ಮೈಸೂರು | ಚಪ್ಪಲಿಯಿಂದ ಹೊಡೆದುಕೊಂಡ ಪಿಡಿಒ

Date:

ಗ್ರಾಮ ಪಂಚಾಯತಿ ಕಚೇರಿಯಲ್ಲಿ ಪಂಚಾಯತಿ ಅಧ್ಯಕ್ಷ ಮತ್ತು ಪಿಡಿಒ ನಡುವೆ ಗಲಾಟೆ ನಡೆದಿದ್ದು, ಪಂಚಾಯತಿಯ ಪಿಡಿಒ ಡಾ. ಅನಿತಾ ಅವರು ಚಪ್ಪಲಿಯಿಂದ ಹೊಡೆದುಕೊಂಡಿರುವ ಘಟನೆ ಮೈಸೂರು ಜಿಲ್ಲೆಯಲ್ಲಿ ನಡೆದಿದೆ.

ಜಿಲ್ಲೆಯ ಹುಣಸೂರು ತಾಲೂಕಿನ ಹನಗೋಡು ಗ್ರಾಮ ಪಂಚಾಯತಿಯಲ್ಲಿ ಘಟನೆ ನಡೆದಿದೆ. ಅಭಿವೃದ್ಧಿ ಕೆಲಸಗಳ ವಿಚಾರವಾಗಿ ಅಧ್ಯಕ್ಷರು ಮತ್ತು ಪಿಡಿಒ ನಡುವೆ ಮಾತಿನ ಚಕಮಕಿ ನಡೆದಿದೆ. ಈ ವೇಳೆ, ಪಿಡಿಒ ಅನಿತಾ ಅವರು ತಮ್ಮ ಚಪ್ಪಲಿಯನ್ನು ಎತ್ತಿಕೊಂಡು ತಾವೇ ಹೊಡೆದುಕೊಂಡಿದ್ದಾರೆ.

ಹಲವು ದಿನಗಳ ಹಿಂದೆಯೇ ಘಟನೆ ನಡೆದಿದ್ದು, ಇತ್ತೀಚೆಗೆ ಘಟನೆಯ ವಿಡಿಯೋ ವೈರಲ್ ಆಗಿದ್ದು, ಪ್ರಕರಣ ಬೆಳಕಿಗೆ ಬಂದಿದೆ. ಗ್ರಾಮ ಪಂಚಾಯತಿಯಿಂದ ಸರ್ಕಾರಕ್ಕೆ ಜಮಾ ಮಾಡಬೇಕಿದ್ದ ಹಣದಲ್ಲಿ ಸುಮಾರು 50,000 ರೂ. ವ್ಯತ್ಯಾಸ ಕಂಡುಬಂದಿತ್ತು. ಈ ವಿಚಾರ ಪಂಚಾಯತಿಯ ಸಾಮಾನ್ಯ ಸಭೆಯಲ್ಲಿ ಪ್ರಸ್ತಾಪವಾಗಿತ್ತು. ಸಭೆಯಲ್ಲಿ ಪಿಡಿಒ ಅನಿತಾ ಮತ್ತು ಸಿಬ್ಬಂದಿಗಳೊಂದಿಗೆ ಅಧ್ಯಕ್ಷ ಚನ್ನಯ್ಯ ಚರ್ಚಿಸಿ, ಹಣವನ್ನು ಬ್ಯಾಂಕ್‌ ಪಾವತಿಸುವಂತೆ ತೀರ್ಮಾನಿಸಲಾಗಿತ್ತು ಎಂದು ವರದಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಭೆಯ ತೀರ್ಮಾನದಂತೆ, ಪಿಡಿಒ ಅನಿತಾ ತಮ್ಮ ಪಾಲಿನ ಹಣವನ್ನು ಪಾವತಿಸಿದ್ದರು. ಆದರೆ, ಉಳಿದ ಸಿಬ್ಬಂದಿಗಳು ಹಣ ಕೊಟ್ಟಿರಲಿಲ್ಲ. ಎಲ್ಲರ ಬಳಿಯೂ ಹಣ ಪಡೆಯುವಂತೆ ಪಿಡಿಒ ಅನಿತಾ ಅವರು ಅಧ್ಯಕ್ಷ ಚನ್ನಯ್ಯ ಅವರನ್ನು ಪ್ರಶ್ನಿಸಿದ್ದಾರೆ. ಇದೇ ವಿಚಾರವಾಗಿ ಗಲಾಟೆ ನಡೆದಿದೆ ಎಂದು ಹೇಳಲಾಗಿದೆ. ಗಲಾಟೆಯ ನಡುವೆ ಸಿಟ್ಟಾದ ಅನಿತಾ ಅವರು ತಮ್ಮ ಚಪ್ಪಲಿಯಿಂದ ತಾವೇ ಹೊಡೆದುಕೊಂಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...