ಮೈಸೂರು | ಮುಡಾ ಹಗರಣ; ಸಿಎಂ ಕುಟುಂಬದ ವಿರುದ್ಧ ಆರೋಪ ಖಂಡಿಸಿ ಕಾಂಗ್ರೆಸ್‌ ಕಾರ್ಯಕರ್ತರ ಪ್ರತಿಭಟನೆ

Date:

ಆರ್‌ಟಿಐ ಕಾರ್ಯಕರ್ತರೆಂದು ಗಂಗರಾಜು ಮತ್ತು ಸ್ನೇಹಮಹಿ ಕೃಷ್ಣರವರು ಮುಡಾ ಹಗರಣ ಕುರಿತು ಸಿಎಂ ಸಿದ್ದರಾಮಯ್ಯನವರ ಮೇಲೆ ಸುಳ್ಳು ಆರೋಪ ಮಾಡುತ್ತಿರುವುದು ಖಂಡನೀಯ ಎಂದು ಮೈಸೂರು ಗ್ರಾಮಾಂತರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಡಾ. ಬಿ ಜೆ ವಿಜಯಕುಮಾ‌ರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮೈಸೂರು ನಗರ ಪೊಲೀಸ್‌ ಕಮೀಷನರ್‌ ಅವರಿಗೆ ಸಲ್ಲಿಸಿದ ಮನವಿಯಲ್ಲಿ ಉಲ್ಲೇಖಿಸಿರುವ ಅವರು, “ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿದೆ ಎನ್ನಲಾದ ಹಗರಣದ ಕುರಿತು ತನಿಖೆ ನಡೆಸಲು ರಾಜ್ಯ ಸರ್ಕಾರ ಈಗಾಗಲೇ ನ್ಯಾಯಾಂಗ ತನಿಖೆಗೆ ವಹಿಸಿದೆ. ಪಾರ್ವತಮ್ಮ ಸಿದ್ದರಾಮಯ್ಯನವರಿಗೆ ಕೆಸರೆ ಗ್ರಾಮದ ಸರ್ವೆ ನಂ.464ರಲ್ಲಿ 3 ಎಕರೆ 16 ಗುಂಟೆ ಜಮೀನನ್ನು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಯಾವುದೇ ಅಧಿಸೂಚನೆ ಹೊರಡಿಸದೆ ಜಮೀನನ್ನು ವಶಪಡಿಸಿಕೊಂಡು ಕಾನೂನುಬಾಹಿರವಾಗಿ ಇವರ ಜಮೀನಿನಲ್ಲಿ ನಿವೇಶನಗಳನ್ನು ಮಾಡಿ ಜನರಿಗೆ ಹಂಚಿದೆ” ಎಂದು ಆರೋಪಿಸಿದ್ದಾರೆ.

ಮುಡಾ ಹಗರಣ ಆರೋಪದ ವಿರುದ್ಧ ಪ್ರತಿಭಟನೆ
ಮುಡಾ ಹಗರಣ ಆರೋಪದ ವಿರುದ್ಧ ಕಾಂಗ್ರೆಸ್‌ ಕಾರ್ಯಕರ್ತರ ಪ್ರತಿಭಟನೆ

“ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಮಾಡಿರುವ ತಪ್ಪನ್ನು ಒಪ್ಪಿಕೊಂಡು ಕಾನೂನಿನ ಅಡಿಯಲ್ಲಿ 50:50 ಅನುಪಾತದಂತೆ ಪಾರ್ವತಮ್ಮನವರಿಗೆ ಪರ್ಯಾಯವಾಗಿ ಪರಿಹಾರ ರೂಪದಲ್ಲಿ ನಿವೇಶನಗಳನ್ನು ನೀಡಿರುವುದರ ಬಗ್ಗೆ ಮಾಧ್ಯಮಗಳ ಮುಂದೆ ಸುಳ್ಳು ದಾಖಲೆಗಳನ್ನು ಪ್ರದರ್ಶಿಸಿ, ಗಂಗರಾಜು ಮತ್ತು ಸ್ನೇಹಮಯಿ ಕೃಷ್ಣರವರು ಕಳೆದ 20 ದಿನಗಳಿಂದ ಸಾಮಾಜಿಕ ಅಂತರ್ಜಾಲದಲ್ಲೂ ನಿರಂತರವಾಗಿ ಸುಳ್ಳು ಸುದ್ದಿಗಳನ್ನು ಹಬ್ಬಿಸುತ್ತಿದ್ದಾರೆ” ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಪಾರ್ವತಮ್ಮನವರ ಜಮೀನು ಅವರಿಗೆ ಸೇರಿದ್ದಲ್ಲ. ಇವರು ಸುಳ್ಳು ದಾಖಲೆಗಳನ್ನು ಸೃಷ್ಟಿಸಿಕೊಂಡು ಈ ಜಮೀನನ್ನು ತೆಗೆದುಕೊಂಡಿದ್ದಾರೆ. ದೊಡ್ಡಮಟ್ಟದ ಹಗರಣವನ್ನ ಮಾನ್ಯ ಮುಖ್ಯಮಂತ್ರಿಗಳೇ ಮಾಡಿದ್ದಾರೆಂದು, ಅಲ್ಲದೇ ಈ ಜಮೀನು ದಲಿತರಿಗೆ ಸೇರಿದ್ದು ಹಾಗೂ ಗ್ರಾಂಟೆಡ್ ಲ್ಯಾಂಡ್ ಎಂದು ಅಪಪ್ರಚಾರ ಮಾಡುತ್ತಿದ್ದಾರೆ” ಎಂದರು.

ಮುಡಾ ಹಗರಣ ಆರೋಪದ ವಿರುದ್ಧ ಪ್ರತಿಭಟನೆ
ಮುಡಾ ಹಗರಣ ಆರೋಪದ ವಿರುದ್ಧ ಪ್ರತಿಭಟನೆ

“ಜಮೀನು ದಲಿತರಿಗೆ ಸೇರಿದ್ದು ಹಾಗೂ ಗ್ರಾಂಟೆಡ್ ಲ್ಯಾಂಡ್ ಎಂಬುದಾಗಿ ಇವರಲ್ಲಿ ಏನಾದರೂ ದಾಖಲೆಗಳಿದ್ದರೆ, ಅವುಗಳನ್ನು ನ್ಯಾಯಾಂಗ ತನಿಖೆಗೆ ನೇಮಕಗೊಂಡಿರುವ ನಿವೃತ್ತ ನ್ಯಾಯಧೀಶ ದೇಸಾಯಿ ಅವರಿಗೆ ನೀಡಬೇಕು. ಅದನ್ನು ಬಿಟ್ಟು ಬಿಜೆಪಿ ಮತ್ತು ಜೆಡಿಎಸ್‌ ಮುಖಂಡರೊಡನೆ ಶಾಮೀಲಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದವರನ್ನು ನಿರಂತರವಾಗಿ ನಿಂದಿಸುತ್ತಿದ್ದಾರೆ. ಅಲ್ಲದೆ ಸುಳ್ಳು ಆರೋಪಗಳ ಮೂಲಕ ಅಪಪ್ರಚಾರ ಮಾಡಿ ನಾಡಿನ ಮುಖ್ಯಮಂತ್ರಿಯವರ ಘನತೆಗೆ ಧಕ್ಕೆ ತರುತ್ತಿದ್ದಾರೆ. ಅಲ್ಲದೆ ಕುಟುಂಬವನ್ನು ಕೆಟ್ಟದಾಗಿ ಬಿಂಬಿಸುತ್ತಿರುವುದರಿಂದ ಕೂಡಲೇ ಇವರುಗಳ ಮೇಲೆ ಕಠಿಣ ಕಾನೂನು ಕ್ರಮ ಜರುಗಿಸಬೇಕು” ಎಂದು ಆಗ್ರಹಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ನ್ಯಾಯಮೂರ್ತಿಗಳನ್ನೇ ಕೇಂದ್ರ ಸರ್ಕಾರ ಬೆದರಿಸುತ್ತಿದೆ; ಪ್ರಶಾಂತ್‌ ಭೂಷಣ್‌ ಆರೋಪ

“ಇವರುಗಳ ಹೇಳಿಕೆಗಳಿಂದ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರಲ್ಲಿ, ನಾಡಿನ ಜನರಲ್ಲಿ ಕಿಚ್ಚು ಹತ್ತಿಸುವ ಪ್ರಯತ್ನವನ್ನು ಮಾಡುತ್ತಿದ್ದು, ಜನಸಾಮಾನ್ಯರು ಮತ್ತು ಕಾರ್ಯಕರ್ತರು ಅಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಕಾರ್ಯಕರ್ತರ ಸಹನೆ ಮೀರುತ್ತಿದ್ದು, ಇಂತಹ ವ್ಯಕ್ತಿಗಳ ವಿರುದ್ಧ ಪೊಲೀಸ್‌ ಇಲಾಖೆ ಕ್ರಮವಹಿಸದಿದ್ದರೆ, ಸಮಾಜದಲ್ಲಿ ಅಶಾಂತಿ ಸೃಷ್ಟಿಸಿ, ಇವರುಗಳ ರಹಸ್ಯ ಅಜೆಂಡಾವನ್ನು ಗಲಾಟೆಗಳ ಮೂಲಕ ಈಡೇರಿಸಿಕೊಳ್ಳುವ ಪ್ರಯತ್ನಕ್ಕೆ ಉತ್ತೇಜನ ಕೊಟ್ಟಾಂತಾಗುತ್ತದೆ. ಆದ್ದರಿಂದ ಕೂಡಲೇ ಇವರುಗಳ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು” ಎಂದು ದೂರಿನಲ್ಲಿ ಒತ್ತಾಯಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...