ಮೈಸೂರು | ನಾಡಹಬ್ಬ ದಸರಾಕ್ಕೆ ಹೊರಟ ಗಜ ಪಯಣಕ್ಕೆ ಸಚಿವ ಈಶ್ವರ್‌ ಖಂಡ್ರೆ ಚಾಲನೆ

Date:

ವಿಶ್ವ ವಿಖ್ಯಾತ ನಾಡಹಬ್ಬ ದಸರಾದಲ್ಲಿ ಪಾಲ್ಗೊಳ್ಳುವ ಗಜಪಯಣಕ್ಕೆ ಹುಣಸೂರು‌‌ ತಾಲೂಕಿನ ವೀರನಹೊಸಹಳ್ಳಿಯಲ್ಲಿ ಮೈಸೂರು ಉಸ್ತುವಾರಿ ಸಚಿವ ಡಾ ಹೆಚ್ ಸಿ ಮಹದೇವಪ್ಪ ಮತ್ತು ಅರಣ್ಯ ಸಚಿವ ಈಶ್ವರ್‌ ಖಂಡ್ರೆ ಚಾಲನೆ ನೀಡಿದರು.

ಅಭಿಮನ್ಯು, ಭೀಮ, ಗೋಪಿ, ಧನಂಜಯ, ವರಲಕ್ಷ್ಮಿ, ಅರ್ಜುನ, ವಿಜಯ, ಮಹೇಂದ್ರ, ಕಂಜನ್ ಆನೆಗಳಿಗೆ ಪುಷ್ಪಾರ್ಚನೆ ಮಾಡಿ, ಫಲತಾಂಬೂಲ ನೀಡಿ, ಕಲಾ ತಂಡಗಳು, ಮಂಗಳವಾದ್ಯಗಳ ಜೊತೆಗೆ ವರುಣನ ಸಿಂಚನದ ನಡುವೆ ಗಜಪಡೆಗಳು ಕಾಡಿನಿಂದ ನಾಡಿನತ್ತ ಹೆಜ್ಜೆ ಹಾಕಿದವು. ಸುತ್ತ-ಮುತ್ತಲಿನ ಗ್ರಾಮಗಳ ಮತ್ತು ಹಾಡಿಗಳ ನೂರಾರು ಮಹಿಳೆಯರು ಗಜಪಡೆಗೆ ಪೂರ್ಣಕುಂಭ ಸ್ವಾಗತ ಕೋರಿದರು.

ಈ ವೇಳೆ ಅರಣ್ಯ ಸಚಿವ ಈಶ್ವರ ಖಂಡ್ರೆ ಮಾತನಾಡಿ, “ನಾಡಹಬ್ಬ ದಸರಾ ಸಂಭ್ರಮಕ್ಕೆ ಕಾಡಿನಿಂದ ನಾಡಿನೆಡೆಗೆ ಗಜಪಯಣ ಆರಂಭವಾಗಿದೆ. ಈ ಪೈಕಿ ಒಂಬತ್ತು ಆನೆಗಳಿದ್ದು, ಎಂಟು ಈಗಾಗಲೇ ದಸರಾ ಉತ್ಸವದಲ್ಲಿ ಪಾಲ್ಗೊಂಡಿದ್ದು, ಒಂದು ಆನೆ ಹೊಸದಾಗಿ ಸೇರ್ಪಡೆಯಾಗಿದೆ. ಈ ಹಿಂದೆ ಇದ್ದ ಆನೆಗೆ ಮದ ಬಂದಿರುವ ಕಾರಣ ಹೊಸ ಆನೆಯನ್ನು ಆಯ್ಕೆ ಮಾಡಲಾಗಿದೆ. ಈ ಬಾರಿಯೂ ಅಭಿಮನ್ಯು ಅಂಬಾರಿ ಹೊರಲಿದ್ದಾನೆ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಗಜಪಯಣಕ್ಕೆ ಚಾಲನೆ ನೀಡಿ ಸಚಿವ ಡಾ ಎಚ್ ಸಿ ಮಹದೇವಪ್ಪ ಮಾತನಾಡಿ, “ಗಜಪಯಣಕ್ಕೆ ವಿಜೃಂಭಣೆಯಿಂದ ಚಾಲನೆ ನೀಡಲಾಗಿದೆ. ಜನಪ್ರತಿನಿಧಿಗಳು, ಅಧಿಕಾರಿಗಳು ಸೇರಿದಂತೆ ಎಲ್ಲರ ನೇತೃತ್ವದಲ್ಲಿ ಆನೆಗಳನ್ನು ಮೈಸೂರಿಗೆ ಕರೆತರಲಾಗುವುದು. ದಸರಾ ಯಶಸ್ವಿಯಾಗಲಿ” ಎಂದು ಶುಭ ಹಾರೈಸಿದರು.

ಈ ಸುದ್ದಿ ಓದಿದ್ದೀರಾ? ಚಾಮರಾಜನಗರ | ನಾಡಹಬ್ಬ ದಸರಾಕ್ಕೆ ಹೊರಟ ಗಜ ಪಯಣಕ್ಕೆ ಶಾಸಕ ಗಣೇಶ್ ಪ್ರಸಾದ್ ಚಾಲನೆ

“ಸೆಪ್ಟಂಬರ್ 4 ರಂದು ಅರಮನೆಗೆ ಗಜಪಡೆಗಳ ಆಗಮನವಾಗಲಿದ್ದು, ಅಂದು ಸಂಜೆ 5.30ರಿಂದ 6ರವರೆಗೆ ಕನ್ಯಾ ಲಗ್ನದಲ್ಲಿ ಗಜಪಡೆಗಳನ್ನು ಬರಮಾಡಿಕೊಳ್ಳಲಾಗುತ್ತದೆ” ಎಂದರು.

ಅಭಿಮನ್ಯು ನೇತೃತ್ವದ 9 ಗಜಪಡೆ: ಗಜಪಯಣದ ಮೊದಲ ತಂಡದಲ್ಲಿ ಈ ಬಾರಿ ಅಂಬಾರಿ ಹೊರುವ ಕ್ಯಾಪ್ಟನ್ ಅಭಿಮನ್ಯು ನೇತೃತ್ವದ 9 ಆನೆಗಳು ಆಗಮಿಸಲಿವೆ. ಇದರಲ್ಲಿ ಎರಡು ಹೆಣ್ಣಾನೆಗಳಿವೆ. ಅವುಗಳಲ್ಲಿ ಮತ್ತಿಗೋಡು ಆನೆ ಶಿಬಿರದಿಂದ ಕ್ಯಾಪ್ಟನ್ ಅಭಿಮನ್ಯು ಮತ್ತು ಮಹೇಂದ್ರ, ಬಳ್ಳೆ ಆನೆ ಶಿಬಿರದಿಂದ ಅರ್ಜುನ, ಭೀಮನಕಟ್ಟೆ ಆನೆ ಶಿಬಿರದಿಂದ ವರಲಕ್ಷ್ಮಿ, ದುಬಾರೆ ಆನೆ ಶಿಬಿರದಿಂದ ಧನಂಜಯ, ಗೋಪಿ ಹಾಗೂ ಹೆಣ್ಣಾನೆ ವಿಜಯಾ, ರಾಂಪುರ ಆನೆ ರೋಹಿತ್, ಹಿರಣ್ಯಾ ಮೊದಲು ಭಾಗವಹಿಸಲಿವೆ.

ಗಜಪಯಣ ಚಾಲನೆ ಸಮಯದಲ್ಲಿ ಶಾಸಕ ಜಿ ಟಿ ಹರೀಶ್, ಮೇಯರ್ ಶಿವಕುಮಾರ್, ಜಿಲ್ಲಾಧಿಕಾರಿ ಡಾ ಕೆ ವಿ ರಾಜೇಂದ್ರ, ಪೊಲೀಸ್ ವರಿಷ್ಠಾಧಿಕಾರಿ ಸೀಮಾ‌ ಲಾಟ್ಕರ್, ಅರಣ್ಯ ಇಲಾಖೆ ಅಧಿಕಾರಿಗಳು ಸೇರಿದಂತೆ ಹಲವರು ಇದ್ದರು.

WhatsApp Image 2025 07 12 at 17.38.34 e1752322718567
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...