ಮೈಸೂರು | ರೌಡಿಶೀಟರ್ ಚಂದ್ರು ಹತ್ಯೆ ಪ್ರಕರಣ; ರೌಡಿಗಳ ಮೇಲೆ ಹೆಚ್ಚಿದ ಪೊಲೀಸ್ ಕಣ್ಗಾವಲು

Date:

ರೌಡಿಶೀಟರ್ ಚಂದ್ರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರು ನಗರ ಪೊಲೀಸರು ರೌಡಿಗಳ ಚಟುವಟಿಕೆಗಳ ಮೇಲೆ ನಿಗಾ ವಹಿಸಿದ್ದು, ಸಹಾಯಕ ಪೊಲೀಸ್ ಆಯುಕ್ತರ ನೇತೃತ್ವದ ವಿಶೇಷ ತಂಡವು ರೌಡಿಗಳ ಪೂರ್ವಾಪರಗಳ ಬಗ್ಗೆ ತನಿಖೆ ನಡೆಸುತ್ತಿದೆ.

ಮೈಸೂರು ನಗರದಲ್ಲಿ ಸುಮಾರು 1,150 ರೌಡಿಗಳಿದ್ದು, ಸಮಾಜಘಾತುಕ ಶಕ್ತಿಗಳು ಮತ್ತು ಕಾನೂನುಬಾಹಿರ ಚಟುವಟಿಕೆಗಳಿಂದ, ವಿಶೇಷವಾಗಿ ರಿಯಲ್ ಎಸ್ಟೇಟ್ ವ್ಯವಹಾರಗಳಿಂದ ದೂರವಿರಲು ಪೊಲೀಸರು ಇತ್ತೀಚೆಗೆ ಎಚ್ಚರಿಕೆ ನೀಡಿದ್ದಾರೆ.

ರೌಡಿಶೀಟರ್‌ಗಳ ಮನೆ ಮೇಲೆ ನಾಲ್ಕು ಬಾರಿ ಅನಿರೀಕ್ಷಿತ ದಾಳಿ ನಡೆಸಲಾಯಿತು. ಆಯುಧಗಳನ್ನು ಇಟ್ಟುಕೊಂಡು ಸ್ಥಳೀಯರಿಗೆ ಬೆದರಿಕೆ ಹಾಕುತ್ತಿದ್ದವರನ್ನು ಮೂರರಿಂದ ಆರು ತಿಂಗಳ ಕಾಲ ಮೈಸೂರು ನಗರದಿಂದ ಗಡಿಪಾರು ಮಾಡಲಾಯಿತು. ಕಳೆದ ಐದು ತಿಂಗಳಲ್ಲಿ ಸುಮಾರು 18 ಮಂದಿ ರೌಡಿಗಳನ್ನು ಹೊರಗೆ ಕಳುಹಿಸಲಾಗಿದೆ ಎನ್ನಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇತ್ತೀಚೆಗೆ ಒಂಟಿಕೊಪ್ಪಲಿನಲ್ಲಿ ನಡೆದ ರೌಡಿಶೀಟರ್ ಚಂದ್ರು ‌ಹತ್ಯೆಯು ಸಾರ್ವಜನಿಕರು ಮತ್ತು ರೌಡಿಶೀಟರ್ ಗುಂಪುಗಳೊಂದಿಗೆ ಸಂಬಂಧ ಹೊಂದಿರುವ ರೌಡಿಗಳನ್ನು ಬೆಚ್ಚಿಬೀಳಿಸಿದೆ.

ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಈವರೆಗೆ 11 ಮಂದಿಯನ್ನು ಬಂಧಿಸಿದ್ದು, ಕಾರು ಚಾಲಕನ ಪಾತ್ರವನ್ನು ಪರಿಶೀಲಿಸಲಾಗುತ್ತಿದೆ. ಎಲ್ಲ ಆರೋಪಿಗಳನ್ನು ಅಲ್ಪಾವಧಿಯಲ್ಲಿ ಬಂಧಿಸಲಾಗಿದೆ. ಈ ಹತ್ಯೆಯಿಂದ ಪೊಲೀಸರು ಮಾದೇಶ ಮತ್ತು ಮಂಜೇಶ ಗ್ಯಾಂಗ್‌ಗಳೊಂದಿಗೆ ಸಂಬಂಧ ಹೊಂದಿರುವ ರೌಡಿಗಳ ಚಟುವಟಿಕೆಗಳನ್ನು ಸೂಕ್ಷ್ಮವಾಗಿ ಪರಿಶೀಲಿಸುತ್ತಿದ್ದಾರೆ.

“ನಗರ ಪೊಲೀಸರು ರಕ್ತಪಾತ ತಡೆಯುವಲ್ಲಿ, ಸಮಾಜ ವಿರೋಧಿ ಶಕ್ತಿಗಳೊಂದಿಗೆ ಉಕ್ಕಿನ ಮುಷ್ಠಿಯಿಂದ ಕಾರ್ಯಾಚರಣೆ ನಡೆಸುತ್ತಾರೆ” ಎಂದು ಪೊಲೀಸ್ ಆಯುಕ್ತ ರಮೇಶ್ ಬಾನೋತ್ ಹೇಳಿದರು.

ಈ ಸುದ್ದಿ ಓದಿದ್ದೀರಾ? ಚಾಮರಾಜನಗರ | ತಿಮಿಂಗಿಲ ವಾಂತಿ ಸಾಗಾಟ; ಇಬ್ಬರ ಬಂಧನ

“ಸಹಾಯಕ ಪೊಲೀಸ್ ಆಯುಕ್ತರು ಶೋಧ ಕಾರ್ಯ ಆರಂಭಿಸಿದ್ದು, ಕೊಲೆಗಳಲ್ಲಿ ಭಾಗಿಯಾಗಿರುವ ರೌಡಿಗಳ ಚಟುವಟಿಕೆಗಳ ಬಗ್ಗೆ, ವಿಶೇಷವಾಗಿ ಈ ಎರಡು ಗುಂಪುಗಳೊಂದಿಗೆ ಸಂಬಂಧ ಹೊಂದಿರುವವರ ಬಗ್ಗೆ ಆಳವಾಗಿ ತನಿಖೆ ನಡೆಸಲಿದ್ದಾರೆ. ಕಳೆದ ಎರಡು-ಮೂರು ವರ್ಷಗಳಲ್ಲಿ ಮೈಸೂರು ನಗರದಲ್ಲಿ ನಡೆದ ಕೊಲೆಗಳ ಉದ್ದೇಶಗಳನ್ನೂ ಪರಿಶೀಲಿಸಲಾಗುತ್ತಿದೆ. ಈ ಕೃತ್ಯಗಳು ಸೇಡಿನ ಉದ್ದೇಶದಿಂದ ನಡೆದಿವೆಯೇ ಎಂದು ಪರಿಶೀಲಿಸಲಾಗುತ್ತಿದೆ” ಎಂದು ಉನ್ನತ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಪೊಲೀಸರು ನಗರದ ನಿರ್ದಿಷ್ಟ ಸ್ಥಳಗಳಲ್ಲಿ ಗಸ್ತು ಚುರುಕುಗೊಳಿಸಿದ್ದು, ಗುಂಪುಗಳ ನಡುವಿನ ಘರ್ಷಣೆಯ ಎಲ್ಲ ಘಟನೆಗಳನ್ನು ಗಂಭೀರವಾಗಿ ಪರಿಗಣಿಸುತ್ತಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...