ಮೈಸೂರು | ಆರ್.ಎನ್ ಕುಲಕರ್ಣಿ ಹತ್ಯೆ ಪ್ರಕರಣ; ಪ್ರಮುಖ ಆರೋಪಿಯ ಜಾಮೀನು ಅರ್ಜಿ ವಜಾ

Date:

  • 2,300 ಪುಟಗಳ ಚಾರ್ಜ್‌ಶೀಟ್ ಸಲ್ಲಿಸಿದ್ದ ಪೊಲೀಸರು
  • ಕಟ್ಟಡ ನಿರ್ಮಾಣಕ್ಕೆ ಸಂಬಂಧಿಸಿದಂತೆ ನಡೆದ ವಿವಾದಗಳೇ  ಹತ್ಯೆಗೆ ಕಾರಣ

ಮೈಸೂರು ವಿಶ್ವವಿದ್ಯಾನಿಲಯದ ಆವರಣದಲ್ಲಿ ಕಾರು ಡಿಕ್ಕಿ ಹೊಡೆದು ಮೃತಪಟ್ಟ ಗುಪ್ತಚರ ದಳದ ನಿವೃತ್ತ ಅಧಿಕಾರಿ ಆರ್.ಎನ್ ಕುಲಕರ್ಣಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಮನು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ನಗರದ ನ್ಯಾಯಾಲಯ ವಜಾಗೊಳಿಸಿದೆ.

ಪ್ರಕರಣದ ತನಿಖೆ ನಡೆಸಿದ್ದ ಮೈಸೂರು ನಗರ ಪೊಲೀಸರು ಈ ತಿಂಗಳ ಆರಂಭದಲ್ಲಿ 2,300 ಪುಟಗಳ ಚಾರ್ಜ್‌ಶೀಟ್ ಸಲ್ಲಿಸಿದ್ದರು. ಇದರಲ್ಲಿ ಫೋಟೋಗಳು, ಸಿಸಿಟಿವಿ ದೃಶ್ಯಾವಳಿಗಳು ಮತ್ತು ಹೇಳಿಕೆಗಳನ್ನು ಒಳಪಡಿಸಿದ್ದಾರೆ.

“ಪ್ರಸ್ತುತದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಪ್ರಮುಖ ಆರೋಪಿ ಜಾಮೀನು ಕೋರಿದ್ದಾರೆ. ವಾದ-ಪ್ರತಿವಾದ ಆಲಿಸಿದ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಅರ್ಜಿ ವಜಾಗೊಳಿಸಿದೆ” ಎಂದು ಕುಲಕರ್ಣಿ ಪರ ವಕೀಲ ನರೇಂದ್ರ ಗೌಡ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮೈಸೂರು ವಿಶ್ವವಿದ್ಯಾನಿಲಯದ ಮಾನಸಗಂಗೋತ್ರಿ ಕ್ಯಾಂಪಸ್‌ನಲ್ಲಿ 2022ರ ನವೆಂಬರ್ 4ರಂದು ಸಂಜೆ ವಾಕಿಂಗ್ ಮಾಡುತ್ತಿದ್ದಾಗ ವಿರುದ್ಧ ದಿಕ್ಕಿನಿಂದ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಕುಲಕರ್ಣಿ ಸಾವನ್ನಪ್ಪಿದ್ದರು.

ಘಟನೆ ನಡೆದ ಮೂರು ದಿನಗಳಲ್ಲಿ ಕೊಲೆ ಆರೋಪದ ಮೇಲೆ ನಗರ ಪೊಲೀಸರು ಮನು ಮತ್ತು ಆತನ ಸ್ನೇಹಿತ ವರುಣನನ್ನು ಬಂಧಿಸಿದ್ದರು.

ಪಶ್ಚಿಮ ಮೈಸೂರಿನ ಟಿ ಕೆ ಲೇಔಟ್‌ನಲ್ಲಿರುವ ಕುಲಕರ್ಣಿ ಅವರ ನಿವಾಸದ ಹಿಂಭಾಗದಲ್ಲಿ ಕಟ್ಟಡ ನಿರ್ಮಾಣಕ್ಕೆ ಸಂಬಂಧಿಸಿದಂತೆ ಕಾನೂನಾತ್ಮಕ ವಿವಾದಗಳು ನಡೆದಿದ್ದವು. ಎನ್ ಆರ್ ಉಪವಿಭಾಗದ ಮಾಜಿ ಎಸಿಪಿ ಶಿವಶಂಕರ್ ನೇತೃತ್ವದಲ್ಲಿ ಈ ಕುರಿತು ತನಿಖೆ ನಡೆಸಿದ ಪೊಲೀಸರು, “ಕಟ್ಟಡ ನಿರ್ಮಾಣಕ್ಕೆ ಸಂಬಂಧಿಸಿದಂತೆ ನಡೆದ ವಿವಾದಗಳೇ  ಹತ್ಯೆಗೆ ಕಾರಣವಾಗಿದೆ” ಎಂದು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...