ಮೈಸೂರಿನ ಅರಮನೆ ಬಳಿ ಸಿಲಿಂಡರ್ ಸ್ಫೋಟಗೊಂಡಿದೆ. ಓರ್ವ ಸಾವನ್ನಪ್ಪಿದ್ದು, ಹಲವರಿಗೆ ಗಂಭೀರ ಗಾಯಗಳಾಗಿವೆ.
ಗುರುವಾರ ರಾತ್ರಿ ಘಟನೆ ನಡೆದಿದೆ. ಅಂಬಾವಿಲಾಸ ಅರಮನೆ ಆವರಣದ ಜಯಮಾರ್ತಾಂಡ ದ್ವಾರದ ಬಳಿ ಬಲೂನ್ ಮಾರಾಟ ಮಾಡುತ್ತಿದ್ದ ವ್ಯಾಪಾರಿಯು ನೈಟ್ರೋಜನ್ ಬಲೂನ್‌ಗಾಗಿ ಬಳಸುತ್ತಿದ್ದ ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡಿದೆ.
ಘಟನೆಯಲ್ಲಿ ಓರ್ವ ಸಾವನ್ನಪ್ಪಿದ್ದಾರೆ. ಒಟ್ಟು ನಾಲ್ಕು ಮಂದಿ ಗಂಭೀರವಾಹಿ ಗಾಯಗೊಂಡಿದ್ದಾರೆ ಎಂದು ಹೇಳಲಾಗಿದೆ. ಗಾಯಾಳುಗಳನ್ನು ಮೈಸೂರಿನ ಕೆಆರ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಅರಮನೆಯಲ್ಲಿ ಮಾಗಿ ಉತ್ಸವ ನಡೆಯುತ್ತಿದ್ದು, ಇದಕ್ಕಾಗಿ ಅರಮನೆಗೆ ದೀಪಾಲಂಕಾರ ಮಾಡಲಾಗಿತ್ತು. ಪ‍್ರವಾಸಿಗರು ಹೆಚ್ಚಿದ್ದರಿಂದ, ಬಲೂನ್ ವ್ಯಾಪಾರಿ ಅರಮನೆ ದ್ವಾರದ ಬಳಿ ಬಲೂನ್ ಮಾರಾಟ ಮಾಡುತ್ತಿದ್ದರು. ಆತ ಗ್ಯಾಸ್ ಸಿಲಿಂಡರ್ ಒಡೆದು ಈ ದುರ್ಘಟನೆ ಸಂಭವಿಸಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.




