ಮೈಸೂರು | ಅಯೋಧ್ಯೆಯ ರಾಮ ವಿಗ್ರಹದ ಶಿಲೆಗೆ ದಂಡ?; ಗುತ್ತಿಗೆದಾರ ಶ್ರಿನಿವಾಸ್ ಸ್ಪಷ್ಟನೆ

Date:

ಅಯೋಧ್ಯೆಯ ರಾಮಮಂದಿರದಲ್ಲಿ ಪ್ರತಿಷ್ಠಾಪಿಸಲಾಗಿರುವ ರಾಮಲಲ್ಲಾ ಮೂರ್ತಿ ಕೆತ್ತನೆಗೆ ಬಳಸಿದ ಮೈಸೂರಿನ ಕಲ್ಲಿಗಾಗಿ ಗಣಿ ಮತ್ತು ಭೂವಿಜ್ಞಾನ ಇಲಾಖೆ ದಂಡ ವಿಧಿಸಿದೆ ಎಂದು ಹಲವಾರು ವದಂತಿಗಳು ಹರಿದಾಡುತ್ತಿವೆ. ಈ ಬಗ್ಗೆ ದಂಡಕ್ಕೆ ಗುರಿಯಾಗಿದ್ದ ಗುತ್ತಿಗೆದಾರ ಶ್ರಿನಿವಾಸ್‌ ನಟರಾಜ್ ಸ್ಪಷ್ಟನೆ ನೀಡಿದ್ದು, ದಂಡ ವಿಧಿಸಿರುವುದು ಹಳೆಯ ಪ್ರಕರಣ. ಅದಕ್ಕೂ, ರಾಮ ವಿಗ್ರಹಕ್ಕೂ ಸಂಬಂಧವಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

ಮೈಸೂರು ಜಿಲ್ಲೆಯ ಎಚ್.ಡಿ ಕೋಟೆ ತಾಲೂಕಿನ ಹಾರೋಹಳ್ಳಿ ಗುಜೇಗೌಡನಪುರ ಗ್ರಾಮದ ರಾಮದಾಸ್ ಎಂಬವರ ಜಮೀನಿನಲ್ಲಿ ದೊರೆತ ಕಲ್ಲಿನಿಂದ ಅಯೋಧ್ಯೆ ರಾಮಮಂದಿರಕ್ಕೆ ಬಾಲರಾಮ (ರಾಮಲಲ್ಲಾ) ವಿಗ್ರಹ ಕೆತ್ತಲಾಗಿದೆ. ಆ ಕಲ್ಲನ್ನು ಭೂಮಿಯಿಂದ ಹೊರತೆಗೆದಿದ್ದಕ್ಕೆ, ಗುತ್ತಿಗೆದಾರ ಶ್ರೀನಿವಾಸ್ ನಟರಾಜ್‌ಗೆ ಗಣಿ ಮತ್ತು ಭೂವಿಜ್ಞಾನ ಇಲಾಖೆ 80,000 ರೂ. ದಂಡ ವಿಧಿಸಿದೆ ಎಂದು ಆರೋಪಿಸಲಾಗಿತ್ತು.

ಆರೋಪಗಳ ಸಂಬಂಧ ಸ್ಪಷ್ಟನೆ ನೀಡಿರುವ ಗುತ್ತಿಗೆದಾರ ಶ್ರೀನಿವಾಸ್, “ರಾಮ ಮೂರ್ತಿಗೆ ಕಲ್ಲು ಆಯ್ಕೆಯಾಗಿದ್ದು ಆರು ತಿಂಗಳ ಹಿಂದೆಯಷ್ಟೇ. ಆದ್ರೆ, ನಾನು ದಂಡ ಪಾವತಿಸಿದ್ದು, 2022ರ ಜುಲೈ ತಿಂಗಳಿನಲ್ಲಿ. ಅನುಮತಿ ಪಡೆಯದೆ ಗಣಿಗಾರಿಕೆ ನಡೆಸಿದ್ದಕ್ಕಾಗಿ ಇಲಾಖೆ ನನಗೆ ದಂಡ ವಿಧಿಸಿತ್ತು. ರಾಮ ಮೂರ್ತಿಗೆ ಕಲ್ಲು ತೆಗೆದಿದ್ದಕ್ಕಾಗಿ ಅಲ್ಲ. ಯಾರೂ ಸುಳ್ಳು ಸುದ್ದಿ ಹರಡಬಾರದು” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ?: ಶೆಟ್ಟರ್ ನಡೆಯಿಂದ ಬೆಳಗಾವಿಯಲ್ಲಿ ಅಂಗಡಿ ಕುಟುಂಬದ ಟಿಕೆಟ್‌ ಭದ್ರ? 

2022ರಲ್ಲಿ ರಾಮದಾಸ್ ಅವರ ಜಮೀನಿನಲ್ಲಿ ನೆಲವನ್ನು ಸಮತಟ್ಟು ಮಾಡಲು ಶ್ರೀನಿವಾಸ್‌ ಅವರು ಗುತ್ತಿಗೆ ಪಡೆದಿದ್ದರು. ಈ ವೇಳೆ, ಕೆಲಸ ನಡೆಸುತ್ತಿದ್ದ ವೇಳೆ, ಜಮೀನಿನಲ್ಲಿ ಶಿಲ್ಪಗಳ ಕೆತ್ತನೆಗೆ ಯೋಗ್ಯವಾಗುವ ಕೃಷ್ಣಶಿಲೆ ದೊರೆತಿತ್ತು. ಸುಮಾರು 10 ಅಡಿ ಆಳದಲ್ಲಿ ಸಿಕ್ಕ ಭಾರೀ ಗಾತ್ರದ ಕಲ್ಲನ್ನು ಒಡೆದು ಹೊರ ತೆಗೆಯಲಾಗಿತ್ತು. ಭಾರೀ ಗಾತ್ರದ ಕಲ್ಲನ್ನು ಹೊರತೆಗೆಯಲು ಗಣಿ ಮತ್ತು ಭೂ ವಿಜ್ಞಾನ ಇಲಾಖೆಯಿಂದ ಅನುಮತಿ ಪಡೆಯಬೇಕು. ಆದರೆ, ಅವರು ಅನಮತಿ ಪಡೆಯದ ಕಾರಣ, ಅನಧಿಕೃತ ಗಣಿಗಾರಿಕೆ ನಡೆಯುತ್ತಿದೆ ಎಂದು ಇಲಾಖೆ ಗುತ್ತಿಗೆದಾರ ಶ್ರೀನಿವಾಸ್‌ಗೆ ದಂಡ ವಿಧಿಸಿತ್ತು. ಅವರು 2022ರಲ್ಲಿಯೇ ದಂಡ ಪಾವತಿಸಿದ್ದರು. ಈ ನಡುವೆ, ಆ ಕಲ್ಲನ್ನು ಇತ್ತೀಚೆಗೆ, ರಾಮಲಲ್ಲಾ ಮೂರ್ತಿ ಕೆತ್ತನೆಗೆ ಆಯ್ಕೆ ಮಾಡಲಾಗಿತ್ತು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...