ಮೈಸೂರು | ವೈದ್ಯಕೀಯ ಕಾಲೇಜುಗಳಿಗೆ ದಂಡ; ಎನ್ಎಂಸಿಯ ಏಕಪಕ್ಷೀಯ ನಡೆಗೆ ಎಐಡಿಎಸ್‌ಒ ಕಂಡನೆ

Date:

ಕರ್ನಾಟಕದ ವೈದ್ಯಕೀಯ ಕಾಲೇಜುಗಳಿಗೆ ದಂಡ ವಿಧಿಸಿರುವ ಎನ್ಎಂಸಿಯ ಏಕಪಕ್ಷೀಯ ನಡೆಯನ್ನು ಖಂಡಿಸಿ ಎಐಡಿಎಸ್‌ಒ ಮೈಸೂರು ಜಿಲ್ಲಾ ಸಮಿತಿ ಪ್ರತಿಭಟನೆ ನಡೆಸಿದೆ.

ಎಐಡಿಎಸ್‌ಒ ಕಾರ್ಯದರ್ಶಿ ಚಂದ್ರಕಲಾ ಮಾತನಾಡಿ, “ರಾಜ್ಯದ ಹಲವು ವೈದ್ಯಕೀಯ ಕಾಲೇಜುಗಳಿಗೆ ನೋಟಿಸ್ ಜಾರಿ ಮಾಡಿರುವ ಎನ್ಎಂಸಿಯು, ಕಾಲೇಜು ನಡೆಸಲು ಅಪೇಕ್ಷಿತ ಗುಣಮಟ್ಟವನ್ನು ಹೊಂದದಿರುವುದಕ್ಕೆ ದಂಡವಿಧಿಸಿದೆ. ರಾಜ್ಯದ 13 ಸರ್ಕಾರಿ ವೈದ್ಯಕೀಯ ಕಾಲೇಜು ಹಾಗೂ 11 ಖಾಸಗಿ ವೈದ್ಯಕೀಯ ಕಾಲೇಜುಗಳಿಗೆ ದಂಡ ವಿಧಿಸಿದೆ” ಎಂದರು.

“2 ಲಕ್ಷ ರೂಪಾಯಿಯಿಂದ 15 ಲಕ್ಷದವರೆಗೂ ದಂಡದ ಮೊತ್ತವಿದೆ. ವೈದ್ಯಕೀಯ ಕಾಲೇಜುಗಳು ಅಪೇಕ್ಷಿತ ಗುಣವಟ್ಟವನ್ನು ಕಾಪಾಡಲೇಬೇಕು. ಆದರೆ ಈ ರೀತಿ ದಂಡ ವಿಧಿಸುವುದು ಅತ್ಯಂತ ಅಪ್ರಜಾತಾಂತ್ರಿಕವಾಗಿದೆ. ಎನ್‌ಎಂಸಿಯ ಈ ನಡೆಯು ಗುಣಮಟ್ಟ ಶಿಕ್ಷಣದ ಮೂಲ ಉದ್ದೇಶಕ್ಕೆ ವಿರುದ್ಧವಾಗಿದೆ” ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಸಿಬ್ಬಂದಿಗಳ ಸಂಖ್ಯೆಯು ಕಡಿಮೆ ಇದ್ದು, ಮೂಲ ಸೌಕರ್ಯಗಳು ಅವಶ್ಯಕ ಮಟ್ಟದಲ್ಲಿ ಇರದಿದ್ದರೆ, ಇದರ ಜವಾಬ್ದಾರಿ ಹೊತ್ತು ಸಿಬ್ಬಂದಿಗಳನ್ನು ನೇಮಕಾತಿ ಮಾಡಿಕೊಳ್ಳುವ ಮತ್ತು ಸಮರ್ಪಕ ಸೌಕರ್ಯಗಳನ್ನು ಒದಗಿಸುವ ಜವಾಬ್ದಾರಿಯನ್ನು ಆಡಳಿತ ವರ್ಗವೇ ವಹಿಸಿಕೊಳ್ಳಬೇಕು. ಈ ನಿಟ್ಟಿನಲ್ಲಿ ಸಮರ್ಪಕ ಅನುದಾನ ಒದಗಿಸಬೇಕು. ಸರ್ಕಾರಿ ವೈದ್ಯಕೀಯ ಕಾಲೇಜುಗಳ ಅವ್ಯವಸ್ಥೆಯ ಕುರಿತು ಹಲವಾರು ವರದಿಗಳು ವಿವರಿಸಿವೆ. ರಾಜ್ಯ ಸರ್ಕಾರ ಅಥವಾ ಎನ್‌ಎಂಸಿ ಈ ಕುರಿತು ಯಾವುದೇ ಕ್ರಮ ಕೈಗೊಂಡಿಲ್ಲ. ಗುಣಮಟ್ಟವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಹಣಕಾಸು ಸಹಾಯ ಒದಗಿಸುವುದರ ಬದಲಿಗೆ ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಎನ್‌ಆರ್‌ಐ ಕೋಟ ತೆರೆದು ದುಡ್ಡು ಮಾಡಲು ಯತ್ನಿಸುತ್ತಿದೆ” ಎಂದು ದೂರಿದರು.

ಈ ಸುದ್ದಿ ಓದಿದ್ದೀರಾ? ವಿಜಯಪುರ | ಅತಿಹೆಚ್ಚು ಉದ್ಯೋಗ ಸೃಷ್ಟಿಸುವ ಕೃಷಿ ಕ್ಷೇತ್ರವನ್ನೇ ಸರ್ಕಾರ ಕಡೆಗಣಿಸುತ್ತಿವೆ: ಚಾಮರಸ ಮಾಲಿ ಪಾಟೀಲ

“ವೈದ್ಯಕೀಯ ಶಿಕ್ಷಣವನ್ನು ಉತ್ತಮಪಡಿಸುವ ತನ್ನ ಜವಾಬ್ದಾರಿಯಿಂದ ಕೈ-ತೊಳೆದುಕೊಳ್ಳುವ ಧೋರಣೆಯನ್ನು ಎನ್ಎಂಸಿಯ ಈ ನಡೆಯು ಎತ್ತಿ ತೋರಿಸುತ್ತಿದೆ. ಎಐಡಿಎಸ್ ಕರ್ನಾಟಕ ರಾಜ್ಯ ಸಮಿತಿಯು ಎನ್ಎಂಸಿಯ ಈ ಧೋರಣೆ ಖಂಡನೀಯ. ವೈದ್ಯಕೀಯ ಶಿಕ್ಷಣವನ್ನು ಅಭಿವೃದ್ಧಿಪಡಿಸಲು ರಾಜ್ಯ ಸರ್ಕಾರ ಸಮರ್ಪಕ ಹಣಕಾಸನ್ನು ಒದಗಿಸಬೇಕು. ತನ್ನದಲ್ಲದ, ಬದಲಿಗೆ ಆಳ್ವಿಕರ ಪ್ರಮಾದಕ್ಕೆ ಶಿಕ್ಷಣ ಸಂಸ್ಥೆಯ ಮೇಲೆ ದಂಡವನ್ನು ಹೇರುವುದು ಶಿಕ್ಷಣದ ಸತ್ವಕ್ಕೆ ಧಕ್ಕೆ ಉಂಟುಮಾಡುವುದರಿಂದ ಎಂದಿಗೂ ಅದು ರೂಢಿಯಾಗಬಾರದು” ಎಂದರು.

ವರದಿ : ಸ್ವಾತಿ, ಎಐಡಿಎಸ್‌ಒ ಮೈಸೂರು

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...