ಮೈಸೂರು | ಪಿಟಿಸಿಎಲ್ ಪರಭಾರೆ ನಿಷೇಧಿತ ಭೂಮಿ ಮಾರಾಟ; ಅಧಿಕಾರಿಗಳ ವಿರುದ್ಧ ನ.28ರಂದು ಧರಣಿ

Date:

ಮೈಸೂರು ಗ್ರಾಮಾಂತರ ತಾಲೂಕು ಬಿಳಿಕೆರೆ ವ್ಯಾಪ್ತಿಯ ಪಿಟಿಸಿಎಲ್ ಪರಭಾರೆ ನಿಷೇಧಿತ ಭೂಮಿಯನ್ನು ಮಾರಾಟ ಮಾಡಿದ್ದು, ಅಧಿಕಾರಿಗಳು ಅಧಿಕಾರ ದುರುಪಯೋಗ ಮಾಡಿದ್ದಾರೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ಹುಣಸೂರು ತಾಲೂಕು ಅಧ್ಯಕ್ಷ ಬೆಂಕಿಪುರ ಚಿಕ್ಕಣ್ಣ ಆರೋಪ ಮಾಡಿದ್ದಾರೆ.

“ಬೆಂಕಿಪುರ ಸರ್ವೇ ನಂ 60, 61, 47ರಲ್ಲಿ ಎಸ್‌ಸಿ/ಎಸ್‌ಟಿ ಜನಾಂಗದ ರೈತರಿಗೆ ದರಖಾಸ್ತು ಭೂಮಿ ಮಂಜೂರಾಗಿದ್ದು, ಬಿಳಿಕೆರೆ ಆರ್ ಐ ಮಂಜುನಾಥ್ ಯಾವುದೇ ಗ್ರಾಮ ವರದಿ ಹಾಗೂ ನಕಾಶೆಯಿಲ್ಲದೆ ಅಧಿಕಾರ ದುರ್ಬಳಕೆ ಮಾಡಿಕೊಂಡು ಅಕ್ರಮವಾಗಿ ಖಾತೆ ಮಾಡಿದ್ದಾರೆ” ಎಂದರು.

“ಬೆಂಕಿಪುರ ಸರ್ವೇ ನಂ 60, 61, 47ರಲ್ಲಿ ಸುಮಾರು 50ಕ್ಕೂ ಹೆಚ್ಚು ದರಖಾಸ್ತು ಭೂಮಿಯು ಎಸ್‌ಸಿ/ಎಸ್‌ಟಿ ಜನಾಂಗದ ರೈತರಿಗೆ ಸರ್ಕಾರದಿಂದ ಮಂಜೂರಾಗಿದ್ದು, ಕಚೇರಿಯ ದಾಖಲಾತಿಗಳು ಕಾಣೆಯಾಗಿವೆಯೆಂದು ಗೋಪಿನಾಥ್ ಎಂಬುವರು ನಕಲಿ ದಾಖಲೆಗಳನ್ನು ಮಾಡಿಸಿ ರೈತರಿಂದ ಕಡಿಮೆ ಬೆಲೆಗೆ ತೆಗೆದುಕೊಂಡು ಅಕ್ರಮವಾಗಿ ದುರಸ್ತಿ ಮಾಡಿಸಿಕೊಂಡಿರುದ್ದಾರೆ. ಇದರ ಜತೆಗೆ ಮೈಸೂರು ಮೂಲದ ಶ್ರೀಮಂತ ಉದ್ಯಮಿ ಶ್ರೀಕಾಂತ ದಾಸ್ ಇಎಸ್ಎಸ್ ಫ್ಯಾಕ್ಟರಿ ಮ್ಯಾನೇಜರ್‌ಗೆ ಗ್ರಾಮ ಲೆಕ್ಕಾಧಿಕಾರಿ ವರದಿ ಹಾಗೂ ಜಮೀನು ನಕಾಶೆಯಿಲ್ಲದೆ ಅಕ್ರಮವಾಗಿ ನಕಲಿ ದಾಖಲೆ ಸೃಷ್ಟಿಸಿ ಬಿಳಿಕೆರೆ ಆರ್ ಐ ಮಂಜುನಾಥ್ ಖಾತೆ ಮಾಡಿದ್ದಾರೆ” ಎಂದು ಬೆಂಕಿಪುರ ಚಿಕ್ಕಣ್ಣ ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
ಪಿಟಿಸಿಎಲ್‌ ನಿಷೇಧಿತ ಭೂಮಿ

ಜಿಲ್ಲಾಧ್ಯಕ್ಷ ಹೊಸೂರು ಕುಮಾರ್ ಮಾತನಾಡಿ, “ಮುಖ್ಯಮಂತ್ರಿಯವರಿಗೆ ಮನವಿ ಮೂಲಕ ದೂರು ಕೊಟ್ಟಿದ್ದು, ಅವರು ಹುಣಸೂರಿನ ಉಪ ವಿಭಾಗಾಧಿಕಾರಿಯವರಿಗೆ ತುರ್ತಾಗಿ ಕ್ರಮವಹಿಸಲು ಪತ್ರದ ಮೂಲಕ ತಿಳಿಸಿದ್ದರು. ಆದರೆ ಈವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ ಹಾಗೂ ತಾಲೂಕು ರೈತ ಸಂಘದ ಅಧ್ಯಕ್ಷ ಬೆಂಕಿಪುರ ಚಿಕ್ಕಣ್ಣ ಹಾಗೂ ಪದಾಧಿಕಾರಿಗಳು ವಿಚಾರಿಸಲು ಹೋದಾಗ ಹಗುರವಾಗಿ ಬಾಯಿಗೆ ಬಂದಂತೆ ಮಾತನಾಡಿ, ಅವಾಚ್ಯ ಶಬ್ದದಿಂದ ನಿಂದಿಸಿ, ಗೂಂಡಾಗಿರಿ ವರ್ತನೆ ತೋರಿ ಪ್ರಾಣ ಬೆದರಿಕೆ ಹಾಕಿದ್ದಾರೆ” ಎಂದರು.

“ಅಕ್ರಮ ಖಾತೆ ಮಾಡಿರುವ ವಿರುದ್ಧ ಕಾನೂನು ಶಿಸ್ತು ಕ್ರಮ ಜರುಗಿಸಿ ಸೇವೆಯಿಂದ ಅಮಾನತು ಮಾಡಿ ರೈತರ ಭೂಮಿ ಕೊಡಿಸಿ, ಅನುಕೂಲ ಮಾಡಿಕೊಡಬೇಕು” ಎಂದು ಮನವಿ ಮಾಡಿದರು.

ಈ ಸುದ್ದಿ ಓದಿದ್ದೀರಾ? ಹಾಸನ l 60 ವರ್ಷ ತುಂಬಿದ ರೈತರಿಗೆ ಪಿಂಚಣಿ ಯೋಜನೆ ಜಾರಿ ಮಾಡಬೇಕು: ರೈತ ಧರ್ಮರಾಜ್

ಪ್ರಗತಿಪರ ಸಂಘಟನೆಗಳ ಒಕ್ಕೂಟದ ಸಂಚಾಲಕ ಅತ್ತಿಕುಪ್ಪೆ ರಾಮಕೃಷ್ಣ ಮಾತನಾಡಿ, “ಬಿಳಿಕೆರೆ ಹೋಬಳಿ ವ್ಯಾಪ್ತಿಯ ಕಂದಾಯ ನಿರೀಕ್ಷಕ ಮಂಜುನಾಥ್ ಕೇಂದ್ರಸ್ಥಾನದಲ್ಲಿ ಕರ್ತವ್ಯ ನಿರ್ವಹಣೆ ಮಾಡದೆ ಇರುವುದು, ದೂರು ನೀಡಿದರೂ ಈವರೆಗೆ ಯಾವುದೇ ಕಾನೂನು ರೀತಿಯ ಕ್ರಮ ವಹಿಸದೆ ಇರುವುದು, ಬೆಂಕಿಪುರ ಚಿಕ್ಕಣ್ಣನವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಒಡ್ಡಿರುವುದು ಸೇರಿದಂತೆ ಹಲವು ಅನ್ಯಾಯಗಳನ್ನು ಖಂಡಿಸಿ ನವೆಂಬರ್ 28ರಂದು ಹುಣಸೂರಿನ ತಾಲೂಕು ಕಚೇರಿ ಎದುರು ಧರಣಿ ನಡೆಸಲಾಗುವುದು” ಎಂದರು.

“ಎಸ್‌ಸಿ/ಎಸ್‌ಟಿ ಭೂಮಿ ಪಿಟಿಸಿಯಲ್ ಪರಭಾರೆ ನಿಷಿದ್ದವಿದ್ದು, ಮಾರಾಟ ಮಾಡಲು, ಕೊಳ್ಳಲು ಅವಕಾಶವಿರುವುದಿಲ್ಲ. ಹೀಗಿರುವಾಗ ಅಧಿಕಾರಿಗಳು ಅಧಿಕಾರ ದುರುಪಯೋಗ ಮಾಡಿ ಖಾಸಗಿಯವರಿಗೆ ಖಾತೆ ಮಾಡಿದ್ದಾರೆ. ಇವರ ಮೇಲೆ ಕಾನೂನು ರೀತ್ಯಾ ಕ್ರಮ ಜರುಗಿಸಬೇಕು. ಇದೆ ಸರ್ವೇ ನಂಬರ್ ಭೂಮಿಗಳು ಹುಣಸೂರಿನ ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ಪಿಸಿಆರ್
40/2024 ದಾವೆ ಇರುವಾಗ ಇದನ್ನೆಲ್ಲ ಅಧಿಕಾರಿಗಳು ಪರಿಶೀಲಿಸದೆ, ನ್ಯಾಯಾಲಯದ ಆದೇಶ ಬರುವುದಕ್ಕೂ ಮುನ್ನ ಬೇರೆಯವರಿಗೆ ಖಾತೆ ಮಾಡಿರುವುದು ಅಕ್ಷಮ್ಯ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...