ಮೈಸೂರು | ಮತದಾರರ ಗಮನ ಸೆಳೆಯಲು ಪಾರಂಪರಿಕ ಮತಗಟ್ಟೆ ಸ್ಥಾಪಿಸಿದ ಅಧಿಕಾರಿಗಳು

Date:

  • ಪಾರಂಪರಿಕ ಮತಗಟ್ಟೆಗಳು ಮತದಾರರನ್ನು ಪ್ರೇರೇಪಿಸುವಂತಿವೆ
  • ಡೊಳ್ಳುಕುಣಿತ ಸಾಂಸ್ಕೃತಿಕ ತಂಡ ಹೋಲುವ ಮತಗಟ್ಟೆ

ಚುನಾವಣಾ ಆಯೋಗದ ನಿರ್ದೇಶನದಂತೆ ಮತದಾನಕ್ಕಾಗಿ ಪ್ರತ್ಯೇಕ ಬೂತ್‌ಗಳನ್ನು ರಚಿಸುವುದರ ಜೊತೆಗೆ ವಿಷಯಾಧಾರಿತ ಪಾರಂಪರಿಕ ಮತಗಟ್ಟಗಳನ್ನು ಸಿದ್ಧಪಡಿಸಿದ್ದು, ಮತದಾರರ ಗಮನ ಸೆಳೆಯುವಲ್ಲಿ ಅಧಿಕಾರಿಗಳು ಇನ್ನೂ ಒಂದು ಹೆಜ್ಜೆ ಮುಂದೆ ಹೋಗುತ್ತಿದ್ದಾರೆ.

ಚಾಮರಾಜ ವಿಧಾನಸಭಾ ಕ್ಷೇತ್ರದ ಪಶ್ಚಿಮ ಮೈಸೂರಿನ ಬೂತನ್ನು ಪಾರಂಪರಿಕ ಬೂತ್ ಆಗಿ ಅಭಿವೃದ್ಧಿಪಡಿಸಲಾಗುತ್ತಿದೆ. ಮತದಾನ ಕೇಂದ್ರವನ್ನು ಪಾರಂಪರಿಕ ಕಟ್ಟಡದಂತೆ ಚಿತ್ರಿಸಲಾಗುತ್ತಿದೆ. ಮೇ 10ರಂದು ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಮತದಾರರು ತಮ್ಮ ಮತದಾನ ಮಾಡುವಂತೆ ಉತ್ತೇಜಿಸುವುದುದಕ್ಕಾಗಿ ಸರ್ಕಾರಿ ಶಾಲೆಗಳಿಗೆ ಪಾರಂಪರಿಕ ನೋಟವನ್ನು ನೀಡುತ್ತಿದ್ದಾರೆ ಎಂದು ತಿಳಿದುಬಂದಿದೆ.

“ಮತದಾನದ ಶೇಕಡಾವಾರು ಪ್ರಮಾಣವು ರಾಜ್ಯ ಸರಾಸರಿಗಿಂತ ಕಡಿಮೆ ಇರುವ ಹಲವಾರು ಮತಗಟ್ಟೆಗಳಿವೆ. ಈ ಬಾರಿ ಅಂತಹ  ಮತಗಟ್ಟೆಗಳನ್ನು ಹೆಚ್ಚಿಸಲು ಅಧಿಕಾರಿಗಳು ತಮ್ಮ ಕೈಲಾದಷ್ಟು ಪ್ರಯತ್ನಿಸುತ್ತಾರೆ” ಎಂದು ಜಿಲ್ಲಾ ಚುನಾವಣಾ ಅಧಿಕಾರಿಯಾಗಿರುವ ಜಿಲ್ಲಾಧಿಕಾರಿ ಕೆ.ವಿ.ರಾಜೇಂದ್ರ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಮಾದರಿ ನೀತಿ ಸಂಹಿತೆ ನೋಡಲ್ ಅಧಿಕಾರಿ ಮತ್ತು ಜಿಲ್ಲಾ ಪಂಚಾಯತ್ ಸಿಇಒ ಕೆ.ಎಂ.ಗಾಯತ್ರಿ ಅವರು ಮತದಾರರನ್ನು ಪ್ರೇರೇಪಿಸಲು ಹೊಸ ಯೋಜನೆಗಳನ್ನು ಹಮ್ಮಿಕೊಂಡಿದ್ದಾರೆ” ಎಂದರು.

ಈ ಸುದ್ದಿ ಓದಿದ್ದೀರಾ? ಬೀದರ್ | ಅಕ್ಕಮಹಾದೇವಿಯ ಸಂಘರ್ಷದ ಬದುಕು ಸಮಾಜಕ್ಕೆ ಮಾದರಿ: ಶಾಸಕ ಈಶ್ವರ ಖಂಡ್ರೆ

ಮೈಸೂರು ಮಹಾನಗರ ಪಾಲಿಕೆಯ ಕಾರ್ಯನಿರ್ವಾಹಕ ಎಂಜಿನಿಯರ್ ಎ.ಎಸ್.ರಂಜಿತ್ ಕುಮಾರ್ ಮಾತನಾಡಿ, “ಈ ಬಾರಿಯ ಚುನಾವಣೆಯಲ್ಲಿ ವಿಷಯಾಧಾರಿತ ಬೂತ್‌ಗಳು ಗಮನ ಸೆಳೆಯಲಿದ್ದು, ವಿ.ವಿ.ಮೊಹಲ್ಲಾದಲ್ಲಿರುವ ಶಾಲೆಯನ್ನು ಪಾರಂಪರಿಕ ಬೂತ್ ಆಗಿ ಸಿದ್ಧಗೊಳಿಸಲಾಗುತ್ತಿದೆ. ಉತ್ತರ ಮೈಸೂರಿನಲ್ಲಿ ಡೊಳ್ಳುಕುಣಿತ ಎಂಬ ಸಾಂಸ್ಕೃತಿಕ ತಂಡವನ್ನು ಹೋಲುವ ಮತ್ತೊಂದು ಶಾಲೆ ತಲೆ ಎತ್ತಲಿದೆ” ಎಂದು ತಿಳಿಸಿದರು.

“ಮತದಾರರಿಗೆ ಶೌಚಾಲಯ, ಕುಡಿಯುವ ನೀರು ಮತ್ತು ನೆರಳನ್ನು ಒದಗಿಸಲಾಗುವುದು. ಮತದಾರರನ್ನು ಮತದಾನ ಕೇಂದ್ರಗಳಲ್ಲಿ ಹೆಚ್ಚು ಸಮಯ ಕಾಯುವಂತೆ ಮಾಡದಿರುವುದು ನಮ್ಮ ಉದ್ದೇಶವಾಗಿದೆ” ಎಂದು ಅಧಿಕಾರಿ ಖಚಿತಪಡಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...