್ನು ಸೃಷ್ಟಿಸಿದ್ದಾರೆ. ಈ ಎಲ್ಲ ಪಾತ್ರಗಳು ಮನುಷ್ಯನ ಜೀವನಕ್ಕೆ ಹತ್ತಿರ ಮತ್ತು ಪೂರಕವಾಗುವಂತಿವೆ. ಆಡಳಿತ, ಪ್ರೀತಿ, ತ್ಯಾಗ, ನಾಯಕತ್ವ, ದುಷ್ಟ ಸಂಹಾರ, ಶಿಷ್ಟ ರಕ್ಷಣೆ, ಪಿತೃ ಪರಿಪಾಲನೆ, ಕೊಟ್ಟ ಮಾತಿಗೆ ನಡೆಯುವ ಎಲ್ಲ ಗುಣಗಳು ಮನುಷ್ಯನ ಜೀವನಕ್ಕೆ ಅತ್ಯಂತ ಆದರ್ಶವಾಗಿದೆ” ಎಂದರು.

“ಮಹರ್ಷಿ ವಾಲ್ಮೀಕಿ ಅವರ ಇತಿಹಾಸ ತಿಳಿಯದೆ ಇನ್ನೊಂದು ಇತಿಹಾಸ ನಿರ್ಮಿಸಲು ಸಾಧ್ಯವಿಲ್ಲ. ರಾಮಾಯಣ ಎಂಬ ಶ್ರೇಷ್ಠ ಕಾವ್ಯದಲ್ಲಿ ವಿಭಿನ್ನವಾದ ಪಾತ್ರಗಳ ಮೂಲಕ ಮನುಷ್ಯನ ಬದುಕನ್ನು ವಿಶ್ಲೇಷಣೆ ಮಾಡಿದ್ದಾರೆ. ಜೀವನಕ್ಕೆ ಹಾಗೂ ನೈಜತೆಗೆ ಹತ್ತಿರವಾದ ವಿಷಯಗಳನ್ನು ತಿಳಿಸಿದ್ದಾರೆ. ಈ ಆಧಾರದಲ್ಲಿ ಬದುಕು, ಪ್ರೀತಿ, ಸಂಸ್ಕೃತಿ ಹಾಗೂ ಸಂಸ್ಕಾರವನ್ನು ಕಟ್ಟಿಕೊಳ್ಳುವುದು ನಮ್ಮ ಆದ್ಯ ಕರ್ತವ್ಯವಾಗಿದೆ” ಎಂದು ಕರೆ ನೀಡಿದರು‌.

“ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ಸರ್ಕಾರವು ಮಹರ್ಷಿ ವಾಲ್ಮೀಕಿ ಅವರ ಜಯಂತಿ ಆಚರಣೆ ಘೋಷಣೆ ಮಾಡಿತು. ಎಸ್‌ಸಿ/ಎಸ್‌ಟಿ ಸಮುದಾಯಕ್ಕೆ ಅನುಕೂಲವಾಗುವ ಕಾನೂನುಗಳನ್ನು ಜಾರಿ ಮಾಡಲಾಯಿತು. ಈ ಸಮುದಾಯದ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ನೀಡುವಂತೆ ಒತ್ತಾಯಿಸಿದ್ದೇವೆ. 1994ರಲ್ಲಿ ನಾಯಕ ಸಮುದಾಯವನ್ನು ಎಸ್‌ಟಿಗೆ ಸೇರಿಸುವಂತೆ ನಮ್ಮ ಸಚಿವ ಸಂಪುಟವು ಬೆಂಬಲ ನೀಡಿತ್ತು” ಎಂದು ಸ್ಮರಿಸಿದರು.

“ವಾಲ್ಮೀಕಿ, ನಾಯಕ, ಪರಿವಾರ ಎಲ್ಲವೂ ಪರ್ಯಾಯ ಪದಗಳು. ಈ ಗೊಂದಲ ಕುರಿತು ಹೋರಾಟಗಾರರ ಮನವಿ ಮೇರೆಗೆ ನಮ್ಮ ಸಚಿವ ಸಂಪುಟದಲ್ಲಿ ಚರ್ಚಿಸಿ ಎಲ್ಲ ನ್ಯೂನತೆಗಳನ್ನು ಸರಿಪಡಿಸಲಾಗುವುದು. ವಾಲ್ಮೀಕಿ ಮಹರ್ಷಿ ಪ್ರತಿಮೆಯನ್ನು ಉದ್ಯಾನದಲ್ಲಿ ಕಾನೂನಾತ್ಮವಾಗಿ ನಿರ್ಮಿಸಿ ಅವರಿಗೆ ಗೌರವ ಸಲ್ಲಿಸುವ ಪ್ರಯತ್ನ ಮಾಡಲಾಗುವುದು” ಎಂದು ಭರವಸೆ ನೀಡಿದರು.

“ನಮ್ಮ ಸರ್ಕಾರವು ಜಾರಿ ಮಾಡಿರುವ ಗ್ಯಾರಂಟಿ ಯೋಜನೆಗಳು ಗ್ರಾಮೀಣ ಭಾಗದ ಎಲ್ಲ ವರ್ಗದವರಿಗೆ ಅನುಕೂಲವಾಗಿವೆ. ಎಸ್‌ಸಿಎಸ್‌ಪಿ ಮತ್ತು ಟಿಎಸ್‌ಪಿ ಕಾಯ್ದೆಯ ಆಶಯಗಳನ್ನು ಯೋಜನಾತ್ಮಕವಾಗಿ ಸಮುದಾಯದ ಜನರಿಗೆ ಉಪಯೋಗಿಸಲು ಕ್ರಮ ಕೈಗೊಳ್ಳಲಾಗುವುದು” ಎಂದು ತಿಳಿಸಿದರು.

ಕಾರ್ಯಕ್ರಮಕ್ಕೂ ಮುನ್ನ ಅರಮನೆ ಕೋಟೆ ಆಂಜನೇಯಸ್ವಾಮಿ ದೇವಸ್ಥಾನದಿಂದ ಆಕರ್ಷಕ ಸ್ತಬ್ಧಚಿತ್ರಗಳು ಹಾಗೂ ಕಲಾತಂಡಗಳ ಮೆರವಣಿಗೆಯು ಕಲಾಮಂದಿರದವರೆಗೆ ಸಾಗಿತು.

ಈ ಸುದ್ದಿ ಓದಿದ್ದೀರಾ? ಗದಗ | ಮಹರ್ಷಿ ವಾಲ್ಮೀಕಿ ಜಯಂತಿ 

ಕಾರ್ಯಕ್ರಮದಲ್ಲಿ ಶಾಸಕ ಜಿ ಟಿ ದೇವೇಗೌಡ, ಹರೀಶ್ ಗೌಡ, ಶ್ರೀವತ್ಸ, ವಿಧಾನ ಪರಿಷತ್ ಸದಸ್ಯ ಡಾ ಡಿ ತಿಮ್ಮಯ್ಯ, ಸಿ ಎನ್ ಮಂಜೇಗೌಡ, ಮೇಯರ್ ಶಿವಕುಮಾರ್, ಉಪಮೇಯರ್ ಡಾ ಜಿ ರೂಪ, ಜಿಲ್ಲಾಧಿಕಾರಿ ಡಾ. ಕೆ ವಿ ರಾಜೇಂದ್ರ, ಪ್ರಾಧ್ಯಾಪಕ ಡಾ. ಪ್ರಶಾಂತ್ ನಾಯಕ್, ಸಮಾಜ ಕಲ್ಯಾಣ ಜಂಟಿ ನಿರ್ದೇಶಕ ರಂಗೇಗೌಡ, ಯೋಜನಾ ಸಮನ್ವಯಾಧಿಕಾರಿ ಎನ್ ಮುನಿರಾಜು ಸೇರಿದಂತೆ ಇತರರು ಇದ್ದರು‌.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...